ಸಿಎಂ ಸಿದ್ದರಾಮಯ್ಯ 
ರಾಜಕೀಯ

BJP-RSS ದೇಶದ ಆತ್ಮ ಅಳಿಸಿಹಾಕಲು ಬಯಸಿದೆ, ನಾನು ಭಾರತ ಉಳಿಸಲು ಹೋರಾಡುತ್ತಿದ್ದೇವೆ: ಸಿಎಂ ಸಿದ್ದರಾಮಯ್ಯ

ಸಂವಿಧಾನದ ಮೂಲ ತತ್ವಗಳಾದ ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಮತ್ತು ನ್ಯಾಯವನ್ನು ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ಮತ್ತು ಅವರ ಸಿದ್ಧಾಂತದ ಗುರುಗಳಾದ ಆರ್‌ಎಸ್ಎಸ್ ಹತ್ತಿಕ್ಕುತ್ತಿವೆ.

ಬೆಂಗಳೂರು: ಬಿಜೆಪಿ-ಆರ್'ಎಸ್ಎಸ್ ಒಕ್ಕೂಟವು ಈ ದೇಶದ ಆತ್ಮವನ್ನು ಅಳಿಸಿಹಾಕಲು ಬಯಸಿದೆ, ಆದರೆ ನಾವು ಅದಕ್ಕೆ ಅವಕಾಶ ನೀಡುವುದಿಲ್ಲ. ನಾವು ಕೇವಲ ಚುನಾವಣೆಗಾಗಿ ಹೋರಾಡುತ್ತಿಲ್ಲ. ನಾವು ಭಾರತವನ್ನು ಉಳಿಸಲು ಹೋರಾಡುತ್ತಿದ್ದೇವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.

ಬಿಹಾರದ ಪಾಟ್ನಾದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಪಕ್ಷದ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ಬಿಜೆಪಿ ಹಾಗೂ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

ಅನ್ಯಾಯದ ವಿರುದ್ಧ ಸದಾ ಎದ್ದುನಿಂತ ಪಾಟ್ನಾ ಭೂಮಿಯಲ್ಲಿ ಇಂದು ನಿಮ್ಮ ಮುಂದೆ ನಿಂತಿದ್ದೇನೆ. ನಮ್ಮ ಪ್ರಜಾಪ್ರಭುತ್ವವೇ ಅಪಾಯದಲ್ಲಿರುವ ಸಂದರ್ಭದಲ್ಲಿ ಇಂದಿನ ಕಾಂಗ್ರೆಸ್ ಕಾರ್ಯಕಾರಣಿ ಸಭೆ ಬಹಳ ಮಹತ್ವ ಪಡೆದಿದೆ. ಸಂವಿಧಾನದ ಮೂಲ ತತ್ವಗಳಾದ ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಮತ್ತು ನ್ಯಾಯವನ್ನು ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ಮತ್ತು ಅವರ ಸಿದ್ಧಾಂತದ ಗುರುಗಳಾದ ಆರ್‌ಎಸ್ಎಸ್ ಹತ್ತಿಕ್ಕುತ್ತಿವೆ.

ಭಾರತವು ಇಂದು ಆತ್ಮವಂಚನೆಯ ನೆರಳಿನಲ್ಲಿ ಬದುಕುತ್ತಿದೆ. ಸಂಸ್ಥೆಗಳನ್ನು ವಶಪಡಿಸಿಕೊಂಡು, ಸ್ವಾತಂತ್ರ್ಯವನ್ನು ಕಡಿತಗೊಳಿಸಲಾಗುತ್ತಿದ್ದು, ಜನರ ಜನಾದೇಶವನ್ನು ಕದಿಯಲಾಗುತ್ತಿದೆ. ಇಲ್ಲಿನ "ಡಬಲ್ ಇಂಜಿನ್ ಸರ್ಕಾರ" ಎಂಬುದು ನಮ್ಮ ಪ್ರಜಾರಾಜ್ಯದ ಆತ್ಮವನ್ನೇ ಘಾಸಿಗೊಳಿಸುವಂತಹ ಎರಡು ಅಲುಗುಗಳ ಕತ್ತಿಯಾಗಿದೆ. ಚುನಾವಣೆಗಳನ್ನು ಕದಿಯುವ ಮೂಲಕ ಬಿಜೆಪಿಯು, ದೇಶಾದ್ಯಂತ 'ವೋಟ್ ಚೋರಿ'ಯಲ್ಲಿ ತೊಡಗಿಕೊಂಡಿದೆ; ಶಾಸಕರನ್ನು ಖರೀದಿಸುವುದು ಮತ್ತು ಜನರ ಧ್ವನಿಯನ್ನು ಹತ್ತಿಕ್ಕುವುದು ಇವರ ಕೆಲಸ ಎಂದು ವಾಗ್ದಾಳಿ ನಡೆಸಿದ್ದಾರೆ.

ಕರ್ನಾಟಕದ ಮಹದೇವಪುರ ಇರಲಿ ಅಥವಾ ಆಳಂದ ಇರಲಿ, 'ವೋಟ್ ಚೋರಿ'ಯನ್ನು ರಾಹುಲ್ ಗಾಂಧಿಯವರು ಬಹಿರಂಗಪಡಿಸಿದರು. ಚುನಾವಣಾ ಅಕ್ರಮಗಳ ವಿರುದ್ಧದ ಅವರ ಅವಿರತ ಹೋರಾಟವು ನ್ಯಾಯಯುತ ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬ ಭಾರತೀಯರಿಗೂ ಸ್ಫೂರ್ತಿ ನೀಡಿದೆ. ಇತ್ತೀಚೆಗೆ ಬಿಹಾರದಲ್ಲಿ ಕಾಣಲಾಗುತ್ತಿರುವ 'ಸಿಐಆರ್' (SIR) ದುರಂತವು,ಅಧಿಕಾರಕ್ಕಾಗಿ ಬಿಜೆಪಿ ಯಾವ ಮಟ್ಟಕ್ಕೆ ಇಳಿಯುತ್ತದೆ ಎಂಬುದನ್ನು ಸಾಬೀತುಪಡಿಸುತ್ತದೆ.

ಪ್ರಜಾಪ್ರಭುತ್ವ ದೇಶೀಯವಾಗಿ ಕುಂಠಿತವಾಗುತ್ತಿರುವ ಸಂದರ್ಭದಲ್ಲಿ, ಮೋದಿ ಸರ್ಕಾರವು ವಿದೇಶಾಂಗ ನೀತಿಯಲ್ಲಿ ವಿಫಲವಾಗಿದೆ. ಒಮ್ಮೆ ಜಾಗತಿಕವಾಗಿ ಗೌರವಿಸಲ್ಪಟ್ಟ ಭಾರತದ ವಿದೇಶಾಂಗ ನೀತಿ, ಇಂದು ಮೌನ ಮತ್ತು ಅಧೀನ ಸ್ಥಿತಿಗೆ ಕುಸಿದಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕಾಶ್ಮೀರದಲ್ಲಿ ಶಾಂತಿ ನೆಲೆಸುವಂತೆ ನಾನು ಮಾಡಿದ್ದಾಗಿ ನಾಚಿಕೆಯಿಲ್ಲದೆ ಹೇಳಿಕೊಂಡಾಗ, ಮೋದಿ ಒಂದೂ ಮಾತೂ ಆಡಲಿಲ್ಲ. ಇದು ರಾಜತಾಂತ್ರಿಕತೆ ಅಲ್ಲ. ಇದು ನಮ್ಮ ಸಾರ್ವಭೌಮತ್ವದೊಂದಿಗೆ ಮಾಡಿಕೊಂಡ ರಾಜಿ. ಇಂತಹ ವಿಫಲ ಅಂತಾರಾಷ್ಟ್ರೀಯ ಸಂಬಂಧಗಳು ನಮ್ಮ ಮಿತ್ರರನ್ನು ಶತ್ರುಗಳನ್ನಾಗಿ ಮಾಡುತ್ತಿವೆ ಮತ್ತು ನಮ್ಮ ದೇಶವನ್ನು ಅಸ್ಥಿರಗೊಳಿಸಲು ಶತ್ರುಗಳನ್ನು ಒಗ್ಗೂಡಿಸುತ್ತಿವೆ. ಉದ್ಯೋಗಾವಕಾಶಗಳು ಮತ್ತು ವ್ಯಾಪಾರದ ನಷ್ಟ ಮತ್ತು ಮಿತ್ರರನ್ನು ಕಳೆದುಕೊಂಡಿರುವುದಕ್ಕೆ ಮೋದಿಯವರೇ ನೇರ ಹೊಣೆಗಾರರು. ಭಾರತವು ಸರ್ವಾಧಿಕಾರದ ನೆರಳಿನಲ್ಲಿ ಬದುಕುತ್ತಿದೆ. ಸಾಂವಿಧಾನಿಕ ಸಂಸ್ಥೆಗಳನ್ನು ವಶಕ್ಕೆ ಪಡೆದುಕೊಳ್ಳಲಾಗುತ್ತಿದೆ. ಜನರು ನೀಡುವ ಮತಾದೇಶವನ್ನು ಕದಿಯಲಾಗುತ್ತಿದೆ. ಬಿಜೆಪಿ ಮತ ಕಳ್ಳತನದಲ್ಲಿ ತೊಡಗಿದೆ. ಮತಕಳ್ಳತನ ಮಾಡುವುದು, ಶಾಸಕರನ್ನು ಕೊಳ್ಳುವುದು ಮತ್ತು ಜನರ ಧ್ವನಿಯನ್ನು ಹತ್ತಿಕ್ಕುವುದು ಅವರ ಕೆಲಸವಾಗಿದೆ ಎಂದು ಕಿಡಿಕಾರಿದ್ದಾರೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi blast- ಜೈಶ್-ಎ-ಮೊಹಮ್ಮದ್ ಸಂಘಟನೆಯ 'ಮೂಲಭೂತವಾದಿ ವೈದ್ಯರ' ಕುಕೃತ್ಯ

Delhi Red Fort blast: ಮಿಲಿಟರಿ ದರ್ಜೆಯ ಸ್ಫೋಟಕ ಬಳಕೆಯ ಬಗ್ಗೆ ಸುಳಿವು- ಮೂಲಗಳು

ಡಿಸೆಂಬರ್ 8 ರಿಂದ ಚಳಿಗಾಲ ಅಧಿವೇಶನ: ರೈತರ ಸಮಸ್ಯೆಗಳು, ರಾಜ್ಯದ ಕಾನೂನು- ಸುವ್ಯವಸ್ಥೆ ಸಮಸ್ಯೆ ಎತ್ತಲು ಬಿಜೆಪಿ ಸಜ್ಜು

ಏರೋಸ್ಪೇಸ್ ಪಂಡಿತರ ಕರ್ಮಭೂಮಿ ಬೆಂಗಳೂರು: ಪುಲ್ವಾಮಾ ಘಟನೆ ನಂತರ ಎಚ್ಚೆತ್ತುಕೊಂಡಿದ್ದರೆ ದುರಂತ ಸಂಭವಿಸುತ್ತಿರಲಿಲ್ಲ

ಪಾಕಿಸ್ತಾನ ಸೇನೆಯಲ್ಲಿ 'ಜಿಹಾದ್': ಅಸಿಮ್ ಮುನೀರ್ ಯಾಕಿಷ್ಟು ಹಿಂದೂ ದ್ವೇಷಿ?

SCROLL FOR NEXT