ಸಿಎಂ ಸಿದ್ದರಾಮಯ್ಯ, ಆರ್ ಅಶೋಕ್ ಸಾಂದರ್ಭಿಕ ಚಿತ್ರ 
ರಾಜಕೀಯ

ಹಿಂದುಳಿದ ವರ್ಗಗಳ ಅನುದಾನ ಕಡಿತ: ಸಿದ್ದರಾಮಯ್ಯ ವಿರುದ್ಧ ಆಶೋಕ್ ಕಿಡಿ

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆಡಳಿತಾವಧಿಯಲ್ಲಿ ಹಿಂದುಳಿದ ವರ್ಗಗಳ ಮಂಡಳಿಗಳು ಮತ್ತು ನಿಗಮಗಳಿಗೆ ರೂ.1,699 ಕೋಟಿ ಅನುದಾನ ನೀಡಲಾಗಿತ್ತು. ಆದರೆ, ಸಿದ್ದರಾಮಯ್ಯ ಸರ್ಕಾರದಲ್ಲಿ ಇದು ರೂ.643 ಕೋಟಿಗೆ ಇಳಿಕೆಯಾಗಿದೆ.

ಬೆಂಗಳೂರು: ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಮೀಸಲಾದ ಅನುದಾನವನ್ನು ಕಡಿತಗೊಳಿಸಲಾಗಿದ್ದು, ಎಸ್‌ಸಿ/ಎಸ್‌ಟಿ ಅನುದಾನವನ್ನು ಕಲ್ಯಾಣ ನಿಧಿಯನ್ನು ಬೇರೆ ಉದ್ದೇಶಗಳಿಗೆ ತಿರುಗಿಸಲಾಗಿದೆ ಎಂದು ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆಡಳಿತಾವಧಿಯಲ್ಲಿ ಹಿಂದುಳಿದ ವರ್ಗಗಳ ಮಂಡಳಿಗಳು ಮತ್ತು ನಿಗಮಗಳಿಗೆ ರೂ.1,699 ಕೋಟಿ ಅನುದಾನ ನೀಡಲಾಗಿತ್ತು. ಆದರೆ, ಸಿದ್ದರಾಮಯ್ಯ ಸರ್ಕಾರದಲ್ಲಿ ಇದು ರೂ.643 ಕೋಟಿಗೆ ಇಳಿಕೆಯಾಗಿದೆ. ಈಗ ಯಾರನ್ನು ಹಿಂದುಳಿದ ಸಮುದಾಯಗಳ ಪ್ರತಿಪಾದಕ ಎಂದು ಕರೆಯಬೇಕು? ಎಂದು ಪ್ರಶ್ನಿಸಿದ್ದಾರೆ.

ಇದಲ್ಲದೆ, ಸಿದ್ದರಾಮಯ್ಯ ಸರ್ಕಾರವು ಎಸ್‌ಸಿ/ಎಸ್‌ಟಿ ಸಮುದಾಯದ ಜನರ ಅಭಿವೃದ್ಧಿಗೆ ಮೀಸಲಾದ ಸುಮಾರು ರೂ.54,000 ಕೋಟಿಯನ್ನು ಐದು ಗ್ಯಾರಂಟಿ ಯೋಜನೆಗಳಿಗೆ ಬಳಸಿದೆ ಎಂದು ಗಂಭೀರ ಆರೋಪ ಮಾಡಿದರು. ಇದೇ ವೇಳೆ “ಈ ಹಣವನ್ನು ದುರುಪಯೋಗ ಮಾಡಿಲ್ಲ ಎಂದು ಸಿಎಂ ಸಾರ್ವಜನಿಕವಾಗಿ ಹೇಳಲಿ” ಎಂದೂ ಸವಾಲು ಹಾಕಿದರು.

ಬಿಜೆಪಿ ಪಕ್ಷ ಗ್ಯಾರಂಟಿ ಯೋಜನೆಗಳಿಗೆ ವಿರೋಧಿಯಲ್ಲ, ಆದರೆ, ಅವುಗಳನ್ನು ಸರಿಯಾಗಿ ಜಾರಿಗೆ ತರಲಾಗುತ್ತಿಲ್ಲ ಎಂದು ಟೀಕಿಸಿದರು.

ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ಪ್ರತಿ ತಿಂಗಳು ರೂ.2,000 ನೀಡುವುದಾಗಿ ಘೋಷಿಸಿದ್ದರೂ, ವರ್ಷದಲ್ಲಿ ಕೇವಲ ಆರು ತಿಂಗಳು ಮಾತ್ರ ಹಣ ಜಮೆಯಾಗುತ್ತಿದೆ. “ಉಳಿದ ಹಣ ಎಲ್ಲಿಗೆ ಹೋಗುತ್ತಿದೆ?” ಎಂದು ಪ್ರಶ್ನಿಸಿದರು.

ಇದೇ ವೇಳೆ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆ ಉಂಟಾಗಿದೆ ಎಂದು ಹೇಳಿದ ಆಶೋಕ್, ಕಾಂಗ್ರೆಸ್ ಶಾಸಕರೇ ತಮ್ಮ ಕ್ಷೇತ್ರಗಳಿಗೆ ಅನುದಾನ ಸಿಗುತ್ತಿಲ್ಲ ಎಂದು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!

'ನಾವು ಒಂದೂವರೆ ವರ್ಷ ಪ್ರೀತಿಸುತ್ತಿದ್ದೆವು': ಲಂಡನ್ ಲವ್​ ಕಹಾನಿ ನೆನೆದು ಭಾವುಕರಾದ CM ವಿಜಯ್​ ಪುತ್ರ ಜೇಸನ್!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಪಶ್ಚಿಮ ಬಂಗಾಳ ಉಪ ಚುನಾವಣೆ: ಪೊಲೀಸರೊಂದಿಗೆ ಮಾತಿನ ಚಕಮಕಿ: ಶಾಸಕ ಹುಮಾಯೂನ್ ಕಬೀರ್ ಬಂಧನ

ಹೆದ್ದಾರಿಗಳಲ್ಲಿ ನಿಲ್ಲಿಸಿರುವ ವಾಹನಗಳ ಎಲೆಕ್ಟ್ರಾನಿಕ್ ಟ್ರ್ಯಾಕಿಂಗ್ ಸಾಧ್ಯವಾಗುತ್ತಿಲ್ಲವೇಕೆ- NHAI ಗೆ ಸುಪ್ರೀಂ ಕೋರ್ಟ್