ಬಿ.ವೈ. ವಿಜಯೇಂದ್ರ 
ರಾಜಕೀಯ

ಧರ್ಮಸ್ಥಳ ಕೇಸ್: SIT ರಚಿಸುವಂತೆ ಒತ್ತಡ ಹೇರಿದವರು ಯಾರು?; ಸರ್ಕಾರಕ್ಕೆ BJP ಪ್ರಶ್ನೆ

ಹಿಂದೂಗಳ ಧಾರ್ಮಿಕ ಶ್ರದ್ಧಾ ಕೇಂದ್ರ ‘ಶ್ರೀ ಕ್ಷೇತ್ರ ಧರ್ಮಸ್ಥಳ’ದ ವಿರುದ್ಧ ವ್ಯವಸ್ಥಿತ ಅಪಪ್ರಚಾರ ನಡೆಸಿ ಕ್ಷೇತ್ರದ ವರ್ಚಸ್ಸು ಕುಗ್ಗಿಸಲೇಬೇಕೆಂಬ ವ್ಯವಸ್ಥಿತ ಷಡ್ಯಂತರಕ್ಕೆ ಕಾಂಗ್ರೆಸ್ ಸರ್ಕಾರವೇ ಕುಮ್ಮಕ್ಕು ನೀಡುತ್ತಿದೆ.

ಬೆಂಗಳೂರು: ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆಗಾಗಿ ಎಸ್‌ಐಟಿ ರಚಿಸುವಂತೆ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಒತ್ತಡ ಹೇರಿದವರು ಯಾರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಗುರುವಾರ ಪ್ರಶ್ನಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂಗಳ ಧಾರ್ಮಿಕ ಶ್ರದ್ಧಾ ಕೇಂದ್ರ ‘ಶ್ರೀ ಕ್ಷೇತ್ರ ಧರ್ಮಸ್ಥಳ’ದ ವಿರುದ್ಧ ವ್ಯವಸ್ಥಿತ ಅಪಪ್ರಚಾರ ನಡೆಸಿ ಕ್ಷೇತ್ರದ ವರ್ಚಸ್ಸು ಕುಗ್ಗಿಸಲೇಬೇಕೆಂಬ ವ್ಯವಸ್ಥಿತ ಷಡ್ಯಂತರಕ್ಕೆ ಕಾಂಗ್ರೆಸ್ ಸರ್ಕಾರವೇ ಕುಮ್ಮಕ್ಕು ನೀಡುತ್ತಿದೆ. ಈ ದುಷ್ಟ ಉದ್ದೇಶದಿಂದಲೇ ಸರ್ವೋಚ್ಛ ನ್ಯಾಯಾಲಯದ ತೀರ್ಪನ್ನು ಮರೆಮಾಚಿ ಸರ್ಕಾರ ಬುರುಡೆ ಗ್ಯಾಂಗ್ ನ ದೂರು ಸ್ವೀಕರಿಸಿ ಎಸ್ಐಟಿ ರಚಿಸಿತ್ತು ಎಂಬುದು ಈಗ ಬಟಾ ಬಯಲಾಗಿದೆ ಎಂದು ಹೇಳಿದ್ದಾರೆ.

ಸರ್ವೋಚ್ಛ ನ್ಯಾಯಾಲಯ ಬುರುಡೆ ಗ್ಯಾಂಗ್ ಹೂಡಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು 2025 ಮೇ 05ರಲ್ಲೇ ವಜಾಗೊಳಿಸಿತ್ತು. ಆದಾಗ್ಯೂ ಈ ಸಂಗತಿಯನ್ನು ಮರೆಮಾಚಿ ಸರ್ಕಾರ ಕಟ್ಟುಕಥೆ ಹೆಣೆದ ಆರೋಪವನ್ನು ಆಧರಿಸಿ ದೂರು ಸ್ವೀಕರಿಸಿತು, ಬಳಿಕ ಉಗ್ರ ಎಡ ಪಂಥೀಯ ವಿಚಾರಧಾರೆಯ ವಿತಂಡವಾದಿಗಳ ಒತ್ತಡಕ್ಕೆ ಮಣಿದಂತೆ ನಟಿಸಿ ಸರ್ಕಾರ ಎಸ್ಐಟಿ ರಚಿಸಿತು. ಇದು ಸರ್ವೋಚ್ಛ ನ್ಯಾಯಾಲಯದ ಆದೇಶದ ಸ್ಪಷ್ಟ ಉಲ್ಲಂಘನೆಯಾಗಿದೆ.

ಇದು ಸಾರ್ವಜನಿಕ ಹಿತಾಸಕ್ತಿಯಲ್ಲ, ಬದಲಿಗೆ ಪ್ರಚಾರ, ಹಣ, ಖಾಸಗಿ ಹಾಗೂ ರಾಜಕೀಯ ದುರುದ್ದೇಶದಿಂದ ಕೂಡಿರುವ ಅರ್ಜಿ" ಎಂದು ಸುಪ್ರೀಂ ವಜಾಗೊಳಿಸಿ ಷಡ್ಯಂತರ ರೂಪಿಸಲು ಹೊರಟವರಿಗೆ ಮಂಗಳಾರತಿ ಎತ್ತಿದೆ. ಈ ಕೂಡಲೇ ಮುಖ್ಯಮಂತ್ರಿಗಳು ಹಾಗೂ ಗೃಹ ಮಂತ್ರಿಗಳು ಬೇಷರತ್ತಾಗಿ ಸರ್ವೋಚ್ಛ ನ್ಯಾಯಾಲಯದ ಕ್ಷಮೆಕೋರಲಿ. ಇದರ ಜತೆಗೇ ಧರ್ಮಸ್ಥಳದ ಷಡ್ಯಂತರದಲ್ಲಿ ನಾವೂ ಭಾಗಿದಾರರು ಎಂಬ ಸತ್ಯವನ್ನು ಒಪ್ಪಿಕೊಂಡು ನಾಡಿನ ಜನತೆಯ ಕ್ಷಮೆ ಯಾಚಿಸಲಿ ಎಂದು ಆಗ್ರಹಿಸಿದ್ದಾರೆ.

ಈ ಹಿಂದಿನಿಂದಲೂ ನಾವು ಷಡ್ಯಂತ್ರ ಎಂದು ಆರೋಪಿಸುತ್ತಲೇ ಇದ್ದೇವೆ, ಈ ಮಾತನ್ನು ಡಿಸಿಎಂ ಡಿಕೆ ಶಿವಕುಮಾರ್ ರವರೂ ಹೇಳಿದ್ದಾರೆ. ವ್ಯವಸ್ಥಿತ ಹುನ್ನಾರದ ಹಿನ್ನೆಲೆಯಲ್ಲಿಯೇ ನಾವು ಧರ್ಮಸ್ಥಳದ ಕುರಿತು NIA ತನಿಖೆಗೆ ಒತ್ತಾಯಿಸುತ್ತಲೇ ಇದ್ದೇವೆ. ಈ ಷಡ್ಯಂತರ ರೂಪಿಸಿದವರಿಗೆ ಶಿಕ್ಷೆಯಾಗುವವರೆಗೂ ಬಿಜೆಪಿ ಹೋರಾಟ ಮುಂದುವರೆಸಲಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸ್ಫೋಟದ ಅಪರಾಧಿಗಳು ಎಲ್ಲೇ ಅಡಗಿದ್ದರೂ ಹಿಡಿದು ಅವರಿಗೆ ಕಠಿಣ ಶಿಕ್ಷೆ ಕೊಡಿಸುತ್ತೇವೆ: ಅಮಿತ್ ಶಾ

ಪ್ರಧಾನಿ ಮೋದಿ ಭೇಟಿಯಾದ ಸಿಎಂ; ರಾಯಚೂರಿಗೆ ಏಮ್ಸ್, ಪ್ರವಾಹ ಪರಿಹಾರಕ್ಕೆ ಮನವಿ

ದೆಹಲಿ ಸ್ಫೋಟಕ್ಕೂ ಮುನ್ನ ಹಮಾಸ್ ಮಾದರಿಯ ಭೀಕರ ದಾಳಿಗೆ ಯೋಜನೆ ರೂಪಿಸಿದ್ದ ಉಗ್ರರು!

ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಆರೋಗ್ಯದಲ್ಲಿ ಏರುಪೇರು, ICU ನಲ್ಲಿ ಚಿಕಿತ್ಸೆ!

ವಿದ್ಯಾರ್ಥಿಗಳನ್ನು ಕ್ರೂರವಾಗಿ ಥಳಿಸುತ್ತಿರುವ ಮದರಸಾ ಶಿಕ್ಷಕ: ಸಿಸಿಟಿವಿ ವಿಡಿಯೋ ವೈರಲ್!

SCROLL FOR NEXT