ಪ್ರತಾಪ್ ಸಿಂಹ ಮತ್ತು ಪ್ರಿಯಾಂಕ್ ಖರ್ಗೆ 
ರಾಜಕೀಯ

ಪೇಪರ್ ಸಿಂಹ ಅವರೇ.. ನಿಮ್ಮ ಮೋದಿಯವರ ವಿದ್ಯಾರ್ಹತೆ ಏನು? ನಿಮ್ಮ ಕತ್ತಲೆ ಜಗತ್ತಿನಲ್ಲಿ ಎಂತೆಂತಹ ಕರಾಳ ಕತೆಗಳ ರಹಸ್ಯ ಅಡಗಿವೆ?

ಪೇಪರ್ ಸಿಂಹ, ನಿಮ್ಮ ಕತ್ತಲೆ ಜಗತ್ತಿನಲ್ಲಿ ಎಂತೆಂತಹ ಕರಾಳ ಕತೆಗಳ ರಹಸ್ಯ ಅಡಗಿವೆ? ಕತ್ತಲೆ ಜಗತ್ತಿನ ರಹಸ್ಯಗಳ ಪುಸ್ತಕಕ್ಕೆ ನೀವು ತಡೆಯಾಜ್ಞೆ ತಂದಿರುವುದೇಕೆ? ಕತ್ತಲೆ ಜಗತ್ತಿನ ರಹಸ್ಯಗಳ ಬಗ್ಗೆ ಭಯವೇಕೆ ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರು: ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ ಸುದ್ದಿಯಲ್ಲಿರುವ ಸಲುವಾಗಿ ಮೈಸೂರಿನ ಪತ್ರಕರ್ತರ ಕೈಕಾಲು ಹಿಡಿದು ಪ್ರತಿದಿನವೂ ನನ್ನ ಪ್ರತಿಕ್ರಿಯೆ ತಗೋಳಿ ಅಂತ ಅಂಗಲಾಚುತ್ತಿದ್ದಾರೆ ಎಂಬುದು ಮಾಧ್ಯಮ ಮಿತ್ರರ ಆಫ್ ದಿ ರೆಕಾರ್ಡ್ ವರದಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಲೇವಡಿ ಮಾಡಿದ್ದಾರೆ,

ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಪ್ರಿಯಾಂಕ್ ಖರ್ಗೆ, ಎಲ್ಲಾ ವಿಷಯಕ್ಕೂ ಬಾಯಿ ಹಾಕುವ ಪ್ರತಾಪ್ ಸಿಂಹರವರು ಬಿಜೆಪಿ ಪಕ್ಷದ ಯಾವ “ಪೊಸಿಷನ್”ನಲ್ಲಿದ್ದಾರೆ ಎನ್ನುವುದನ್ನು ಮೊದಲು ಸ್ಪಷ್ಟಪಡಿಸಬೇಕು!

ನನ್ನ ಅರ್ಹತೆಯನ್ನು ಪ್ರಶ್ನಿಸುವ ಪ್ರತಾಪ್ ಸಿಂಹರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿದ್ದು ಅವರಿಗೆ ಅರ್ಹತೆ ಇಲ್ಲದ್ದಕ್ಕೆ ಅಲ್ಲವೇ? ನನ್ನ ಅರ್ಹತೆಯ ಬಗ್ಗೆ, ಇಲಾಖೆಗಳಲ್ಲಿ ನನ್ನ ಕಾರ್ಯವೈಖರಿಯ ಬಗ್ಗೆ ನಾನು ಹೇಳಿಕೊಳ್ಳುವುದಕ್ಕಿಂತ ಬಿಜೆಪಿಯ ಕೇಂದ್ರ ಸರ್ಕಾರದ ದಾಖಲೆಗಳು, ಅಂಕಿ ಅಂಶಗಳು ಹೇಳುತ್ತವೆ ಎಂದಿದ್ದಾರೆ.

ಪಂಚಾಯತ್ ರಾಜ್ ವಿಕೇಂದ್ರಿಕರಣದಲ್ಲಿ ಕರ್ನಾಟಕ ನಂ1 ಸ್ಥಾನದಲ್ಲಿದೆ ಎಂದು ಹೇಳಿದ್ದು ಕೇಂದ್ರ ಸರ್ಕಾರ. ಕರ್ನಾಟಕದ ಗ್ರಾಮ ಪಂಚಾಯಿತಿಗಳು ತೆರಿಗೆ ಸಂಗ್ರಹದಲ್ಲಿ ದಾಖಲೆಯ ಸಾಧನೆ ಮಾಡಿದೆ ಎಂದು ಒಪ್ಪಿಕೊಂಡಿದ್ದು ಕೇಂದ್ರ ಸರ್ಕಾರ.

ಐಟಿ ರಫ್ತಿನಲ್ಲಿ 38% ಪಾಲು ಹೊಂದುವ ಮೂಲಕ ಕರ್ನಾಟಕ ದೇಶದಲ್ಲೇ ಪ್ರಥಮ ಸ್ಥಾನದಲ್ಲಿದೆ, ಅತಿ ಹೆಚ್ಚು R&D ಕೇಂದ್ರಗಳನ್ನು ಹೊಂದುವ ಮೂಲಕ ನವೋಧ್ಯಮಗಳಿಗೆ ಉತ್ತೇಜನ ನೀಡುವ ಪ್ರಥಮ ರಾಜ್ಯ ಕರ್ನಾಟಕ. ಪ್ರತಾಪ್ ಸಿಂಹ ಅವರು ಒಂದಿಷ್ಟು ಅಧ್ಯಯನ ನಡೆಸುವ, ಆಗುಹೋಗುಗಳ ಸುದ್ದಿಯನ್ನು ಓದುವ ಅಭ್ಯಾಸ ಹೊಂದಿದ್ದರೆ ಇದೆಲ್ಲವೂ ತಿಳಿಯುತ್ತಿತ್ತು ಎಂದು ಟೀಕಿಸಿದ್ದಾರೆ.

ಅಂದ ಹಾಗೆ ಪ್ರತಾಪ್ ಸಿಂಹ ಅವರೇ, ನಿಮ್ಮ ನರೇಂದ್ರ ಮೋದಿಯವರ ವಿದ್ಯಾರ್ಹತೆ ಏನು? ಸರ್ಟಿಫಿಕೇಟ್ ಎಲ್ಲಿ? ಪೇಪರ್ ಸಿಂಹ, ನಿಮ್ಮ ಕತ್ತಲೆ ಜಗತ್ತಿನಲ್ಲಿ ಎಂತೆಂತಹ ಕರಾಳ ಕತೆಗಳ ರಹಸ್ಯ ಅಡಗಿವೆ? ಕತ್ತಲೆ ಜಗತ್ತಿನ ರಹಸ್ಯಗಳ ಪುಸ್ತಕಕ್ಕೆ ನೀವು ತಡೆಯಾಜ್ಞೆ ತಂದಿರುವುದೇಕೆ? ಕತ್ತಲೆ ಜಗತ್ತಿನ ರಹಸ್ಯಗಳ ಬಗ್ಗೆ ಭಯವೇಕೆ ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸ್ಪರ್ಧೆಗಳ ಸಂಕೀರ್ಣ ಸಮಯಗಳೊಂದಿಗೆ ಜಗತ್ತು ಹೋರಾಡುತ್ತಿದ್ದು, ಭಯೋತ್ಪಾದನೆ ವಿಚಾರದಲ್ಲಿ ರಾಜಿ ಇಲ್ಲ': ಜೈಶಂಕರ್ ಖಡಕ್ ಸಂದೇಶ

'ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದರೆ 5 ವರ್ಷ ಕಾಲ ನಾನೇ ಮುಖ್ಯಮಂತ್ರಿ': ಸಿದ್ದರಾಮಯ್ಯ ಮಾರ್ಮಿಕ ಹೇಳಿಕೆ!

ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್‌: 145 ಕೆಜಿ ತೂಕ ಎತ್ತಿ ಪದಕ ಪಡೆದ 7 ತಿಂಗಳ ಗರ್ಭಿಣಿ; ದೆಹಲಿ ಪೊಲೀಸ್ ಕಾನ್ಸ್‌ಟೇಬಲ್ ಸಾಧನೆಗೆ ಅಭಿನಂದನೆಗಳ ಮಹಾಪೂರ!

ಮೊನ್ನೆ ನೇಮಕ ಇಂದು RSS ಕಾರ್ಯಕರ್ತನ ಹೆಸರು ತೆಗೆದು ಹಾಕಿದ ಸರ್ಕಾರ; ಸಿಎಂ ಸಿದ್ದರಾಮಯ್ಯಗೆ ಕ್ಷಮೆ!

Bengaluru: ಡೆಲಿವರಿ ನೆಪದಲ್ಲಿ ಬ್ರೆಜಿಲ್ ಮಾಡೆಲ್ ಗೆ ಲೈಂಗಿಕ ಕಿರುಕುಳ; ಏಜೆಂಟ್ ಬಂಧನ

SCROLL FOR NEXT