ಬಿಜೆಪಿ ನಾಯಕ ಆರ್ ಅಶೋಕ 
ರಾಜಕೀಯ

ಶಾಸಕ ಕೆ.ವೈ ನಂಜೇಗೌಡ ಆಯ್ಕೆ ಅಸಿಂಧು: ಕಾಂಗ್ರೆಸ್ 'ವೋಟ್ ಚೋರಿ ಮಾಫಿಯಾ' ನಡೆಸುತ್ತಿದೆ- ಆರ್ ಅಶೋಕ

ನಾಲ್ಕು ವಾರಗಳಲ್ಲಿ ಮತಗಳ ಮರುಎಣಿಕೆ ಮಾಡಿ, ಫಲಿತಾಂಶವನ್ನು ಹೊಸದಾಗಿ ಘೋಷಿಸುವಂತೆ ಚುನಾವಣಾ ಆಯೋಗಕ್ಕೆ ಪೀಠ ನಿರ್ದೇಶನ ನೀಡಿದೆ.

ಬೆಂಗಳೂರು: ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರವನ್ನು ಪ್ರತಿನಿಧಿಸುವ ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡ ಅವರ ಆಯ್ಕೆಯನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ಅನೂರ್ಜಿತಗೊಳಿಸಿದ್ದು, ಬಿಜೆಪಿ ನಾಯಕ ಆರ್ ಅಶೋಕ ಬುಧವಾರ ರಾಜ್ಯದಲ್ಲಿ ಆಡಳಿತ ಪಕ್ಷವು 'ವೋಟ್ ಚೋರಿ ಮಾಫಿಯಾ' ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.

ನಂಜೇಗೌಡ ವಿರುದ್ಧ ಸೋತಿದ್ದ ಬಿಜೆಪಿಯ ಕೆಎಸ್ ಮಂಜುನಾಥ್ ಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್ ದೇವದಾಸ್ ನೇತೃತ್ವದ ಪೀಠ ಈ ತೀರ್ಪು ನೀಡಿದೆ.

ನಾಲ್ಕು ವಾರಗಳಲ್ಲಿ ಮತಗಳ ಮರುಎಣಿಕೆ ಮಾಡಿ, ಫಲಿತಾಂಶವನ್ನು ಹೊಸದಾಗಿ ಘೋಷಿಸುವಂತೆ ಚುನಾವಣಾ ಆಯೋಗಕ್ಕೆ ಪೀಠ ನಿರ್ದೇಶನ ನೀಡಿದೆ.

ಆದಾಗ್ಯೂ, ನಂಜೇಗೌಡ ಅವರ ಪರ ವಕೀಲರ ಮನವಿ ಮೇರೆಗೆ, ಶಾಸಕ ಸ್ಥಾನವನ್ನು ಅಸಿಂಧುಗೊಳಿಸಿದ್ದ ತನ್ನದೇ ಆದೇಶಕ್ಕೆ 30 ದಿನಗಳ ಕಾಲ ಹೈಕೋರ್ಟ್ ತಡೆ ನೀಡಿದೆ. ಈ ಮಧ್ಯಂತರ ಪರಿಹಾರವು ಕಾಂಗ್ರೆಸ್ ಶಾಸಕರಿಗೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲು ಅವಕಾಶ ನೀಡುತ್ತದೆ

'ಕಾಂಗ್ರೆಸ್ = ವೋಟ್ ಚೋರಿ ಮಾಫಿಯಾ. ಬಳ್ಳಾರಿಯಿಂದ ಮಾಲೂರುವರೆಗೆ, ಒಂದು ಮಾದರಿ ಎಂದಿಗೂ ಬದಲಾಗುವುದಿಲ್ಲ - ಮತಗಟ್ಟೆಯನ್ನು ರಿಗ್ ಮಾಡಿ, ಮತವನ್ನು ಕದಿಯಿರಿ, ಪ್ರಜಾಪ್ರಭುತ್ವವನ್ನು ಕೊಲೆ ಮಾಡಲಾಗುತ್ತಿದೆ' ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರೂ ಆಗಿರುವ ಅಶೋಕ 'ಎಕ್ಸ್'ನಲ್ಲಿ ಪೋಸ್ಟ್‌ ಮಾಡಿದ್ದಾರೆ.

'ರಾಹುಲ್ ಗಾಂಧಿ ಪ್ರಜಾಪ್ರಭುತ್ವ ಉಳಿಸಿ ಎಂಬ ನಾಟಕ ಮಾಡುತ್ತಿದ್ದರೆ, ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕರ್ನಾಟಕದಲ್ಲಿ ವೋಟ್ ಚೋರಿ ಮಾಫಿಯಾ ನಡೆಸುತ್ತಿದ್ದಾರೆ. ಹೈಕೋರ್ಟ್ ಈಗ ಅವರ ಮಾಲೂರು ಶಾಸಕರ ಕದ್ದ ಗೆಲುವಿಗೆ ಮೊಳೆ ಹೊಡೆದಿದೆ. ಕಾಂಗ್ರೆಸ್‌ನ ನೈತಿಕತೆಯ ಮುಖವಾಡ ಕಳಚಿದೆ. ಕರ್ನಾಟಕ ಶೀಘ್ರದಲ್ಲೇ ಈ ಮಾಫಿಯಾಕ್ಕೆ ಬಾಗಿಲು ತೆರೆಯುತ್ತದೆ!' ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi SIR: ಕ್ಷೇತ್ರ ಪರಿಶೀಲನೆ ಬಳಿಕ ಎಲ್.ಕೆ. ಅಡ್ವಾಣಿ, ಜಗದೀಪ್ ಧನಕರ್, ಜೈಶಂಕರ್ ಸೇರಿ ಹಲವು ಗಣ್ಯರ Voter ID ಗೊಂದಲಕ್ಕೆ ತೆರೆ!

ಸಂಘರ್ಷ ಅಂತ್ಯಕ್ಕೆ ಇರಾನ್ 7 ದಿನಗಳ ಯೋಜನೆ ಪ್ರಸ್ತಾಪ: ಹಾರ್ಮುಜ್ ಜಲಸಂಧಿ ಮತ್ತೆ ಮುಕ್ತ

ವಿಶ್ವಸಂಸ್ಥೆಯಲ್ಲಿ Pak ಪ್ರಧಾನಿಗೆ ಮುಖಭಂಗ: ಭಯೋತ್ಪಾದನೆ ಕುರಿತ ಪ್ರಶ್ನೆ ಎದುರಿಸಲಾಗದೆ ತಲೆತಗ್ಗಿಸಿ ನಡೆದ ಶೆಹಬಾಜ್ ಷರೀಫ್..! Video

ವಿಶ್ವಸಂಸ್ಥೆಯಲ್ಲಿ ನೆತನ್ಯಾಹುಗೆ ಬಿಗ್ ಶಾಕ್: ಭಾಷಣ ಬಹಿಷ್ಕರಿಸಿ ಹೊರನಡೆದ ಹತ್ತಾರು ದೇಶಗಳ ಪ್ರತಿನಿಧಿಗಳು,"ನೈತಿಕ ಹೇಡಿಗಳು" ಎಂದು ಕರೆದ ಇಸ್ರೇಲ್ ಪ್ರಧಾನಿ..!

ಶ್ವೇತಭವನದಲ್ಲಿ ಚೀನಾ ಅಧ್ಯಕ್ಷರಿಗೆ ಅದ್ಧೂರಿ ಸ್ವಾಗತ: ಕ್ಸಿ ಜಿನ್‌ಪಿಂಗ್‌ ಜೊತೆಗಿನ ಹಳೆಯ ನಂಟು ಸ್ಮರಿಸಿ, ‘ನಮ್ಮದು ನಿಜಕ್ಕೂ ಅದ್ಭುತ ಸ್ನೇಹ’ ಎಂದ ಟ್ರಂಪ್‌..!