ಶಾಸಕ ಪುಟ್ಟರಂಗ ಶೆಟ್ಟಿ  
ರಾಜಕೀಯ

ಕಾಂಗ್ರೆಸ್ ನಲ್ಲಿ ಬಿರುಸಿನ ರಾಜಕೀಯ ಚಟುವಟಿಕೆ: 25 ಶಾಸಕರು ದೆಹಲಿಗೆ ಪಯಣ

ಮೂರಕ್ಕಿಂತ ಹೆಚ್ಚು ಬಾರಿ ಚುನಾವಣೆಯಲ್ಲಿ ಗೆದ್ದಿರುವ ಈ ನಾಯಕರು, ಸೋಮವಾರ ಸಂಜೆ ಹಿಂದಿರುಗುವ ಯೋಜನೆ ಮಾಡಿಕೊಂಡಿದ್ದಾರೆ, ಮಂಗಳವಾರ ತಮ್ಮ ತಮ್ಮ ಕ್ಷೇತ್ರಗಳಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆಯಲ್ಲಿ ಭಾಗವಹಿಸಲು ಸಾಧ್ಯವಾಗುತ್ತದೆ ಎಂಬ ಲೆಕ್ಕಾಚಾರದಲ್ಲಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಸ್ಥಾನ ಮುಂದುವರಿಕೆ ಹಾಗೂ ಸಚಿವ ಸಂಪುಟ ಪುನಾರಚನೆ ಕುರಿತು ಸ್ಪಷ್ಟತೆ ಪಡೆಯಲು ಕಾಂಗ್ರೆಸ್ ಹೈಕಮಾಂಡ್ ನ್ನು ಭೇಟಿ ಮಾಡುವುದಕ್ಕೂ ಮುನ್ನವೇ, 25–30 ಕಾಂಗ್ರೆಸ್ ಶಾಸಕರ ಗುಂಪೊಂದು ಇಂದು ಭಾನುವಾರ ದೆಹಲಿಗೆ ತೆರಳಿ ಸಚಿವ ಸ್ಥಾನಕ್ಕೆ ಬೇಡಿಕೆಯಿಡಲು ಮುಂದಾಗಿವೆ.

ಮೂರಕ್ಕಿಂತ ಹೆಚ್ಚು ಬಾರಿ ಚುನಾವಣೆಯಲ್ಲಿ ಗೆದ್ದಿರುವ ಈ ನಾಯಕರು, ಸೋಮವಾರ ಸಂಜೆ ಹಿಂದಿರುಗುವ ಯೋಜನೆ ಮಾಡಿಕೊಂಡಿದ್ದಾರೆ, ಹೀಗಾಗಿ ಮಂಗಳವಾರ ತಮ್ಮ ತಮ್ಮ ಕ್ಷೇತ್ರಗಳಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆಯಲ್ಲಿ ಭಾಗವಹಿಸಲು ಸಾಧ್ಯವಾಗುತ್ತದೆ ಎಂಬ ಲೆಕ್ಕಾಚಾರದಲ್ಲಿದ್ದಾರೆ.

ಈ ಗುಂಪಿನಲ್ಲಿ ಸುಬ್ಬಾರೆಡ್ಡಿ, ಪುಟ್ಟರಂಗ ಶೆಟ್ಟಿ, ಹಂಪನಗೌಡ ಬಾದರ್ಲಿ, ಬಿ.ಜಿ. ಶಾಂತನಗೌಡ, ಎ.ಟಿ. ಪಾಟೀಲ್, ಎ.ಆರ್. ಕೃಷ್ಣಮೂರ್ತಿ, ಪ್ರಸಾದ್ ಅಬ್ಬಯ್ಯ, ಯು.ಬಿ. ಬಣಕಾರ್, ಜಿ.ಎಸ್. ಪಾಟೀಲ್, ಯಶವಂತರಾಯಗೌಡ ಪಾಟೀಲ್, ಕೆ. ಷಡಕ್ಷರಿ, ಅಶೋಕ್ ಪಟ್ಟಣ, ಟಿ.ಬಿ. ಜಯಚಂದ್ರ, ಎಸ್.ಎನ್. ನಾರಾಯಣಸ್ವಾಮಿ, ಲಕ್ಷ್ಮಣ ಸವದಿ, ಅಪ್ಪಾಜಿ ನಾಡಗೌಡ, ರಿಜ್ವಾನ್ ಅರ್ಶದ್, ಪ್ರಿಯಕೃಷ್ಣ, ರಮೇಶ್ ಬಂಡಿಸಿದ್ದೇಗೌಡ, ಬಿ.ಆರ್. ಪಾಟೀಲ್, ಬಿ. ಶಿವಣ್ಣ, ವಿನಯ್ ಕುಲಕರ್ಣಿ, ರಾಘವೇಂದ್ರ ಹಿಟ್ನಾಳ್ ಮತ್ತು ಪಿ.ಎಂ. ನರೇಂದ್ರಸ್ವಾಮಿ ಸೇರಿದ್ದಾರೆ.

ಟಿ ಬಿ ಜಯಚಂದ್ರ ಅವರು, ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಗೆ ಪ್ರಸ್ತಾವನೆ ಸಲ್ಲಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಮುಂದಿನ ಎರಡು ವರ್ಷಗಳಲ್ಲಿ (2028ರ ವಿಧಾನಸಭಾ ಚುನಾವಣೆಗೆ ಮುನ್ನ) ಪಕ್ಷದಲ್ಲಿ ಸದಸ್ಯರೊಳಗೆ ಸಮಸ್ಯೆ, ಭಿನ್ನಾಭಿಪ್ರಾಯ ಬರದಂತೆ, ಇತರರಿಗೂ ಅವಕಾಶ ನೀಡಬೇಕು ಎಂಬುದು ಮುಖ್ಯ ಬೇಡಿಕೆಯಾಗಿದೆ. ಈ ಮನವಿಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮುಂದೆ ಇಡಲಾಗುತ್ತದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೀದಿ ಜೊತೆಗೆ ಕಾಂಗ್ರೆಸ್ ಗೂ ಶಾಕ್; TMC ಬೆಂಬಲ ಬೆನ್ನಲ್ಲೇ ನಂದಿಗ್ರಾಮ 'ಕೈ' ಅಭ್ಯರ್ಥಿ ಕೊಲೆ ಕೇಸ್`ನಲ್ಲಿ ಅರೆಸ್ಟ್!

ಸಾಕ್ಷ್ಯ ವಿಚಾರಣೆ ವೇಳೆ ದರ್ಶನ್ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ, ಷರತ್ತು ಅನ್ವಯ!

T20 ಕ್ರಿಕೆಟ್‌ನಲ್ಲಿ ಹೊಸ ವಿಶ್ವ ದಾಖಲೆ; 15,000 ರನ್‌ ಗಡಿ ದಾಟಿದ Jos Buttler; ಪೊಲಾರ್ಡ್ ದಾಖಲೆ ಧ್ವಂಸ!

ChatGPT ತಂದ ಸಾವು: "ಏನಾಗಲ್ಲ, ಈ ಮಿಶ್ರಣ ಸೇವಿಸು" ಎಂದಿದ್ದ OpenAI; ಮಾತು ನಂಬಿದ 19 ವರ್ಷದ ಯುವಕ ಸಾವು; ತಾಯಿಯ ರೋಧನೆ!

Friendship Cup ಜೊತೆಗೇ ಆಫ್ಘನ್ ಅಭಿಮಾನಿಗಳ ಮನ ಗೆದ್ದ ಟೀಂ ಇಂಡಿಯಾ; Sarpanch Saab ಮಾಡಿದ್ದೇನು?