ಮೈಸೂರು: ಗಲಭೆ ಆರಂಭವಾಗಿ ಮೂರು ವರ್ಷಗಳ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಮಣಿಪುರಕ್ಕೆ ಭೇಟಿ ನೀಡಿದ್ದಾರೆ. ಅಲ್ಲಿ ಗಲಭೆ ನಡೆಯುವ ಸಂದರ್ಭದಲ್ಲಿ ಭೇಟಿ ನೀಡಿ, ಜನರ ಕಷ್ಟ ಆಲಿಸಬೇಕಿತ್ತು. ಪರಿಸ್ಥಿತಿ ಸುಧಾರಿಸಿದ ಮೇಲೆ ಭೇಟಿ ನೀಡಿದ್ದು, ವಿರೋಧ ಪಕ್ಷದವರ ಒತ್ತಡದಿಂದ ಹೋಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಹಿಂಸಾಚಾರ ಸಂಭವಿಸಿ 2 ವರ್ಷಗಳ ನಂತರ ಅದು ಕೂಡ ವಿರೋಧ ಪಕ್ಷಗಳ ಭಾರೀ ಒತ್ತಡದ ನಂತರ ಮೋದಿ ಮಣಿಪುರಕ್ಕೆ ತೆರಳಿದ್ದಾರೆ ಎಂದು ಹೇಳಿದರು. ಈಶಾನ್ಯ ರಾಜ್ಯದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಪ್ರಧಾನಿ ಎರಡು ವರ್ಷಗಳಿಗೂ ಹೆಚ್ಚು ಕಾಲ ಮೌನವಾಗಿದ್ದರು ಎಂದು ಟೀಕಿಸಿದ್ದಾರೆ.
ಬಿಜೆಪಿ ನಾಯಕರಾದ ಸಿ.ಟಿ ರವಿ, ಬಸನಗೌಡ ಯತ್ನಾಳ್ ಅವರು ಹಿಂಸೆಗೆ ಪ್ರಚೋದನೆ ನೀಡುವ ಹೇಳಿಕೆ ನೀಡಿದ ಕಾರಣಕ್ಕಾಗಿ ಅವರ ಮೇಲೆ ಎಫ್ಐಆರ್ ದಾಖಲಾಗಿದೆ. ಬಿಜೆಪಿಯವರು ಪ್ರಚೋದನಾಕಾರಿ ಭಾಷಣ ಮಾಡಿದರೆ ಸರಕಾರ ಏನು ಮಾಡಬೇಕು? ಕೈಕಟ್ಟಿ ಕೂರಲು ಆಗುತ್ತದೆಯಾ? ಸಮಾಜದ ಶಾಂತಿ ನೆಮ್ಮದಿಯನ್ನು ಕಾಪಾಡುವುದಕ್ಕಾಗಿ ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ.
ಇದು ರಾಜಕಾರಣವಲ್ಲ. ನಾವು ಯಾರನ್ನು ಟಾರ್ಗೆಟ್ ಮಾಡಿಲ್ಲ, ಮಾಡುವುದು ಇಲ್ಲ. ನಾನೂ ಕೂಡ ಒಬ್ಬ ಹಿಂದು. ನನ್ನ ಹೆಸರಿನಲ್ಲಿಯೇ ಈಶ್ವರ ಮತ್ತು ರಾಮ ಎರಡೂ ದೇವರ ಹೆಸರಿದೆ'' ಎಂದರು.
ಹಿಂದೂ ಸಮಾಜದಲ್ಲಿ ಸಮಾನತೆ ಇದ್ದಿದ್ದರೆ, ಎಲ್ಲರಿಗೂ ಸಮಾನ ಅವಕಾಶಗಳಿದ್ದರೆ ಜನ ಯಾಕೆ ಮತಾಂತರಗೊಳ್ಳುತ್ತಿದ್ದರು ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ಜಾತಿ ಗಣತಿ ವಿಚಾರವಾಗಿ ಪ್ರಶ್ನೆ ಮಾಡಿದವು. ಜಾತಿ ಗಣತಿ ಹೆಸರಲ್ಲಿ ಕಾಂಗ್ರೆಸ್ ಸರ್ಕಾರ ಹೊಸ ಹೊಸ ಜಾತಿಯನ್ನ ಸೃಷ್ಟಿ ಮಾಡ್ತಿದೆ ಎಂದು ಬಿಜೆಪಿ ನಾಯಕರು ಆರೋಪ ಮಾಡ್ತಿದ್ದಾರೆ ಎಂದು ಪ್ರಶ್ನೆ ಕೇಳಲಾಯಿತು. ಅದಕ್ಕೆ ಉತ್ತರಿಸಿದ ಸಿದ್ದರಾಮಯ್ಯ ಕೇಂದ್ರ ಸರ್ಕಾರದವರೇ ಜಾತಿ ಗಣತಿ ಮಾಡ್ತಿದ್ದಾರೆ. ಅದು ಏನು ಮಾಡುತ್ತದೆ..? ಯಾರೆಲ್ಲ ಕನ್ವರ್ಟ್ ಆಗಿದ್ದಾರೆ ಅದಕ್ಕಾಗಿ ಹೊಸ ಕಾಲಂ ಬಿಡಲಾಗಿದೆ.
ಕೆಲವು ವ್ಯವಸ್ಥೆಗಳ ಪರಿಣಾಮವಾಗಿ ಕನ್ವರ್ಟ್ ಆಗುತ್ತಾರೆ. ನಮ್ಮ ಹಿಂದೂ ಸಮಾಜದಲ್ಲಿ ಎಲ್ಲರಿಗೂ ಸಮಾನತೆ ಇದ್ದಿದ್ದರೆ ಯಾಕೆ ಮತಾಂತರ ಆಗುತ್ತಿದ್ದರು? ಹಿಂದೂ ಸಮಾಜದಲ್ಲಿ ಸಮಾನತೆ ಇದ್ದಿದ್ದರೆ, ಎಲ್ಲರಿಗೂ ಸಮಾನ ಅವಕಾಶಗಳಿದ್ದರೆ ಜನ ಯಾಕೆ ಮತಾಂತರಗೊಳ್ಳುತ್ತಿದ್ದರು. ಆಸ್ಪೃಶ್ಯತೆ ಏಕೆ ಬಂತು? ಅದನ್ನು ನಾವು ಹುಟ್ಟು ಹಾಕಿದ್ದೇವಾ? ಎಂದು ಪ್ರಶ್ನಿಸಿದರು.