ಎಚ್ ವಿಶ್ವನಾಥ್ 
ರಾಜಕೀಯ

ಶಿವಕುಮಾರ್‌ CM ಆಗಲೇಬೇಕು; ಅನಾಗರಿಕರಂತೆ ವರ್ತಿಸುತ್ತಿರುವ ಪ್ರದೀಪ್ ಈಶ್ವರ್ -ಪ್ರತಾಪ್ ಸಿಂಹನನ್ನು ಒದ್ದು ಒಳಗೆ ಹಾಕಬೇಕು: ವಿಶ್ವನಾಥ್

ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಕಟ್ಟಲು ಹಾಗೂ ಕಳೆದ ಚುನಾವಣೆಯಲ್ಲಿ ಅಧಿಕಾರಕ್ಕೆ ತರಲು ಶಿವಕುಮಾರ್‌ ದೊಡ್ಡ ಕೊಡುಗೆ ನೀಡಿದ್ದಾರೆ. ಹೀಗಾಗಿ ಮುಖ್ಯಮಂತ್ರಿಯಾಗಲು ಅರ್ಹರಾಗಿದ್ದಾರೆ ಎಂದರು.

ಮೈಸೂರು: ಅಧಿಕಾರ ಹಂಚಿಕೆ ಆಗಲೇಬೇಕು, ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿ ಆಗಲೇಬೇಕು ಎಂದು ವಿಧಾನಪರಿಷತ್ ಬಿಜೆಪಿ ಸದಸ್ಯ ಎ.ಎಚ್. ವಿಶ್ವನಾಥ್‌ ಹೇಳಿದರು.

ಮೈಸೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಕಟ್ಟಲು ಹಾಗೂ ಕಳೆದ ಚುನಾವಣೆಯಲ್ಲಿ ಅಧಿಕಾರಕ್ಕೆ ತರಲು ಶಿವಕುಮಾರ್‌ ದೊಡ್ಡ ಕೊಡುಗೆ ನೀಡಿದ್ದಾರೆ. ಹೀಗಾಗಿ ಮುಖ್ಯಮಂತ್ರಿಯಾಗಲು ಅರ್ಹರಾಗಿದ್ದಾರೆ ಎಂದರು.

ಕಳೆದ (2023) ವಿಧಾನಸಭಾ ಚುನಾವಣೆಗೆ ಮೊದಲು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದ ವಿಶ್ವನಾಥ್ ಅವರನ್ನು ಹಿಂದಿನ ಬಿಜೆಪಿ ಸರ್ಕಾರ ಬಿ ಎಸ್ ಯಡಿಯೂರಪ್ಪ ಸಿಎಂ ಆಗಿದ್ದಾಗ ಎಂಎಲ್ ಸಿ ಯಾಗಿ ನಾಮನಿರ್ದೇಶನ ಮಾಡಿತ್ತು. ಆದರೆ ಕಳೆದ (2024) ಲೋಕಸಭಾ ಚುನಾವಣೆಯ ನಂತರ ವಿಶ್ವನಾಥ್ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಬೆಂಬಲಿಸಿ ಹೇಳಿಕೆಗಳನ್ನು ನೀಡಲು ಪ್ರಾರಂಭಿಸಿದರು. ಬಿಹಾರ ಚುನಾವಣೆಯ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಶಿವಕುಮಾರ್ ಅವರಿಗೆ ದಾರಿ ಮಾಡಿಕೊಡಬೇಕಾಗುತ್ತದೆ ಎಂಬ ಮಾತುಕತೆಯ ಹಿನ್ನೆಲೆಯಲ್ಲಿ ವಿಶ್ವನಾಥ್ ಹೇಳಿಕೆ ನೀಡಿದ್ದಾರೆ.

ಮಾಜಿ ಸಂಸದ ಪ್ರತಾಪ ಸಿಂಹ–ಶಾಸಕ ಪ್ರದೀಪ್ ಈಶ್ವರ್ ನಡುವಿನ ಹೇಳಿಕೆಗಳ ಜಟಾಪಟಿ ಅಸಹ್ಯ ಮೂಡಿಸುವಂತಿದೆ. ತಾಯಿ ಕುರಿತೆಲ್ಲಾ ಮಾತನಾಡುತ್ತಾರೆ ಎಂದರೆ ಏನರ್ಥ? ಇಂತಹ ಅನಾಗರಿಕ ಹೇಳಿಕೆಗಳು ಹಾಗೂ ಕೀಳುಮಟ್ಟದ ರಾಜಕಾರಣ ಸರಿಯಲ್ಲ. ಅವರಿಬ್ಬರನ್ನೂ ಒದ್ದು ಒಳಗೆ ಹಾಕಬೇಕು ಎಂದು ಕಿಡಿ ಕಾರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!