ಸಂತೋಷ್ ಲಾಡ್ 
ರಾಜಕೀಯ

ರಾಹುಲ್‌ ಗಾಂಧಿಯಂತೆ ರಾಜ್ಯಕ್ಕೆ ಸಿದ್ದರಾಮಯ್ಯ ನಾಯಕತ್ವ ಅಗತ್ಯ-ಅನಿವಾರ್ಯ: ಸಂತೋಷ್ ಲಾಡ್‌

ರಾಜ್ಯಕ್ಕೆ ಸಿದ್ದರಾಮಯ್ಯ ನಾಯಕತ್ವ ಅನಿವಾರ್ಯ. ರಾಜಕಾರಣದಲ್ಲಿ ಅವರು ಸಕ್ರಿಯವಾಗಿರಬೇಕು. ರಾಜಕಾರಣದಿಂದ ನಿವೃತ್ತಿ ಆಗಬಾರದು. ಅವರು ಚುನಾವಣೆಗೆ ನಿಲ್ಲುವುದಿಲ್ಲ ಎಂದರೂ ನಾವು ಒಪ್ಪುವುದಿಲ್ಲ ಎಂದರು.

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ರಾಹುಲ್‌ ಗಾಂಧಿ ಅನಿವಾರ್ಯ ಅಲ್ಲವೇ? ಅದೇ ರೀತಿ ಸಿದ್ದರಾಮಯ್ಯ ಕೂಡ ಅಗತ್ಯ ಮತ್ತು ಅನಿವಾರ್ಯ. ನಾಯಕತ್ವ ಬದಲಾವಣೆಯ ಅನಿವಾರ್ಯತೆ ಈಗಿಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್‌ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಸಿದ್ದರಾಮಯ್ಯ ನಾಯಕತ್ವ ಅನಿವಾರ್ಯ. ರಾಜಕಾರಣದಲ್ಲಿ ಅವರು ಸಕ್ರಿಯವಾಗಿರಬೇಕು. ರಾಜಕಾರಣದಿಂದ ನಿವೃತ್ತಿ ಆಗಬಾರದು. ಅವರು ಚುನಾವಣೆಗೆ ನಿಲ್ಲುವುದಿಲ್ಲ ಎಂದರೂ ನಾವು ಒಪ್ಪುವುದಿಲ್ಲ ಎಂದರು.

ಮುಖ್ಯಮಂತ್ರಿಯ ಆಪ್ತ ವಲಯದಲ್ಲಿರುವ ಶಾಸಕ ಕೆ.ಎನ್‌. ರಾಜಣ್ಣ ಕೂಡಾ ಇತ್ತೀಚೆಗೆ, ‘ಕಾಂಗ್ರೆಸ್‌ಗೆ ಸಿದ್ದರಾಮಯ್ಯ ಅನಿವಾರ್ಯ’ ಎಂದಿದ್ದರು. ಸಿದ್ದರಾಮಯ್ಯ ನಾಯಕತ್ವ ಬೇಕೇ ಬೇಕು. ನಿರ್ವಿವಾದವಾಗಿ ಇಡೀ ರಾಜ್ಯಕ್ಕೆ ಅವರ ನಾಯಕತ್ವ ಬೇಕು. ಅವರು ರಾಜ್ಯ ರಾಜಕಾರಣದಿಂದ ನಿವೃತ್ತಿಯಾಗದೆ, ಸಕ್ರಿಯರಾಗಿಯೇ ಇರಬೇಕು ಎಂದು ಅಭಿಪ್ರಾಯಪಟ್ಟರು.

ಮುಂದಿನ ಅವಧಿಯಲ್ಲಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸಿದ್ದರಾಮಯ್ಯ ಅವರು ಹೇಳಿದರೂ ನಾವು ಒಪ್ಪಲ್ಲ. ಅವರು ಜನಪ್ರಿಯ ನಾಯಕ. ಕಾಂಗ್ರೆಸ್ ಪಕ್ಷಕ್ಕೆ ಮುಖ ಇದ್ದಂತೆ. ಖಂಡಿತವಾಗಿಯೂ ಅವರ ಅಗತ್ಯ ಕಾಂಗ್ರೆಸ್ ಪಕ್ಷಕ್ಕೆ ಇದೆ. ರಾಜಕಾರಣದಿಂದ ಅವರು ಹೊರಗೆ ಉಳಿಯಬಾರದು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್