ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸಾಂದರ್ಭಿಕ ಚಿತ್ರ 
ರಾಜಕೀಯ

ಸಿಎಂ ಆಗಿ ಡಿಕೆಶಿ ನವೆಂಬರ್ 21ಕ್ಕೆ ಪ್ರಮಾಣ ವಚನ: ವರದಿಗಾರರ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಸಿಡಿಮಿಡಿ!

ಯಾರ್ ಹೇಳಿದ್ದು? ನಿನಗೆ ಯಾರ್ ಹೇಳಿದ್ರು? ನಿನಗೆ ಹೆಂಗೆ ಗೊತ್ತಾಯ್ತು? ಯಾವ ಪತ್ರಿಕೆ? ಯಾವ ಪತ್ರಿಕೆ ನೋಡಿದೆ ನೀನು? ನಾನು ಎಲ್ಲಾ ಪತ್ರಿಕೆ ಓದುತ್ತೇನೆ. ಯಾವುದರಲ್ಲೂ ಬಂದಿಲ್ಲ...

ಬೆಂಗಳೂರು: ನವೆಂಬರ್ 21 ಕ್ಕೆ ಸಿಎಂ ಆಗಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸುತ್ತಾರಂತೆ ಎಂಬ ವರದಿಗಾರರ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಸಿಡಿಮಿಡಿಗೊಂಡ ಪ್ರಸಂಗ ಶುಕ್ರವಾರ ನಡೆಯಿತು.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವಾಗ ಸಿಎಂಗೆ ಈ ಪ್ರಶ್ನೆ ಎದುರಾಯಿತು.

ಯಾರ್ ಹೇಳಿದ್ದು? ನಿನಗೆ ಯಾರ್ ಹೇಳಿದ್ರು? ನಿನಗೆ ಹೆಂಗೆ ಗೊತ್ತಾಯ್ತು? ಯಾವ ಪತ್ರಿಕೆ? ಯಾವ ಪತ್ರಿಕೆ ನೋಡಿದೆ ನೀನು? ನಾನು ಎಲ್ಲಾ ಪತ್ರಿಕೆ ಓದುತ್ತೇನೆ. ಯಾವುದರಲ್ಲೂ ಬಂದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಪತ್ರಿಕೆಯ ಹೆಸರು ಹೇಳಿದಾಗ, ಯಾವುದೇ ಪ್ರತಿಕ್ರಿಯೆ ನೀಡದೇ ತೆರಳಿದರು.

ನವೆಂಬರ್ ನಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಪೂರೈಸಲಿದ್ದು, ಮುಖ್ಯಮಂತ್ರಿ ಬದಲಾವಣೆ ಕೂಗು ಹೆಚ್ಚಾಗಿದೆ. ಕೆಲವರು "ನವೆಂಬರ್ ಕ್ರಾಂತಿ" ಎನ್ನುತ್ತಿದ್ದಾರೆ. "ಆದಾಗ್ಯೂ, ನಾಯಕತ್ವ ಬದಲಾವಣೆ ಚರ್ಚೆಯ ನಡುವೆ ನಾನೇ ಐದು ಪೂರ್ಣಗೊಳಿಸುವುದಾಗಿ ಸಿಎಂ ಸಿದ್ದರಾಮಯ್ಯ ಪುನರುಚ್ಚರಿಸುತ್ತಿದ್ದಾರೆ.

ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಕುರಿತು ಕೆಲ ದಿನಗಳಿಂದ ವದಂತಿಗಳು ಹಬ್ಬಿದ್ದು,, ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಅಧಿಕಾರ ಹಂಚಿಕೆ ಒಪ್ಪಂದಗಳಾಗಿರುವುದಾಗಿ ವರದಿಗಳು ಹೇಳುತ್ತವೆ.

ಮೇ 2023 ರಲ್ಲಿ ನಡೆದ ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ಸಿಎಂ ಹುದ್ದೆಗೆ ಇಬ್ಬರು ನಾಯಕರ ನಡುವೆ ತೀವ್ರ ಪೈಪೋಟಿ ಇತ್ತು. ಕಾಂಗ್ರೆಸ್ ಹೈಕಮಾಂಡ್ ಅಂತಿಮವಾಗಿ ಶಿವಕುಮಾರ್ ಅವರನ್ನು ಉಪ ಮುಖ್ಯಮಂತ್ರಿ ಹುದ್ದೆಗೆ ಒಪ್ಪಿಸಿತ್ತು. ಆ ಸಮಯದಲ್ಲಿ ಎರಡೂವರೆ ವರ್ಷಗಳ ನಂತರ ಡಿಕೆ ಶಿವಕುಮಾರ್ ಸಿಎಂ ಆಗಿ ಅಧಿಕಾರ ವಹಿಸಿಕೊಳ್ಳುತ್ತಾರೆ ಎಂಬ ಒಪ್ಪಂದ ಸೂತ್ರ ಆಗಿರುವುದಾಗಿ ಹೇಳಲಾಗಿತ್ತು. ಆದರೆ, ಇದನ್ನು ಪಕ್ಷ ಅಧಿಕೃತವಾಗಿ ಖಚಿತಪಡಿಸಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇರಾನ್ ತನ್ನ ಸಮೃದ್ಧ ಯುರೇನಿಯಂ ಸಂಗ್ರಹವನ್ನು ಹಸ್ತಾಂತರಿಸಲು ಒಪ್ಪಿಕೊಂಡಿದೆ, ಶಾಂತಿ ಒಪ್ಪಂದ ಹತ್ತಿರದಲ್ಲಿದೆ': Donald Trump

'ನನ್ನ ಸ್ನೇಹಿತ ಮೋದಿ ಜೊತೆಗೆ ಉತ್ತಮ ಮಾತುಕತೆ ನಡೆಸಿದೆ': ಡೊನಾಲ್ಡ್ ಟ್ರಂಪ್-Video

‘ಇದು ಒಂಟೆ ಕನಸಿನಂತಿದೆ’..: ಟ್ರಂಪ್ ಶಾಂತಿ ಒಪ್ಪಂದ ಹೇಳಿಕೆಗೆ ಇರಾನ್ ವ್ಯಂಗ್ಯ

ಸಂಪುಟ ಸಭೆಯಲ್ಲೂ ಸದ್ದು ಮಾಡಿದ ದಾವಣಗೆರೆ ದಂಗಲ್: ಮುಸ್ಲಿಂ ನಾಯಕರ ವಿರುದ್ಧ ಕ್ರಮಕ್ಕೆ ಸಚಿವರೇ ಆಕ್ಷೇಪ !

ಇಸ್ರೇಲ್- ಲೆಬನಾನ್ ನಡುವೆ 10 ದಿನಗಳ ಕದನ ವಿರಾಮ, ಇದು ನಾನು ನಿಲ್ಲಿಸಿದ 10 ನೇ ಯುದ್ಧ- ಟ್ರಂಪ್

SCROLL FOR NEXT