ಕೋಲಾರ: ಸಂಪುಟ ಪುನಾರಚನೆ ಹಾಗೂ ಸಿಎಂ ಬದಲಾವಣೆ ಕುರಿತಂತೆ ಕಾಂಗ್ರೆಸ್ ಹೈಕಮಾಂಡ್‌ಗೆ ನಿರ್ಧಾರ ಕೈಗೊಳ್ಳಲಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಹೇಳಿದ್ದಾರೆ.
ಕೆಎಚ್ ಮುನಿಯಪ್ಪ ಸಿಎಂ ಆದರೆ ಸ್ವಾಗತ ಎಂಬ ಸಚಿವ ಪರಮೇಶ್ವರ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಚಿವ ಕೆ.ಎಚ್ ಮುನಿಯಪ್ಪ, ಪರಮೇಶ್ವರ್ ಅತ್ಯಂತ ಹಿರಿಯ ನಾಯಕರು. 8 ವರ್ಷ ಕೆಪಿಸಿಸಿ ಅಧ್ಯಕ್ಷರಾಗಿ ಅತ್ಯುತ್ತಮ ಆಡಳಿತ ನೀಡಿದರು. ನಾವೆಲ್ಲರೂ ಒಟ್ಟಾಗಿ ಸೇರಿ ಹೈಕಮಂಡ್ ನಿರ್ಧಾರಕ್ಕೆ ಬದ್ದ ಸಿಎಂ ಸ್ಥಾನ ತೀರ್ಮಾನ ಮಾಡುವುದು ಹೈಕಮಾಂಡ್ ನಾನು ಸಿಎಂಗೆ ರೆಡಿ ಇದ್ದೀನಿ ಎಂದು ಬರೆಯಲು ಅವಕಾಶವಿಲ್ಲ ಸಿಎಂ ಆಗುವ ಆಸೆ ಏನೂ ಇಲ್ಲ ಎಂದು ತಿಳಿಸಿದರು.
ಕೆಲವು ದಿನಗಳ ಹಿಂದೆ ಶಿವಮೊಗ್ಗದಲ್ಲಿ, ಮುನಿಯಪ್ಪ ಅವರ ಬೆಂಬಲಿಗರು ಮುನಿಯಪ್ಪ ಅವರನ್ನು ಮುಂದಿನ ಮುಖ್ಯಮಂತ್ರಿ ಎಂದು ಬಿಂಬಿಸುವ ಘೋಷಣೆಗಳನ್ನು ಕೂಗಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ, ಗೃಹ ಸಚಿವ ಜಿ. ಪರಮೇಶ್ವರ ಅವರು ಮುನಿಯಪ್ಪ ಹಿರಿಯ ನಾಯಕರು ಮತ್ತು ಏಳು ಬಾರಿ ಸಂಸತ್ತಿಗೆ ಆಯ್ಕೆಯಾಗಿದ್ದಾರೆ ಎಂದು ಹೇಳಿದ್ದರು.
ಕೋಲಾರಕ್ಕೆ ಖಾಸಗಿ ಭೇಟಿ ನೀಡಿದ ಸಂದರ್ಭದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ತಮ್ಮ ಉತ್ತಮ ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸುವುದಾಗಿ ಹೇಳಿದ್ದಾರೆ ಎಂದು ಮುನಿಯಪ್ಪ ಹೇಳಿದರು.
ಸತೀಶ್ ಜಾರಕಿಹೊಳಿ ಅವರ ಬೆಂಬಲಿಗರು ಮುಂದಿನ ಸಿಎಂ ಆಗಿ ಅವರ ಹೆಸರನ್ನು ಒತ್ತಾಯಿಸುತ್ತಿದ್ದಾರೆ ಎಂದು ಗಮನಕ್ಕೆ ತಂದಾಗ, ಮುನಿಯಪ್ಪ ಅವರು ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತ ಎಂದು ಹೇಳಿದರು.
ಶೀಘ್ರದಲ್ಲೇ ಚಿತ್ರದುರ್ಗಕ್ಕೆ ತೆರಳಿ ಅಲ್ಲಿನ ಎಲ್ಲಾ ಸಮುದಾಯದ ನಾಯಕರನ್ನು ಭೇಟಿ ಮಾಡುವುದಾಗಿ ಹೇಳಿದರು. ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ, 136 ಶಾಸಕರಿದ್ದಾರೆ ಮತ್ತು ಅವರೆಲ್ಲರೂ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಉತ್ಸುಕರಾಗಿದ್ದಾರೆ, ಆದರೆ ಬೆಳಗಾದ್ರೆ ದಾರಿತಪ್ಪಿಸುವ ಕೆಲಸ ನಡೆಯುತ್ತಿದೆ ಎಂದಿದ್ದಾರೆ.