ರಮೇಶ್ ಜಾರಕಿಹೊಳಿ 
ರಾಜಕೀಯ

ವೇದಿಕೆ ಸಜ್ಜಾಗಿದೆ, ಕೆಲವೇ ದಿನಗಳಲ್ಲಿ ಯತ್ನಾಳ್‌ ಬಿಜೆಪಿಗೆ ವಾಪಸ್: ಸಂಚಲನ ಸೃಷ್ಟಿಸಿದ ರಮೇಶ್‌ ಜಾರಕಿಹೊಳಿ ಹೇಳಿಕೆ

ಇಂದು ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ಉಚ್ಚಾಟನೆಯಾದ ದಿನದಿಂದ ನಾನು ಯತ್ನಾಳ್‌ ಅವರನ್ನು ಮತ್ತೆ ಬಿಜೆಪಿಗೆ ಕರೆತರುವ ಪ್ರಯತ್ನ ಮಾಡುತ್ತಿದ್ದೇನೆ ಎಂದರು.

ಬೆಳಗಾವಿ: ಬಿಜೆಪಿಯಿಂದ ಉಚ್ಚಾಟಿತರಾಗಿರುವ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕೆಲವೇ ದಿನಗಳಲ್ಲಿ ವಾಪಸ್ ಬಿಜೆಪಿಗೆ ಬರುತ್ತಾರೆ ಎಂದು ಬಿಜೆಪಿ ಶಾಸಕ ರಮೇಶ್‌ ಜಾರಕಿಹೊಳಿ ಅವರು ಮಂಗಳವಾರ ಹೇಳಿದ್ದಾರೆ.

ಇಂದು ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ಉಚ್ಚಾಟನೆಯಾದ ದಿನದಿಂದ ನಾನು ಯತ್ನಾಳ್‌ ಅವರನ್ನು ಮತ್ತೆ ಬಿಜೆಪಿಗೆ ಕರೆತರುವ ಪ್ರಯತ್ನ ಮಾಡುತ್ತಿದ್ದೇನೆ. ಈಗಾಗಲೇ ಒಂದು ವೇದಿಕೆ ಸಜ್ಜಾಗಿದೆ ಎಂದರು.

ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಯತ್ನಾಳ್ ಪ್ರಚಾರ ನಡೆಸಿದ್ದು ಒಳ್ಳೆಯ ಬೆಳವಣಿಗೆ. ಯತ್ನಾಳ್ ಪ್ರಚಾರದಿಂದ ನಮ್ಮ ಅಭ್ಯರ್ಥಿಗೆ ಲಾಭವಾಗಬಹುದು ಎಂದರು.

ಯತ್ನಾಳ್ ಬಿಜೆಪಿಗೆ ಬಂದರೆ ಒಳ್ಳೆಯದು. ಹಿಂದೂ ಸಂಘಟನೆ ಮತ್ತು ಬಿಜೆಪಿ ಮತ ಕ್ರೋಢಿಕರಣಕ್ಕೆ ಅನುಕೂಲವಾಗುತ್ತದೆ. ಉಪಚುನಾವಣೆಯಲ್ಲಿ ನಮ್ಮ ಪಕ್ಷದವರು ಒಳ್ಳೆಯ ರೀತಿಯಲ್ಲಿ ಕೆಲಸ ಮಾಡಿದ್ದು ಗೆಲ್ಲುವ ವಿಶ್ವಾಸ ಇದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!