ಬಿ.ಕೆ ಹರಿಪ್ರಸಾದ್ 
ರಾಜಕೀಯ

ರಾಹುಲ್ ಗಾಂಧಿಗೆ ಜೀವ ಬೆದರಿಕೆ: ಬಿಜೆಪಿ ಕೊಲೆಗಡುಕ ಸಂಸ್ಕೃತಿ ಮುಖವಾಡಕ್ಕೆ ಹಿಡಿದ ಕೈಗನ್ನಡಿ; ಬಿ.ಕೆ ಹರಿಪ್ರಸಾದ್‌

ಸಂವಿಧಾನ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಲು ಟೊಂಕ ಕಟ್ಟಿ ನಿಂತಿರುವ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕರು ಕೊಲೆಗೆ ಪ್ರಚೋದನೆ ನೀಡುವುದು ಬಾಯಿ ತಪ್ಪಿನಿಂದಲ್ಲ, ಬಿಜೆಪಿಯ ಉದ್ದೇಶ ಬಹಿರಂಗಗೊಂಡಿದೆ.

ಬೆಂಗಳೂರು: ಸತ್ಯ,ಶಾಂತಿ, ಸೌಹಾರ್ದತೆ, ನ್ಯಾಯ-ನೀತಿಯ ಪ್ರತಿರೂಪವಾಗಿ ಬಾಳಿ ಬದುಕಿದ್ದ ಮಹಾತ್ಮಾ ಗಾಂಧಿಯವರ ಎದೆಗೆ ಗುಂಡಿಕ್ಕಿ ಕೊಂದ ಸಂತತಿಯವರೇ ಇಂದು ದೇಶದ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರ ಎದೆಗೆ ಗುಂಡಿಕ್ಕಿ ಕೊಲೆ ಮಾಡುತ್ತೇವೆ ಎಂದು ಘೋಷಿಸುತ್ತಿರುವುದು ಬಿಜೆಪಿಯ ಕೊಲೆಗಡುಕ ಸಂಸ್ಕೃತಿಯ ಮುಖವಾಡಕ್ಕೆ ಹಿಡಿದ ಕೈ ಗನ್ನಡಿ ಎಂದು ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.

ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿಕೊಂಡಿರುವ ಅವರು, ದೇಶದ ಕೋಟ್ಯಾಂತರ ಜನರ ನ್ಯಾಯಕ್ಕಾಗಿ ಹೋರಾಡುತ್ತಿರುವ ರಾಹುಲ್ ಗಾಂಧಿಯವರಿಗೆ ಈಗಾಗಲೇ ಬಿಜೆಪಿಯ ನಾಯಕರು ಬೆದರಿಕೆ ಒಡ್ಡುತ್ತಿದ್ದಾರೆ. ಈಗ ಪಕ್ಷದ ವಕ್ತಾರರೇ ಖಾಸಗಿ ಸುದ್ದಿ ವಾಹಿನಿಯಲ್ಲಿ ಬಹಿರಂಗವಾಗಿಯೇ, ಬಿಜೆಪಿ ವಿರುದ್ಧ ರಾಹುಲ್ ಗಾಂಧಿ ಮಾತಾಡಿದರೆ ಗುಂಡು ಹಾರಿಸುತ್ತೇವೆ ಎಂದು ಹೇಳಿಕೆ ನೀಡುವುದು ರಾಹುಲ್ ಗಾಂಧಿ ವಿರುದ್ಧ ಗಂಭಿರವಾಗಿ ಭಾರಿ ಪಿತೂರಿ ನಡೆಸಿರುವುದು ಸ್ಪಷ್ಟವಾಗುತ್ತಿದೆ ಎಂದಿದ್ದಾರೆ.

ಸಂವಿಧಾನ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಲು ಟೊಂಕ ಕಟ್ಟಿ ನಿಂತಿರುವ ವಿಪಕ್ಷ ನಾಯಕ ರಾಹುಲ್ ಗಾಂಧಿಯವರ ವಿರುದ್ಧ ಬಿಜೆಪಿ ನಾಯಕರು ಕೊಲೆಗೆ ಪ್ರಚೋದನೆ ನೀಡುವುದು ಬಾಯಿ ತಪ್ಪಿನಿಂದಲ್ಲ, ಬಿಜೆಪಿಯ ಉದ್ದೇಶ ಬಹಿರಂಗಗೊಂಡಿದೆ.

ಇಂತಹ ಅಪಾಯವನ್ನು ದೇಶದ ಪ್ರತಿಯೊಬ್ಬ ನಾಯಕರು ಖಂಡಿಸಬೇಕಿದೆ. ದೇಶದ ವಿರೋಧ ಪಕ್ಷದ ನಾಯಕರನ್ನೇ ಬಹಿರಂಗವಾಗಿ ಗುಂಡಿಕ್ಕಿ ಕೊಲೆ ಮಾಡುತ್ತೇವೆ ಎನ್ನುವುದು ಬಿಜೆಪಿಯ ದ್ವೇಷಮಯ ರಾಜಕೀಯದ ಪರಮಾವಧಿ. ಕೂಡಲೇ ಬಿಜೆಪಿ ಪಕ್ಷ ಕೊಲೆ ಹೇಳಿಕೆ ನೀಡಿರುವ ವಕ್ತಾರನನ್ನು ಪಕ್ಷದಿಂದ ಉಚ್ಚಾಟಿಸಿ ದೇಶದ ಜನರೆದುರು ಕ್ಷಮೆಯಾಚಿಸಲಿ ಎಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕ್ ಭದ್ರತಾ ಪಡೆ ಪ್ರಧಾನ ಕಚೇರಿ ಹೊರಗೆ ಕಾರ್ ಬಾಂಬ್ ಸ್ಫೋಟ; ಕನಿಷ್ಠ 10 ಮಂದಿ ಸಾವು

ಉಚಿತ ಔಷಧ ಯೋಜನೆ: ಕೆಮ್ಮಿನ ಸಿರಪ್ ಸೇವಿಸಿದ್ದ 5 ವರ್ಷದ ಬಾಲಕ ಸಾವು, ಮತ್ತೊಂದು ಮಗು ಸ್ಥಿತಿ ಗಂಭೀರ!

Elephant stolen: ಜಾರ್ಖಂಡ್‌ನಿಂದ 'ಕಳುವಾಗಿದ್ದ ಹೆಣ್ಣಾನೆ' ಬಿಹಾರದಲ್ಲಿ ಪತ್ತೆ! ಸಿಕ್ಕಿದ್ದು ಹೇಗೆ ಗೊತ್ತಾ?

ಲಡಾಖ್ ಜನರಿಗೆ ಮೋದಿ 'ದ್ರೋಹ'; ಪೊಲೀಸ್ ಗುಂಡಿನ ದಾಳಿ ಬಗ್ಗೆ ನ್ಯಾಯಾಂಗ ತನಿಖೆಗೆ ರಾಹುಲ್ ಆಗ್ರಹ

ಪ್ರವಾಹಕ್ಕೆ ಕಲ್ಯಾಣ ಕರ್ನಾಟಕ ತತ್ತರ: ವೈಮಾನಿಕ ಸಮೀಕ್ಷೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದ ಸಿಎಂ; Video

SCROLL FOR NEXT