ದಿನೇಶ್ ಗುಂಡೂರಾವ್  
ರಾಜಕೀಯ

ಜಾತಿಗಳಿದ್ದ ಮಾತ್ರಕ್ಕೆ ಧರ್ಮ ಒಡೆಯುತ್ತದೆಯೇ? ಸಿದ್ದರಾಮಯ್ಯ ಹಿಂದೂ ವಿರೋಧಿ ಎಂದು ಬಿಂಬಿಸುವುದು ಬಿಜೆಪಿಯ ಏಕೈಕ ಅಜೆಂಡಾ!

ಹಿಂದೂ ಧರ್ಮದಲ್ಲಿ ಅನೇಕ ಜಾತಿಗಳಿವೆ. ಜಾತಿಗಳಿದ್ದ ಮಾತ್ರಕ್ಕೆ ಧರ್ಮ ಒಡೆಯುತ್ತದೆಯೇ? ಸರ್ಕಾರ ಯಾವುದೇ ಜಾತಿ ಸೃಷ್ಟಿಸುತ್ತಿಲ್ಲ. ಕೇಂದ್ರ ಸರ್ಕಾರ ಜಾತಿ ಗಣತಿ ಮಾಡಲಿದೆ, ರಾಜ್ಯ ಸರ್ಕಾರವಲ್ಲ.

ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹಿಂದೂ ವಿರೋಧಿ ಎಂದು ಬಿಂಬಿಸುವುದು ಬಿಜೆಪಿಯ ಏಕೈಕ ಕಾರ್ಯಸೂಚಿಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಮಡಿಕೇರಿಯಲ್ಲಿ ಮಾತನಾಡಿದ ಅವರು, ಬ್ರಾಹ್ಮಣ ಕ್ರಿಶ್ಚಿಯನ್, ಲಿಂಗಾಯತ ಕ್ರಿಶ್ಚಿಯನ್, ಗೌಡ ಕ್ರಿಶ್ಚಿಯನ್ ಎಂಬುದನ್ನು ನಾವು ಸಮೀಕ್ಷೆಯಲ್ಲಿ ಸೇರಿಸಿದ್ದಲ್ಲ. ಇದಕ್ಕೂ ಸಿದ್ದರಾಮಯ್ಯ ಅವರಿಗೂ ಸಂಬಂಧವಿಲ್ಲ. ಹಿಂದಿನ ಸಮೀಕ್ಷೆಯ ವೇಳೆ ಸುಮಾರು 1 ಲಕ್ಷ ಮಂದಿ ಈ ರೀತಿ ಹೇಳಿಕೊಂಡಿದ್ದರು. ಆ ವರದಿಯನ್ನು ಆರ್.ಅಶೋಕ್ ಸಚಿವರಾಗಿದ್ದಾಗ ಒಪ್ಪಿಕೊಂಡಿದ್ದರು ಎಂದರು.

ಹಿಂದೂ ಧರ್ಮದಲ್ಲಿ ಅನೇಕ ಜಾತಿಗಳಿವೆ. ಜಾತಿಗಳಿದ್ದ ಮಾತ್ರಕ್ಕೆ ಧರ್ಮ ಒಡೆಯುತ್ತದೆಯೇ? ಸರ್ಕಾರ ಯಾವುದೇ ಜಾತಿ ಸೃಷ್ಟಿಸುತ್ತಿಲ್ಲ. ಕೇಂದ್ರ ಸರ್ಕಾರ ಜಾತಿ ಗಣತಿ ಮಾಡಲಿದೆ, ರಾಜ್ಯ ಸರ್ಕಾರವಲ್ಲ. ಅದು ಬೇಡವೆಂದಾದರೆ ಬಿಜೆಪಿಯವರು ಕೂಡಲೇ ಪ್ರಧಾನಿಗೆ ಪತ್ರ ಬರೆಯಲಿ. ನಮ್ಮದು ಶೈಕ್ಷಣಿಕ, ಆರ್ಥಿಕ ಸ್ಥಿತಿಗತಿಯ ಸಮೀಕ್ಷೆ ಎಂದರು.

ಸಮೀಕ್ಷೆ ವಿರೋಧಿಸುತ್ತಿರುವ ವಿಜಯೇಂದ್ರ ಅವರಿಗೆ ಎಷ್ಟು ಜ್ಞಾನವಿದೆಯೋ ಗೊತ್ತಿಲ್ಲ. ಮಾಹಿತಿ ಕೊರತೆ ಇರಬಹುದು, ಸರಿಯಾಗಿ ತಿಳಿದುಕೊಳ್ಳಲಿ. ಹಿಂದೆ ಕಾಂತರಾಜ ಆಯೋಗದ ಸಮೀಕ್ಷಾ ವರದಿಯನ್ನು ಇವರ ಸರ್ಕಾರವೇ ಒಪ್ಪಿಕೊಂಡು, ಜಯಪ್ರಕಾಶ್ ಹೆಗ್ಡೆ ಅವರನ್ನು ನೇಮಿಸಿ, ಅವರ ವರದಿಯ ಆಧಾರದಲ್ಲಿ ಕ್ರಮ ಕೈಗೊಳ್ಳಲಿಲ್ಲವೇ ಎಂದು ಪ್ರಶ್ನಿಸಿದರು.

ಪ್ರಜಾಪ್ರಭುತ್ವದಲ್ಲಿ ಯಾವುದೇ ಕೆಲಸ ಮಾಡುವಾಗ ಪರ ವಿರೋಧ ಇದ್ದೇ ಇರುತ್ತದೆ. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಎಲ್ಲಾ ವರ್ಗದ ಜನರಿಗೆ ಸರ್ಕಾರದ ಕಾರ್ಯಕ್ರಮಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ತಲುಪಿಸಲು ಸಹಕಾರಿಯಾಗಲಿದೆ ಎಂದು ತಿಳಿಸಿದರು. ಪ್ರತೀ ಬಡವರಿಗೂ ಮೀಸಲಾತಿ ಕಲ್ಪಿಸಬೇಕು ಎಂಬುದು ಸರ್ಕಾರದ ಆಶಯವಾಗಿದೆ. ಆ ನಿಟ್ಟಿನಲ್ಲಿ ಸರ್ಕಾರದ ವಿಶೇಷ ಸೌಲಭ್ಯಗಳನ್ನು ತಲುಪಿಸುವುದು ಅತೀ ಮುಖ್ಯವಾಗಿದ್ದು, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳಲಾಗುತ್ತದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi blast: ಎರಡು ಕಾರ್ಟ್ರಿಡ್ಜ್‌ಗಳು, ಸ್ಫೋಟಕಗಳು ಸೇರಿದಂತೆ ವಿಧಿ ವಿಜ್ಞಾನ ತಂಡದಿಂದ 40 ಮಾದರಿಗಳ ಸಂಗ್ರಹ

Delhi blast- ಜೈಶ್-ಎ-ಮೊಹಮ್ಮದ್ ಸಂಘಟನೆಯ 'ಮೂಲಭೂತವಾದಿ ವೈದ್ಯರ' ಕುಕೃತ್ಯ

Indian Stock Market: 3 ದಿನಗಳ ಸತತ ಏರಿಕೆ ಬಳಿಕ ಮೊದಲ ಬಾರಿಗೆ ಕುಸಿತವಾದ ಹಿಂದೂಸ್ತಾನ್ ಕಾಪರ್ ಲಿಮಿಟೆಡ್ ಷೇರು!

Delhi Red Fort blast: ಮಿಲಿಟರಿ ದರ್ಜೆಯ ಸ್ಫೋಟಕ ಬಳಕೆಯ ಬಗ್ಗೆ ಸುಳಿವು- ಮೂಲಗಳು

ಗ್ರಹಗಳ ದೋಷ ನಿವಾರಣೆಗೆ ಭೈರವಾರಾಧನೆ: ಕಾಲ ಭೈರವಾಷ್ಟಮಿ ಪೂಜೆಯ ಮಹತ್ವ!

SCROLL FOR NEXT