ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜಕೀಯ

ಉಪಚುನಾವಣೆ ನಂತರ ಮತ್ತೆ ನಾಯಕತ್ವ ಬದಲಾವಣೆ ಚರ್ಚೆ: ಸಿದ್ದರಾಮಯ್ಯ ಬಣ ಏ.12ಕ್ಕೆ ದೆಹಲಿಗೆ

ವಿಧಾನಸಭೆಯ ಮುಖ್ಯ ಸಚೇತಕ ಅಶೋಕ್ ಪಟ್ಟಣ ಅವರ ನೇತೃತ್ವದಲ್ಲಿ ಸುಮಾರು 20 ಶಾಸಕರು ಈ ತಂಡದಲ್ಲಿದ್ದು, ಇತ್ತೀಚೆಗೆ ಮುಖ್ಯಮಂತ್ರಿಯನ್ನು ಭೇಟಿ ಮಾಡಿದ್ದರು.

ಬೆಂಗಳೂರು: ಕರ್ನಾಟಕದಲ್ಲಿ ಉಪ ಚುನಾವಣೆ ಮುಗಿದಿದೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ವಿಚಾರ ಮತ್ತೆ ತಲೆದೋರುವ ಸಾಧ್ಯತೆ ಇದ್ದು, ಸಿಎಂ ಸಿದ್ದರಾಮಯ್ಯ ಬಣಕ್ಕೆ ಸೇರಿದ ಹಿರಿಯ ಶಾಸಕರು ಏಪ್ರಿಲ್ 12ರಂದು ಎರಡು ದಿನಗಳ ದೆಹಲಿ ಪ್ರವಾಸಕ್ಕೆ ಸಿದ್ಧರಾಗಿದ್ದಾರೆ.

ವಿಧಾನಸಭೆಯ ಮುಖ್ಯ ಸಚೇತಕ ಅಶೋಕ್ ಪಟ್ಟಣ ಅವರ ನೇತೃತ್ವದಲ್ಲಿ ಸುಮಾರು 20 ಶಾಸಕರು ಈ ತಂಡದಲ್ಲಿದ್ದು, ಇತ್ತೀಚೆಗೆ ಮುಖ್ಯಮಂತ್ರಿಯನ್ನು ಭೇಟಿ ಮಾಡಿದ್ದರು. ಈ ತಂಡವು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮತ್ತು ಕರ್ನಾಟಕ ಪ್ರಭಾರ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಭೇಟಿ ಮಾಡುವ ಯೋಜನೆ ಹೊಂದಿದೆ.

ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ಸಚಿವ ಸಂಪುಟ ಪುನಾರಚನೆಗೆ ಅನುಮತಿ ನೀಡಬಹುದು ಎಂಬ ನಿರೀಕ್ಷೆಯಲ್ಲಿ ಶಾಸಕರು ಸಚಿವ ಸ್ಥಾನಕ್ಕಾಗಿ ತೀವ್ರ ಲಾಬಿ ನಡೆಸುತ್ತಿದ್ದಾರೆ. ಪಕ್ಷದ ಹಿತದೃಷ್ಟಿಯಿಂದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಎಂಬ ಬೇಡಿಕೆಯನ್ನು ಕೂಡ ಮುಂದಿಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಈ ತಂಡದಲ್ಲಿ ಟಿ.ಬಿ. ಜಯಚಂದ್ರ, ಬೆಳ್ಳೂರು ಗೋಪಾಲಕೃಷ್ಣ, ಟಿ. ರಘುಮೂರ್ತಿ, ಕೆ.ಎಂ. ಶಿವಲಿಂಗೇಗೌಡ, ಕೆ. ಶಡಾಕ್ಷರಿ, ಬಿ.ಆರ್. ಪಾಟೀಲ್, ರಾಜು ಕಾಗೆ, ಲಕ್ಷ್ಮಣ ಸವದಿ, ಎ.ಆರ್. ಕೃಷ್ಣಮೂರ್ತಿ, ಕೆ.ವೈ. ನಂಜೇಗೌಡ, ಎಸ್.ಎನ್. ನಾರಾಯಣಸ್ವಾಮಿ, ರಾಘವೇಂದ್ರ ಹಿತ್ನಾಳ್, ಎಸ್.ಆರ್. ಶ್ರೀನಿವಾಸ್, ರಮೇಶ್ ಬಂಡಿಸಿದ್ದೇಗೌಡ, ಸುಬ್ಬಾರೆಡ್ಡಿ, ಜಿ.ಎಸ್. ಪಾಟೀಲ್ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದಕ್ಕೂ ಮುನ್ನ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಸಿದ್ದರಾಮಯ್ಯ ಅವರು ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದು ಹೇಳಿದ್ದ ಕೆಲವು ದಿನಗಳಲ್ಲೇ ಈ ಬೆಳವಣಿಗೆ ನಡೆದಿದೆ. ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪಚುನಾವಣೆಯ ಫಲಿತಾಂಶ ಯಾವುದೇ ಆಗಿದ್ದರೂ, ಸಿದ್ದರಾಮಯ್ಯ ಅವರೇ ಮುಂದುವರಿಯಬೇಕು ಎಂಬುದು ಅವರ ಶಿಬಿರದ ಆಶಯವಾಗಿದೆ.

“ಕೇರಳದಲ್ಲಿ ಏಪ್ರಿಲ್ 9ರಂದು ಚುನಾವಣೆ ನಂತರ ಕೇಂದ್ರ ನಾಯಕರು ದೆಹಲಿಯಲ್ಲಿ ಲಭ್ಯರಾಗುತ್ತಾರೆ. ಅದಕ್ಕಾಗಿ ಸಿದ್ದರಾಮಯ್ಯ ತಂಡದ ಶಾಸಕರು ದೆಹಲಿಗೆ ತೆರಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದೇ ವೇಳೆ, ಡಿ ಕೆ ಶಿವಕುಮಾರ್ ಬಣದ ಸದಸ್ಯರು—ಮೊದಲ ಬಾರಿ ಶಾಸಕರನ್ನು ಒಳಗೊಂಡಂತೆ—ಚನ್ನಗಿರಿ ಶಾಸಕ ಬಸವರಾಜ ಶಿವಗಂಗ ಅವರ ನೇತೃತ್ವದಲ್ಲಿ ನಾಯಕತ್ವ ಬದಲಾವಣೆಯ ವಿಚಾರವನ್ನು ಮತ್ತೆ ಚರ್ಚೆಗೆ ತರುವ ಯೋಚನೆ ರೂಪಿಸಿದ್ದಾರೆ. ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೂಡ ಶೀಘ್ರದಲ್ಲೇ ಹೈಕಮಾಂಡ್ ಭೇಟಿ ಮಾಡುವ ಸಾಧ್ಯತೆಯನ್ನು ನಿರಾಕರಿಸಲಾಗುವುದಿಲ್ಲ ಎಂದು ಮೂಲಗಳು ಹೇಳಿವೆ.

ನಾಯಕತ್ವ ಬದಲಾವಣೆ ಕುರಿತು ಅಂತಿಮ ನಿರ್ಧಾರವನ್ನು ಹೈಕಮಾಂಡ್, ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ತೆಗೆದುಕೊಳ್ಳುತ್ತಾರೆ ಇತರರು ಹೇಳುವುದಕ್ಕೆ ಹೆಚ್ಚಿನ ಮಹತ್ವವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಎಲ್ಲದಕ್ಕೂ ಸಿದ್ಧವಾಗಿಯೇ ಇದ್ದೇವೆ', Lebanon ನಲ್ಲಿ ಶಾಂತಿ ಸ್ಥಾಪನೆ ಆಗೋವರ್ಗೂ ಅಮೆರಿಕ ಜೊತೆ ಮಾತುಕತೆ ಇಲ್ಲ: Iran ಎಚ್ಚರಿಕೆ

ಆಗ ಮಂಡ್ಯ, ಈಗ ತಮಿಳುನಾಡು: 3 ವಿಜಯ್, 2 ಜೊಸೆಫ್.. ಒಂದೇ ಹೆಸರಿನ ಅಭ್ಯರ್ಥಿಗಳ ಪಟ್ಟಿ, ನಟ Vijay ಹಣಿಯಲು ಏನೆಲ್ಲಾ ಕಸರತ್ತು!

Nirmala Sitharamanಗೆ ಶಾಕ್ ಕೊಟ್ಟ ಪತಿ, ತಮಿಳುನಾಡಿನಲ್ಲಿ BJP ವಿರೋಧಿ ಅಭಿಯಾನದಲ್ಲಿ ಭಾಗಿ!

Reels ಗೀಳು: ಜಲಪಾತಕ್ಕೆ ಇಳಿದು ಮೋಜು, ಕ್ಯಾಮೆರಾ ಮುಂದೆಯೇ 3 ಯುವತಿಯರು ಮುಳುಗಿ ಸಾವು, Video

ಮಹಾಭಿಯೋಗದ ಆತಂಕ: ಅಲಹಾಬಾದ್‌ ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ..!

SCROLL FOR NEXT