ಡಿ ಕೆ ಶಿವಕುಮಾರ್  
ರಾಜಕೀಯ

ರಾಜಕೀಯವಾಗಿ ಬದುಕಿದ್ದೇನೆಂದು ತೋರಿಸಿಕೊಳ್ಳಲು ಪ್ರತಾಪ್ ಸಿಂಹ ಪ್ರಯತ್ನ; ಮದ್ದು ಗುಂಡುಗಳಿಗಿಂತ ಮತದಾನವೇ ಬಲಾಢ್ಯ: ಡಿ.ಕೆ ಶಿವಕುಮಾರ್

ನಮ್ಮ ಸಂವಿಧಾನ ಸಮಾನತೆಯ ಸಂದೇಶ ಸಾರುತ್ತದೆ. ಎಲ್ಲಾ ಧರ್ಮಗಳಿಗೂ ಧರ್ಮದಲ್ಲಿ ಅವಕಾಶ ಕಲ್ಪಿಸಲಾಗಿದೆ. ನಾವು ಎಲ್ಲಾ ಧರ್ಮಗಳನ್ನು ಗೌರವಿಸಬೇಕು.

ಬೆಂಗಳೂರು: ಪ್ರತಾಪ್ ಸಿಂಹರಿಗೆ ಅವರ ಪಕ್ಷದಲ್ಲಿ ಟಿಕೆಟ್ ಕೊಟ್ಟಿಲ್ಲ. ಹೀಗಾಗಿ ತಾನು ರಾಜಕೀಯವಾಗಿ ಬದುಕಿದ್ದೇನೆ ಎಂದು ತೋರಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ಒಳ್ಳೆಯದಾಗಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. ನಾಡಹಬ್ಬ ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರಿಗೆ ಆಹ್ವಾನ ನೀಡಿರುವ ಸರ್ಕಾರ ನಿರ್ಧಾರದ ವಿರುದ್ಧ, ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸಲ್ಲಿಸಿದ್ದ ಪಿಐಎಲ್ ಅನ್ನು ಹೈಕೋರ್ಟ್ ವಜಾಗೊಳಿಸಿರುವ ಬಗ್ಗೆ ಮಾಧ್ಯಮಗಳು ಕೇಳಿದಾಗ, “ನ್ಯಾಯ ಪೀಠದಿಂದ ನ್ಯಾಯ ಸಿಕ್ಕಿದೆ.

ನಮ್ಮ ನ್ಯಾಯಾಂಗ ವ್ಯವಸ್ಥೆಗೆ ನಾವು ತಲೆಬಾಗುತ್ತೇವೆ. ನಮ್ಮದು ಪ್ರಜಾಪ್ರಭುತ್ವದ ವ್ಯವಸ್ಥೆ. ನಾವಿಂದು ಪ್ರಜಾಪ್ರಭುತ್ವ ದಿನ ಆಚರಿಸುತ್ತಿದ್ದೇವೆ. ನಮ್ಮ ಮತ ನಮ್ಮ ಹಕ್ಕು. ಬ್ಯಾಲೆಟ್ (ಮತ) ಬುಲೆಟ್ ಗಿಂತ ಶಕ್ತಿಶಾಲಿ. ನಮ್ಮದು ಈ ಮತಗಳಿಂದ ಆರಿಸಲಾಗಿರುವ ಸರ್ಕಾರ. ಜನರ ಬಹುಮತದೊಂದಿಗೆ ಆರಿಸಿ ಬಂದಿರುವ ಸರ್ಕಾರದ ತೀರ್ಮಾನ ಇದು” ಎಂದು ತಿಳಿಸಿದರು.

“ನಮ್ಮ ಸಂವಿಧಾನ ಸಮಾನತೆಯ ಸಂದೇಶ ಸಾರುತ್ತದೆ. ಎಲ್ಲಾ ಧರ್ಮಗಳಿಗೂ ಧರ್ಮದಲ್ಲಿ ಅವಕಾಶ ಕಲ್ಪಿಸಲಾಗಿದೆ. ನಾವು ಎಲ್ಲಾ ಧರ್ಮಗಳನ್ನು ಗೌರವಿಸಬೇಕು. ಚಾಮುಂಡೇಶ್ವರಿ ದೇವಿಗೆ ಪ್ರಾರ್ಥಿಸಬೇಡಿ, ಚಾಮುಂಡಿ ಬೆಟ್ಟಕ್ಕೆ ಬರಬೇಡಿ ಎಂದು ಹೇಳಲು ಹೇಗೆ ಸಾಧ್ಯ? ನಾವು ಸಂವಿಧಾನ ಬದ್ಧವಾದ ನಿರ್ಧಾರ ತೆಗೆದುಕೊಂಡಿದ್ದು, ಪ್ರತಾಪ್ ಸಿಂಹ ಸೇರಿದಂತೆ ಬಿಜೆಪಿ ನಾಯಕರು ಸಂವಿಧಾನವನ್ನು ಸರಿಯಾಗಿ ಓದಲಿ.

ಆಗ ನಿಮ್ಮ ಹಕ್ಕು ಏನಿದೆ ಎಂಬುದು ಅರ್ಥವಾಗುತ್ತದೆ. ಬಿಜೆಪಿಗರಿಗೆ ಸಂವಿಧಾನದ ಮೇಲೆ ಗೌರವವಿಲ್ಲ. ಸಂವಿಧಾನ ಹಾಗೂ ಎಲ್ಲಾ ವರ್ಗಗಳ ರಕ್ಷಣೆ ಮಾಡುವ ಕೆಲಸ ನಾವು ಮಾಡುತ್ತಿದ್ದೇವೆ” ಎಂದು ಸ್ಪಷ್ಟಪಡಿಸಿದರು. “ನ್ಯಾಯಾಲಯ ಕೂಡ ಸಂವಿಧಾನದ ಮೇಲೆ ನಡೆಯುತ್ತದೆ. ನಾವುಗಳು ಸಂವಿಧಾನದ ತತ್ವದ ಮೇಲೆ ನಡೆಯುತ್ತೇವೆ. ನಾವು ಪ್ರಮಾಣ ವಚನ ಸ್ವೀಕರಿಸುವುದು ಸಂವಿಧಾನದ ಹೆಸರಿನಲ್ಲಿ” ಎಂದರು.

ವಿದ್ಯಾರ್ಥಿ, ಯುವ ಜನರಲ್ಲಿ ನಾಯಕತ್ವ ಗುಣವನ್ನು ಬೆಳೆಸಬೇಕಿದೆ. ಮತದಾನ, ಪ್ರಜಾಪ್ರಭುತ್ವದ ಮೌಲ್ಯವನ್ನು ಅರಿತುಕೊಳ್ಳಲು 'ನನ್ನ ಮತ, ನನ್ನ ಹಕ್ಕು' ಕಾರ್ಯಕ್ರಮ ರೂಪಿಸಲಾಗಿದೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು. ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ವಿಧಾನಸೌಧದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು.

"ಮತದಾನ ಮದ್ದುಗುಂಡಿಗಿಂತ ಬಲಾಢ್ಯ ಎನ್ನುವ ಮಾತಿದೆ. ಮಹಾರಾಜರು ಮನೆಯಲ್ಲಿ ಕುಳಿತಿದ್ದಾರೆ. ಮತದಾನದ ಹಕ್ಕಿನಿಂದ ಆಯ್ಕೆಯಾದವರು ಜನಸೇವೆ ಮಾಡುತ್ತಿದ್ದಾರೆ. ನಾನು, ಸಿದ್ದರಾಮಯ್ಯ ಅವರು ಸೇರಿದಂತೆ ಅನೇಕ ನಾಯಕರ ಉದಯವಾಗಿದ್ದೇ ಮತದಾನದ ಹಕ್ಕಿನಿಂದ.‌ ಜನರ ಮತಗಳಿಂದ ನಾವು ಅಧಿಕಾರಕ್ಕೆ ಬಂದಿದ್ದೇವೆ. ಜವಾಬ್ದಾರಿಯುತ ಸ್ಥಾನಗಳನ್ನು ಅಲಂಕರಿಸಿದ್ದೇವೆ" ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಮತ್ತೊಂದು ಬೃಹತ್ ದರೋಡೆ: ವಿಜಯಪುರ SBI ಬ್ಯಾಂಕ್‌ ಸಿಬ್ಬಂದಿ ಕಟ್ಟಿಹಾಕಿ, 8 ಕೋಟಿ ಹಣ, 50 ಕೋಟಿ ಚಿನ್ನಾಭರಣ ಕಳವು?

ಕ್ರೈಸ್ತ ಬ್ರಾಹ್ಮಣ, ಕ್ರೈಸ್ತ ಒಕ್ಕಲಿಗ, ಕ್ರೈಸ್ತ ಕುರುಬ Hindu ಉಪಜಾತಿ ಸೇರ್ಪಡೆ ವಿರುದ್ಧ ರಾಜ್ಯಪಾಲರಿಗೆ BJP ದೂರು!

ಸು...ರ್ ಕುಮಾರ್: ಹಸ್ತ ಲಾಘವ ಕೊಡದ ಟೀಂ ಇಂಡಿಯಾ ನಾಯಕನಿಗೆ ಅವಹೇಳನಕಾರಿ ಶಬ್ದದಿಂದ ನಿಂದಿಸಿದ ಪಾಕ್ ಮಾಜಿ ಕ್ರಿಕೆಟಿಗ

75ರ ವಸಂತಕ್ಕೆ ಕಾಲಿಡುತ್ತಿರುವ ನರೇಂದ್ರ ಮೋದಿ: ಜನರ ಪ್ರಧಾನಿಯ ಏಳು ಬೀಳುಗಳ ಸ್ಮರಣೀಯ ಪ್ರಯಾಣ

ಹಿಮಾಚಲದಲ್ಲಿ ವಿನಾಶ: ಮೇಘಸ್ಫೋಟ-ಭೂಕುಸಿತ; 13 ಮಂದಿ ಸಾವು, 16ಕ್ಕೂ ಹೆಚ್ಚು ಮಂದಿ ನಾಪತ್ತೆ, SDRF ಕಾರ್ಯಾಚರಣೆ!

SCROLL FOR NEXT