ರಾಹುಲ್ ಗಾಂಧಿ-ಜಮೀರ್ ಅಹ್ಮದ್ ಖಾನ್ 
ರಾಜಕೀಯ

ದಾವಣಗೆರೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ: ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ತಲೆದಂಡ; ಜಮೀರ್ ಸಚಿವ ಸ್ಥಾನಕ್ಕೂ ಕುತ್ತು?

ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಕಾಂಗ್ರೆಸ್ ಟಿಕೆಟ್ ಮುಸ್ಲಿಮರಿಗೆ ಕೊಡದಕ್ಕೆ ಶುರುವಾದ ಬಂಡಾಯ ಗೊಂದಲ ನಡುವೆ ಮತದಾನ ಮುಗಿದಿದೆ. ಇದೇ ವೇಳೆ ಮುಸ್ಲಿಂ ನಾಯಕರ ನಡುವಿನ ಮುಸುಕಿನ ಗುದ್ದಾಟ ಜೋರಾಗಿದೆ.

ಬೆಂಗಳೂರು: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಕಾಂಗ್ರೆಸ್ ಟಿಕೆಟ್ ಮುಸ್ಲಿಮರಿಗೆ ಕೊಡದಕ್ಕೆ ಶುರುವಾದ ಬಂಡಾಯ ಗೊಂದಲ ನಡುವೆ ಮತದಾನ ಮುಗಿದಿದೆ. ಆದರೆ ಪಕ್ಷದಲ್ಲಿ ಈಗ ಮುಸ್ಲಿಂ ನಾಯಕರ ನಡುವಿನ ಮುಸುಕಿನ ಗುದ್ದಾಟ ಜೋರಾಗಿದೆ. ಪಕ್ಷದ ಅಭ್ಯರ್ಥಿ ಸಮರ್ಥ್ ಶಾಮನೂರು ಪರ ಪ್ರಚಾರ ಮಾಡದ ಸಚಿವ ಜಮೀರ್ ಅಹ್ಮದ್ ವಿರುದ್ಧ ಮತ್ತೊಂದು ಮುಸ್ಲಿಂ ಬಣ ತಿರುಗಿ ಬಿದ್ದಿತ್ತು.

ದಾವಣಗೆರೆ ಚುನಾವಣೆ ಪ್ರಚಾರದ ವೇಳೆ ನಡೆದ ಹಗ್ಗಜಗ್ಗಾಟ ಆಂತರಿಕ ವರದಿ ಕಾಂಗ್ರೆಸ್ ಹೈಕಮಾಂಡ್ ಕೈಸೇರಿದೆ. ಎಐಸಿಸಿ ಉಸ್ತುವಾರಿ ಕಾರ್ಯದರ್ಶಿ ಅಭಿಷೇಕ್ ದತ್ ನೀಡಿದ ವರದಿಯಲ್ಲಿ ಉಪಚುನಾವಣಾ ಸಂದರ್ಭದಲ್ಲಿ ಪಕ್ಷದ ಆಂತರಿಕ ಬೆಳವಣಿಗೆಗಳು ಮತ್ತು ನಾಯಕರ ನಡುವಿನ ಮುನಿಸು ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಅಡ್ಡಿಯಾಗಬಹುದು ಎಂಬ ಆತಂಕ ವ್ಯಕ್ತಪಡಿಸಿದೆ. ಜಮೀರ್ ಅಹ್ಮದ್ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡಿಲ್ಲ, ಪ್ರಚಾರಕ್ಕೆ ಅಂತ ಬಂದಿದ್ದರೂ ಅವರ ನಡೆ ಯಾರಿಗೂ ಸಮಾಧಾನ ತಂದಿಲ್ಲ. ಮುಸ್ಲಿಂ ನಾಯಕರ ಮನವೊಲಿಕೆ ಮಾಡದೇ ಜಮೀರ್ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು ಇದೀಗ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಶಿಸ್ತು ಕ್ರಮದ ತೂಗುಕತ್ತಿ ನೇತಾಡುತ್ತಿದೆ.

ಅಲ್ಪಸಂಖ್ಯಾತ ಸಮುದಾಯದ ಕೆಲವು ಶಾಸಕರೇ ಸಚಿವ ಜಮೀರ್ ಅಹ್ಮದ್ ವಿರುದ್ಧ ಹೈಕಮಾಂಡ್‌ಗೆ ದೂರು ನೀಡಿದ್ದು, ಸಚಿವ ಸಂಪುಟ ಪುನಾರಚನೆ ವೇಳೆ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ. ಇನ್ನು ಜಮೀರ್ ‘ತಲೆದಂಡ’ವಾಗುವುದು ಬಹುತೇಕ ನಿಶ್ಚಿತ ಎಂಬ ಮಾತುಗಳು ಕೈ ಪಾಳಯದಲ್ಲಿ ಕೇಳಿಬರುತ್ತಿವೆ. ಮತ್ತೊಂದೆಡೆ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಹಾಗೂ ಎಂಎಲ್‌ಸಿ ನಸೀರ್ ಅಹ್ಮದ್ ಅವರಿಗೂ ರಾಜೀನಾಮೆ ನೀಡಲು ಹೈಕಮಾಂಡ್ ಕಟ್ಟುನಿಟ್ಟಿನ ಸೂಚನೆ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT