ಬಸನಗೌಡ ಪಾಟೀಲ್ ಯತ್ನಾಳ್ 
ರಾಜಕೀಯ

ನಾನು ಸಿಎಂ ಆಗಿ ಮೊದಲ ಸಂಪುಟ ಸಭೆಯಲ್ಲಿಯೇ ಮುಸ್ಲಿಂರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ಹೊರಹಾಕುತ್ತೇನೆ: ಶಾಸಕ ಯತ್ನಾಳ್

ವಿಜಯಪುರದಲ್ಲಿ ಮಾತನಾಡಿದ ಯತ್ನಾಳ್, ಇಂದು ಹನುಮ ಜಯಂತಿ. ಹನುಮಂತನ ಸನ್ನಿಧಾನದಲ್ಲಿ ನಿಂತು ಹೇಳುತ್ತೇನೆ. ನಾನು ಯಾವುದೇ ಕಾರಣಕ್ಕೂ ನನ್ನನ್ನು ಬಿಜೆಪಿಗೆ ಸೇರಿಸಿಕೊಳ್ಳಿ ಅಂತಾ ಹೇಳಲ್ಲ ಎಂದರು.

ವಿಜಯಪುರ: ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ನಾನು ಮುಖ್ಯಮಂತ್ರಿಯಾಗಿ ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ಮುಸ್ಲಿಂರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ಹೊರಹಾಕುತ್ತೇನೆ. ಇವರ ಹೊರತಾಗಿ ಮರಾಠರು, ಬ್ರಾಹ್ಮಣರು, ಕ್ಷತ್ರೀಯರು ಸೇರಿದಂತೆ ಅನೇಕರು ಅಲ್ಪಸಂಖ್ಯಾತರು ಇದ್ದಾರೆ. ಅವರಿಗೆಲ್ಲ ಅಲ್ಪಸಂಖ್ಯಾತ ಸ್ಥಾನಮಾನ ಕೊಡುತ್ತೇನೆ ಎಂದರು.

ವಿಜಯಪುರದಲ್ಲಿ ಮಾತನಾಡಿದ ಯತ್ನಾಳ್, ಇಂದು ಹನುಮ ಜಯಂತಿ. ಹನುಮಂತನ ಸನ್ನಿಧಾನದಲ್ಲಿ ನಿಂತು ಹೇಳುತ್ತೇನೆ. ನಾನು ಯಾವುದೇ ಕಾರಣಕ್ಕೂ ನನ್ನನ್ನು ಬಿಜೆಪಿಗೆ ಸೇರಿಸಿಕೊಳ್ಳಿ ಅಂತಾ ಹೇಳಲ್ಲ. ಅಪ್ಪ-ಮಗನನ್ನು ಕೈಬಿಟ್ಟು ಅವರಾಗಿಯೇ ನನ್ನನ್ನು ಬಿಜೆಪಿಗೆ ಬರುವಂತೆ ಆಹ್ವಾನಿಸುತ್ತಾರೆ. ಬಳಿಕ ಸಿಎಂ ಆಗಿ ರಾಜ್ಯದಲ್ಲಿ ಯೋಗಿ ಆದಿತ್ಯನಾಥ್ ರೀತಿ ರಾಜ್ಯಭಾರ ಮಾಡುತ್ತೇನೆ ಎಂದು ಹೇಳಿದರು.

ಇನ್ನು ಬಾಗಲಕೋಟೆಯ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ನನ್ನ ಆತ್ಮೀಯರು. ಅವರ ಪರ ಪ್ರಚಾರ ಮಾಡುವಂತೆ ಬಿಜೆಪಿ ಕಾರ್ಯಕರ್ತರು ನನ್ನನ್ನು ಕರೆದಿದ್ದಾರೆ. ಅದಕ್ಕಾಗಿ ನಾನು ಚಿರಂತಿಮಠ ಅವರ ಪರ ಪ್ರಚಾರಕ್ಕೆ ಹೋಗುತ್ತಿದ್ದೇನೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

'ಅಭಿವೃದ್ಧಿಶೀಲ ರಾಷ್ಟ್ರಗಳ ಕೈಕಟ್ಟಬೇಡಿ, ಡಂಪಿಂಗ್ ವಿರುದ್ಧ ಸಾಕ್ಷ್ಯಾಧಾರಿತ ಕ್ರಮ ಕೈಗೊಳ್ಳಿ': G20 ಸಭೆಯಲ್ಲಿ ಭಾರತ ಕೆಂಡ

Flydubai ಕಾಕ್‌ಪಿಟ್ ದಾಳಿ: ಸಹ ಪೈಲಟ್ ಗುರುತು ಬಹಿರಂಗ

FlyDubai ಕೋ ಪೈಲಟ್ ಹಾರಾಟಕ್ಕೆ ಒಮಾನ್ ನಲ್ಲಿ ನಿಷೇಧ: ಪತನಕ್ಕೆ ಯತ್ನಿಸಿದ್ದ ಆತ ಉಗ್ರವಾದ ಹಿನ್ನಲೆಯವನೇ?

ಪ್ರೇಮಾನಂದ ಮಹಾರಾಜರ ಶಿಷ್ಯ ಆತ್ಮಹತ್ಯೆಗೂ ಮುನ್ನ ಏನಾಯಿತು? ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ!