ಬಸವರಾಜ ಬೊಮ್ಮಾಯಿ 
ರಾಜಕೀಯ

ಮುಖ್ಯಮಂತ್ರಿ ಕುರ್ಚಿ ಭದ್ರಪಡಿಸಿಕೊಳ್ಳಲು ಜಾತಿ ಸಮೀಕ್ಷೆ: ಸಂಸದ ಬೊಮ್ಮಾಯಿ

ಸಂವಿಧಾನದಲ್ಲಿ ಕೇವಲ ಆರು ಧರ್ಮಗಳು ಇವೆ, ಅಷ್ಟೇ ಧರ್ಮಗಳ ಹೆಸರು ಬರೆಯಬೇಕು. ರಾಜ್ಯದಲ್ಲಿ ಮತಾತಂತರಗೊಂಡ ಕ್ರೈಸ್ತರು ಅನ್ನುವ ಹೊಸ ಕಾಲಂ ಮಾಡಿದ್ದಾರೆ. ಇದೊಂದು ಧರ್ಮದ ರೀತಿ ಕಾಲಂ ಮಾಡಿದ್ದಾರೆ.

ಬೆಂಗಳೂರು: ಡಿಸೆಂಬರ್‌ನಲ್ಲಿ ನಾಯಕತ್ವ ಬದಲಾವಣೆಯಾಗಲಿದ್ದು, ಡಿಕೆ.ಶಿವಕುಮಾರ್ ಅವರು ಸಿಎಂ ಆಗುತ್ತಾರೆಂಬ ಮಾತುಗಳು ಕೇಳಿ ಬರುತ್ತಿವೆ. ಹೀಗಾಗಿ ಕುರ್ಚಿ ಗಟ್ಟಿ ಮಾಡಿಕೊಳ್ಳಲು ಸಿದ್ದರಾಮಯ್ಯ ಜಾತಿ ಗಣತಿ ಸಮೀಕ್ಷೆ ಮಾಡಿಸುತ್ತಿದ್ದಾರೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂವಿಧಾನದಲ್ಲಿ ಕೇವಲ ಆರು ಧರ್ಮಗಳು ಇವೆ, ಅಷ್ಟೇ ಧರ್ಮಗಳ ಹೆಸರು ಬರೆಯಬೇಕು. ರಾಜ್ಯದಲ್ಲಿ ಮತಾತಂತರಗೊಂಡ ಕ್ರೈಸ್ತರು ಅನ್ನುವ ಹೊಸ ಕಾಲಂ ಮಾಡಿದ್ದಾರೆ. ಇದೊಂದು ಧರ್ಮದ ರೀತಿ ಕಾಲಂ ಮಾಡಿದ್ದಾರೆ. ಇದು ಕಾನೂನು ಬಾಹಿರ, ಸಂವಿಧಾನ ಬಾಹಿರ, ರಾಜಕೀಯ ಪ್ರೇರಿತವಾಗಿದೆ. ಎರಡೂ ಕಡೆಯೂ ಮತಾಂತರ ಆಗಿರುತ್ತದೆ. ಆದರೆ, ಸಿಎಂ ಕ್ರೈಸ್ತ ಧರ್ಮದ ಮತಾಂತರಕ್ಕೆ ಮಾತ್ರ ಮನ್ನಣೆ ಕೊಟ್ಟಿರೋದೇಕೆ? ಸಿಎಂ ಅವರು ಒಂದು ಹೆಜ್ಜೆ ಮುಂದೆ ಹೋಗಿ ಮತಾಂತರ ಅವರ ಹಕ್ಕು ಎಂದು ಹೇಳಿದ್ದಾರೆಂದು ಕಿಡಿಕಾರಿದರು.

ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಲ್ಲಿದೆ. ಹಿಂದೂ ಧರ್ಮದಲ್ಲಿ ಸಮಾನತೆ ಇಲ್ಲ ಎಂದು ಸಿಎಂ‌ ಹೇಳಿದ್ದಾರೆ. ಇದು ಸಮಾನತೆ ಪ್ರಶ್ನೆ ಅಲ್ಲ, ಆಸೆ ಆಮಿಷ ಒಡ್ಡಿ ಮತಾಂತರ ಆಗಿದ್ದಾರೆ. ಅವರ ಬಡತನ, ಶಿಕ್ಷಣ ಇಲ್ಲದಿರುವುದನ್ನು ದುರುಪಯೋಗ ಪಡಿಸಿಕೊಂಡು ಮತಾಂತರ ಮಾಡಲಾಗಿದೆ. ಹಲವರು ಕ್ರೈಸ್ತಧರ್ಮದಿಂದ ವಾಪಸ್ ಬಂದಿದ್ದಾರೆ. ಈ ಮತಾತಂತರ ಬಗ್ಗೆಯೇ ಹಲವು ಅನುಮಾನಗಳಿವೆ. ಇವರಿಗೆ ಜಾತಿ ಕಾಲಂನಲ್ಲಿ ಮತಾತಂತರಗೊಂಡವರಿಗೆ ಹೊಸ ಕಾಲಂ ಮಾಡಲು ಯಾರು ಅಧಿಕಾರ ಕೊಟ್ಟರು? ಯಾವ ಕಾನೂನಿನಲ್ಲಿದೆ? ತಮ್ಮ ಅಕ್ಕಪಕ್ಕ‌ ಹಿಂದೆ ಮುಂದೆ ಇರುವವರು ಸಲಹೆ ಪಡೆದು ಅದನ್ನು ಸೇರಿಸಿದ್ದಾರೆ ಎಂದು ವ್ಯಂಗ್ಯವಾಡಿದರು.

ಇದು ಧರ್ಮಧರ್ಮ ಗಳ‌ ನಡುವೆ, ವಿಷ ಬೀಜ ಬಿತ್ತುವ, ಗಲಭೆ ಮಾಡಿಸುವ ಕೆಲಸ ಈಗಾಗಲೇ 350 ಕೋಟಿ ರೂ ಪೋಲು ಮಾಡಿದ್ದರು, ಈಗ 420 ಕೋಟಿ ಮತ್ತೆ ಪೋಲು ಮಾಡಲು ಹೊರಟಿದ್ದಾರೆ. ಸಾಮಾಜಿಕ, ಆರ್ಥಿಕ ಸಮೀಕ್ಷೆಗೆ ಜಾತಿ ಏಕೆ ಬೇಕು? ಡಿಸೆಂಬರ್ ನಲ್ಲಿ ಜಾತಿ ಜನಗಣತಿ ವರದಿ ಕೊಡಿ ಅಂತ ಆಯೋಗಕ್ಕೆ ಸಿಎಂ ಹೇಳಿದ್ದಾರೆ. ಈ ಕಡೆ ಡಿಸೆಂಬರ್ ನಲ್ಲಿ ನಾಯಕತ್ವ ಬದಲಾವಣೆ ಆಗಬೇಕು ಅಂತ ಡಿ.ಕೆ. ಶಿವಕುಮಾರ ಬಣ ಹೇಳುತ್ತಿದೆ, ಡಿಕೆಶಿ ಸಿಎಂ ಆಗುತ್ತಾರೆ ಅಂತಿದ್ದಾರೆ. ಹೀಗಾಗಿ ತಮ್ಮ ಕುರ್ಚಿ ಗಟ್ಟಿ ಮಾಡಿಕೊಳ್ಳಲು ಸಿಎಂ ಜಾತಿ ಸಮೀಕ್ಷೆ ವರದಿಯನ್ನು ರಾಜಕೀಯವಾಗಿ ಬಳಸಲು ಮುಂದಾಗಿದ್ದಾರೆಂದು ಆರೋಪಿಸಿದರು.

ವೀರಶೈವ ಲಿಂಗಾಯತ ಮಹಾಸಭೆ ಸಂಪೂರ್ಣವಾಗಿ ಕಾಂಗ್ರೆಸ್ ಮಯ ಆಗಿದೆ. ಮಹಾಸಭೆಗೆ ನನ್ನ ವಿನಂತಿ, ಕಾನೂನು, ಸಂವಿಧಾನ ಪ್ರಕಾರ ಸಲಹೆ ಮಾಡಬೇಕು. ಮಹಾಸಭೆ ಗೊಂದಲ ಸೃಷ್ಟಿಸಬಾರದು. ಒಂದು ಕಡೆ ಹೊಸ ಧರ್ಮ ಅಂತಾರೆ, ಇನ್ನೊಂದು ಕಡೆ ವೀರಶೈವ ಅಂತಾರೆ, ಲಿಂಗಾಯತ ಅಂತಾರೆ, ವೀರಶೈವ ಲಿಂಗಾಯತ ಅಂತಾರೆ. ಈ ಗೊಂದಲ ನಿವಾರಣೆ ಆಗಬೇಕು. ಇಲ್ಲದಿದ್ದರೆ ಜನ ತಮ್ಮ ತೀರ್ಮಾನ ಮಾಡುತ್ತಾರೆ. ನಾವೂ ಕೂಡಾ ಈ ವಿಚಾರದಲ್ಲಿ ಪಕ್ಷದ ಹಿರಿಯರು ಚರ್ಚೆ ಮಾಡುತ್ತಿದ್ದೇವೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Waqf Law: ಕೆಲವೊಂದು ಅಂಶಗಳಿಗೆ ತಡೆ ನೀಡಿ ಸುಪ್ರೀಂಕೋರ್ಟ್ 'ಮಧ್ಯಂತರ ಆದೇಶ' ಪ್ರಕಟ

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆಗೆ ವಿರೋಧ: ಪ್ರತಾಪ್ ಸಿಂಹಗೆ ಭಾರಿ ಹಿನ್ನಡೆ, PIL ವಜಾಗೊಳಿಸಿದ ಹೈಕೋರ್ಟ್!

ಕರ್ನಾಟಕ ಮೂಲದ ವ್ಯಕ್ತಿಯ ಶಿರಚ್ಛೇದ ಪ್ರಕರಣ: ಅಕ್ರಮ ವಲಸಿಗರ ಬಗ್ಗೆ ಮೃದು ಧೋರಣೆ ತೋರುವ ಕಾಲ ಮುಗಿದಿದೆ- ಟ್ರಂಪ್

ಗ್ರೇಟರ್ ಬೆಂಗಳೂರು ಚುನಾವಣೆಗೆ ಭದ್ರ ಬುನಾದಿ ಹಾಕುತ್ತಿರುವ ಡಿಸಿಎಂ ಡಿಕೆ ಶಿವಕುಮಾರ್!

Asia Cup 2025: ಪ್ರೀತಿ ಇಲ್ಲದ ಮೇಲೆ ಯಾವ ಹ್ಯಾಂಡ್ ಶೇಕ್.. ಡ್ರೆಸ್ಸಿಂಗ್ ರೂಮ್ ಕಡೆ ಭಾರತೀಯರು! ಪಾಕ್ ಆಟಗಾರರಿಗೆ ಹೆಜ್ಜೆ ಹೆಜ್ಜೆಗೂ ನಿರಾಸೆ! Video

SCROLL FOR NEXT