ಬೆಂಗಳೂರು: ಕಾಂಗ್ರೆಸ್ ಪಕ್ಷವು ಮುಂಬರುವ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆ ಸೇರಿದಂತೆ ವಿಧಾನ ಪರಿಷತ್ ಸದಸ್ಯ (MLC) ಚುನಾವಣೆಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿ ಕೆ ಶಿವಕುಮಾರ್, ರಾಜ್ಯದ ಶಿಕ್ಷಕರು ಮತ್ತು ಪದವೀಧರ ಕ್ಷೇತ್ರಗಳಿಗೆ ಎಂಎಲ್‌ಸಿ ಚುನಾವಣೆ ಮುಂದಿನ ವರ್ಷ ನಡೆಯಲಿದೆ ಎಂದರು.
ವಿಧಾನ ಪರಿಷತ್ ಸದಸ್ಯರ ಚುನಾವಣೆಗೆ ನಾವು ಸಿದ್ಧತೆ ಆರಂಭಿಸಿದ್ದೇವೆ. ಮುಂದಿನ 8-10 ದಿನಗಳಲ್ಲಿ, ನಾವು ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸುತ್ತೇವೆ. ಪಟ್ಟಿಯನ್ನು ಪಕ್ಷದ ಹೈಕಮಾಂಡ್‌ಗೆ ಅನುಮೋದನೆಗಾಗಿ ಕಳುಹಿಸುತ್ತೇವೆ ಎಂದು ಹೇಳಿದರು. ಇದಲ್ಲದೆ, ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತದಾರರ ನೋಂದಣಿಯನ್ನು ಪ್ರಾರಂಭಿಸಬೇಕು ಎಂದು ಹೇಳಿದರು.