ಡಿ.ಕೆ ಶಿವಕುಮಾರ್ 
ರಾಜಕೀಯ

ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟ ಹಣವನ್ನೇ ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ: ಡಿಕೆ ಶಿವಕುಮಾರ್

ಇದಕ್ಕೆ ಅಗತ್ಯವಾದ ಅನುದಾನವನ್ನು ಕೇಂದ್ರ ಸರ್ಕಾರದಿಂದ ಕೊಡಿಸಲಿ. ನಮ್ಮದೇ ರಾಜ್ಯದ ಸೋಮಣ್ಣ ಅವರು ಕೇಂದ್ರ ಸಚಿವರಾಗಿದ್ದಾರೆ. ಅವರ ನೆರವು ಪಡೆಯಲಿ, ಏನು ಬೇಕಾದರೂ ಮಾಡಲಿ. ಆವರು ಹೋರಾಟ ಮಾಡುವುದಾದರೆ ಮಾಡಲಿ, ಬೇಡ ಎಂದು ಹೇಳಿದವರು ಯಾರು?

ಬೆಂಗಳೂರು: ಶ್ರೀರಾಮುಲು ಅವರು ಕಾಂಗ್ರೆಸ್ ಪಕ್ಷಕ್ಕೆ ಹಣ ನೀಡಿದ್ದು, ಅದನ್ನೇ ನಾವು ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಲೇವಡಿ ಮಾಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಬಿಹಾರ ಚುನಾವಣೆಗೆ ಸಿಎಂ, ಡಿಸಿಎಂ 300 ಕೋಟಿ ರೂ. ಕಪ್ಪ ಕಾಣಿಕೆ ನೀಡಿದ್ದಾರೆ ಎಂಬ ಶ್ರೀರಾಮುಲು ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದರು. ಬಿಜೆಪಿ ನಾಯಕರಿಗೆ ಬೆಂಗಳೂರು ಅಭಿವೃದ್ಧಿ ಬಗ್ಗೆ ಕಾಳಜಿ ಇಲ್ಲ. ಅವರ ಕಾಲದಲ್ಲಿ ಬೆಂಗಳೂರು ಅಭಿವೃದ್ಧಿಗೆ ಏನು ಮಾಡಿದ್ದಾರೆ?" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ.

ಟನಲ್ ರಸ್ತೆ ಮಾಡಲು ಬಿಡುವುದಿಲ್ಲ ಎಂಬ ಸಂಸದ ತೇಜಸ್ವಿ ಸೂರ್ಯ ಅವರ ಹೇಳಿಕೆ ಬಗ್ಗೆ ಕೇಳಿದಾಗ, "ನಾನು ಈ ವಿಚಾರದಲ್ಲಿ ತಾಂತ್ರಿಕ ತಜ್ಞ ಅಲ್ಲ. ಅವರೂ ತಜ್ಞರಲ್ಲ. ಅದಕ್ಕಾಗಿಯೇ ಪ್ರತ್ಯೇಕ ತಾಂತ್ರಿಕ ತಜ್ಞರ ತಂಡವೇ ಇದೆ. ಅವರು ನಗರ ರೈಲು ಯೋಜನೆ ಮಾಡಬೇಕು ಎಂದು ಹೇಳುತ್ತಿದ್ದಾರೆ. ಅದನ್ನು ಮಾಡಲಿ, ಅದರಲ್ಲಿ ತಪ್ಪೇನು ಇಲ್ಲ.

ಇದಕ್ಕೆ ಅಗತ್ಯವಾದ ಅನುದಾನವನ್ನು ಕೇಂದ್ರ ಸರ್ಕಾರದಿಂದ ಕೊಡಿಸಲಿ. ನಮ್ಮದೇ ರಾಜ್ಯದ ಸೋಮಣ್ಣ ಅವರು ಕೇಂದ್ರ ಸಚಿವರಾಗಿದ್ದಾರೆ. ಅವರ ನೆರವು ಪಡೆಯಲಿ, ಏನು ಬೇಕಾದರೂ ಮಾಡಲಿ. ಆವರು ಹೋರಾಟ ಮಾಡುವುದಾದರೆ ಮಾಡಲಿ, ಬೇಡ ಎಂದು ಹೇಳಿದವರು ಯಾರು? ಬಿಜೆಪಿಯಲ್ಲಿ ತೇಜಸ್ವಿ ಸೂರ್ಯ ಹಾಗೂ ಅಶೋಕ್ ಹೊರತಾಗಿ ಉಳಿದ ಯಾವುದೇ ನಾಯಕರು ಮಾತನಾಡುತ್ತಿಲ್ಲ" ಎಂದು ತಿಳಿಸಿದರು.

ಸ್ಟೀಲ್ ಬ್ರಿಡ್ಜ್ ಮಾದರಿಯಲ್ಲೇ ಟನಲ್ ರಸ್ತೆ ಯೋಜನೆ ಮುರಿದು ಬೀಳುತ್ತಾ ಎಂದು ಕೇಳಿದಾಗ, "ನಾವು ನಮ್ಮ ಕೆಲಸ ಮಾಡುತ್ತೇವೆ. ನಮ್ಮ ಆಸಕ್ತಿ ನೋಡಿ ಜನರು ನಮ್ಮ ಪ್ರಯತ್ನಕ್ಕೆ ಬೆಂಬಲ ನೀಡುತ್ತಿದ್ದಾರೆ. ನಮ್ಮ ಕೆಲಸ ಅನುಷ್ಠಾನ ಆಗಲಿದೆ ಎಂಬ ವಿಶ್ವಾಸ ಇದೆ" ಎಂದರು.

ನವೆಂಬರ್ ಕ್ರಾಂತಿ, ಸಿಎಂ ಬದಲಾವಣೆ, ದಲಿತ ಸಿಎಂ ವಿಚಾರವಾಗಿ ಸಚಿವರ ಚರ್ಚೆ ಬಗ್ಗೆ ಕೇಳಿದಾಗ, "ಅನಗತ್ಯ ಮಾತನಾಡಿ ದಣಿವಾಗುವುದು ಬೇಡ ಎಂದು ಮನವಿ ಮಾಡುತ್ತೇನೆ" ಎಂದು ತಿಳಿಸಿದರು. ರಾಹುಲ್ ಗಾಂಧಿ ಅವರು ಇದೇ ತಿಂಗಳು 20ರಂದು ರಾಜ್ಯಕ್ಕೆ ಭೇಟಿ ನೀಡಿ ಕಾಂಗ್ರೆಸ್ ಕಚೇರಿ ಶಂಕುಸ್ಥಾಪನೆ ಮಾಡಲಿದ್ದಾರೆಯೇ ಎಂದು ಕೇಳಿದಾಗ, 'ಇನ್ನೂ ದಿನಾಂಕ ಅಂತಿಮವಾಗಿಲ್ಲ. ನಾನು ಮನವಿ ಸಲ್ಲಿಸಿದ್ದೇನೆ. ಕಚೇರಿ ನಿರ್ಮಾಣ ಜಾಗದ ಕಾಗದ ಪತ್ರ ಸಿದ್ಧವಾಗುತ್ತಿದೆ.

ಈ ಕಚೇರಿ ನಿರ್ಮಾಣ ವಿಚಾರದಲ್ಲಿ ಸಚಿವರು, ಸಂಸದರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಸೇರಿದಂತೆ ಯಾರ್ಯಾರು ಆಸಕ್ತಿ ತೋರಿದ್ದಾರೆ, ಯಾರು ತೋರಿಲ್ಲ ಎಂದು ವರದಿ ನೀಡುವಂತೆ ಹೈಕಮಾಂಡ್ ನಾಯಕರು ಕೇಳಿದ್ದಾರೆ. ನಾನು ವರದಿ ಸಿದ್ಧಪಡಿಸುತ್ತಿದ್ದು, ಅದನ್ನು ಕಳುಹಿಸಬೇಕು. ಆನಂತರ ಆವರು ದಿನಾಂಕ ನಿಗದಿ ಮಾಡುತ್ತಾರೆ" ಎಂದು ವಿವರಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಮೇಲ್ಮನೆ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಸಭೆ ಬಗ್ಗೆ ಮಾತನಾಡಿ, "ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಪ್ರತಿ ಕ್ಷೇತ್ರದಲ್ಲಿ ಐದಾರು ಮಂದಿ ಟಿಕೆಟ್ ಆಕಾಂಕ್ಷಿಗಳು ಇದ್ದಾರೆ. 8-10 ದಿನಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಮಾಡುತ್ತೇವೆ. ಮುಂದಿನ ಸಭೆಯಲ್ಲಿ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಚರ್ಚೆ ಮಾಡಿ ಅಭಿಪ್ರಾಯ ಪಡೆಯುತ್ತೇವೆ" ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Video: 17 ಮಕ್ಕಳು ಸೇರಿ 19 ಜನರನ್ನು ಒತ್ತೆಯಾಳಾಗಿ ಇಟ್ಟುಕೊಂಡಿದ್ದ ವ್ಯಕ್ತಿ ಮುಂಬೈ ಪೊಲೀಸ್ ಗುಂಡಿಗೆ ಬಲಿ!

2025 ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: ನಟ ಪ್ರಕಾಶ್‌ ರಾಜ್‌ ಸೇರಿ 70 ಮಂದಿ ಆಯ್ಕೆ

ಡಿಕೆಶಿ, ತೇಜಸ್ವಿ ಸೂರ್ಯ ಜಟಾಪಟಿ; ಬೆಂಗಳೂರಿನಲ್ಲಿ ಟನಲ್ ರಸ್ತೆ ಬಗ್ಗೆ ಕೇಂದ್ರ ಸಚಿವ ಖಟ್ಟರ್ ಹೇಳಿದ್ದೇನು?

ಕೇಂದ್ರದ ಬೆಳೆ ವಿಮಾ ಯೋಜನೆ: ಅನ್ನದಾತನಿಗೆ 'ಅಪಹಾಸ್ಯ'; ಕೇವಲ 3 ರೂ. ಪರಿಹಾರ, ಚೆಕ್ ಗಳ ಮೂಲಕ ಹಿಂತಿರುಗಿಸಿದ ಮಹಾರಾಷ್ಟ್ರ ರೈತರು!

ಚಿತ್ತಾಪುರದಲ್ಲಿ ಪಥ ಸಂಚಲನ: ಮತ್ತೊಂದು ಶಾಂತಿ ಸಭೆ ನಡೆಸುವಂತೆ ಹೈಕೋರ್ಟ್ ಸೂಚನೆ; RSSಗೆ ಹಿನ್ನಡೆ

SCROLL FOR NEXT