ಜಯಮೃತ್ಯುಂಜಯ ಸ್ವಾಮೀಜಿ 
ರಾಜಕೀಯ

ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವಿಡಿಯೋ ಕಾಲ್ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್​; ನಾಪತ್ತೆಯಾಗಿದ್ದ ಮಹಿಳೆಯಿಂದ ಸ್ಫೋಟಕ ಹೇಳಿಕೆ

ಪ್ರಕರಣ ಭಾರೀ ಸಂಚಲನ ಸೃಷ್ಟಿಸಿದ ಬೆನ್ನಲ್ಲೇ, ಮಹಿಳಾ ಆಯೋಗಕ್ಕೆ ದೂರು ನೀಡಿದ್ದ ಸಂತ್ರಸ್ತ ಮಹಿಳೆ ನಾಪತ್ತೆಯಾಗಿದ್ದರು. ಆದರೆ ಈಗ ದಿಢೀರ್ ಪ್ರತ್ಯಕ್ಷವಾಗಿ, ಯು-ಟರ್ನ್ ಹೊಡೆದಿದ್ದಾರೆ.

ಬೆಂಗಳೂರು: ಕೂಡಲಸಂಗಮದ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ಕಿರುಕುಳ ಆರೋಪ ಮಾಡಿದ್ದು, ಈ ಸಂಬಂಧ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.

ಪ್ರಕರಣ ಭಾರೀ ಸಂಚಲನ ಸೃಷ್ಟಿಸಿದ ಬೆನ್ನಲ್ಲೇ, ಮಹಿಳಾ ಆಯೋಗಕ್ಕೆ ದೂರು ನೀಡಿದ್ದ ಸಂತ್ರಸ್ತ ಮಹಿಳೆ ನಾಪತ್ತೆಯಾಗಿದ್ದರು. ಆದರೆ ಈಗ ದಿಢೀರ್ ಪ್ರತ್ಯಕ್ಷವಾಗಿ, ಯು-ಟರ್ನ್ ಹೊಡೆದಿದ್ದಾರೆ.

ಇಂದು ವಿಡಿಯೋ ರಿಲೀಸ್ ಮಾಡಿರುವ ಮಹಿಳೆ, ನಾನು ಯಾವುದೇ ರೀತಿಯ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿಲ್ಲ. ನನ್ನ ಮತ್ತು ಸ್ವಾಮೀಜಿ ನಡುವೆ ಗುರು-ಭಕ್ತೆಯ ಸಂಬಂಧವಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಸ್ವಾಮೀಜಿ ವಿರುದ್ಧ ನನ್ನ ಹೆಸರಿನಲ್ಲಿ ಯಾರೋ ದೂರು ದಾಖಲಿಸಿದ್ದಾರೆ. ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ. ಅಲ್ಲದೆ ಏಪ್ರಿಲ್ 6ರಂದು ದೂರು ನೀಡಿರುವುದು ಯಾರು ಅಂತಾ ಗೊತ್ತಿಲ್ಲ. ಅದೊಂದು ಸುಳ್ಳು ದೂರು, ಆ ದೂರನ್ನು ಯಾರೂ ನಂಬಬೇಡಿ. ನಾನು ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ನಾಲ್ಕು ದಿನಗಳ ಬಳಿಕ ಬಂದು ಎಲ್ಲವನ್ನು ವಿವರವಾಗಿ ಹೇಳುತ್ತೇನೆ ಎಂದು ತಿಳಿಸಿದ್ದಾರೆ.

ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ಹೋರಾಟದ ನೇತೃತ್ವ ವಹಿಸಿಕೊಂಡಿದ್ದ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಬೆಂಗಳೂರಿನ ಮಹಿಳೆ ದೂರು ನೀಡಿದ್ದು, ಸ್ವತಃ ಸ್ವಾಮೀಜಿ ನನ್ನ ಖಾಸಗಿ ವಿಡಿಯೋ ಮಾಡಿಕೊಂಡು, ಲೈಂಗಿಕವಾಗಿ ಸಹಕರಿಸುವಂತೆ ಮತ್ತು ಪ್ರತಿನಿತ್ಯ ರಾತ್ರಿ ಬೆತ್ತಲೆ ವಿಡಿಯೋ ಕಾಲ್ ಮಾಡುವಂತೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ತಮ್ಮ ವಿರುದ್ಧ ಗಂಭೀರ ಆರೋಪ ಮಾಡಿದ್ದ ಮಹಿಳೆ ವಿರುದ್ಧ ಸ್ವಾಮೀಜಿ ಪ್ರತಿದೂರು ದಾಖಲಿಸುತ್ತಿದ್ದಂತೆ ಮಹಿಳೆ ನಾಪತ್ತೆಯಾಗಿದ್ದರು. ಪೊಲೀಸರು, ಮಹಿಳೆಯನ್ನು ಸಂಪರ್ಕಿಸಲು ಎಷ್ಟೇ ಯತ್ನ ಮಾಡಿದ್ರೂ ಸಂತ್ರಸ್ಥೆ ಸಂಪರ್ಕಕ್ಕೆ ಸಿಗುತ್ತಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಡಿ.ಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ರಚನೆಗೆ ಇನ್ನೂ ಪ್ರಸ್ತಾವನೆ ಬಂದಿಲ್ಲ: ಮಲ್ಲಿಕಾರ್ಜುನ ಖರ್ಗೆ

T-20 ಮ್ಯಾಚ್ ನಂತೆ ಹೊಸ ಸರ್ಕಾರ: ಡಿಕೆ ಶಿವಕುಮಾರ್ ಆಕ್ಷನ್-ಪ್ಯಾಕ್ ಇನ್ನಿಂಗ್ಸ್; 'ಬಂಡೆ' 'ಪವರ್ ಪ್ಲೇ'- ಆಕ್ರಮಣಕಾರಿ ಬ್ಯಾಟಿಂಗ್!

IPL 2026 Final: RCB vs GT ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆ, ಮ್ಯಾಚ್ ರದ್ದಾದರೆ ಯಾರು ಚಾಂಪಿಯನ್?

ಪಶ್ಚಿಮ ಬಂಗಾಳದಲ್ಲಿ ಮುಂದುವರಿದ ರಾಜಕೀಯ ಹಿಂಸಾಚಾರ: ಅಭಿಷೇಕ್ ಬೆನ್ನಲ್ಲೇ ಕಲ್ಯಾಣ್ ಬ್ಯಾನರ್ಜಿ ಮೇಲೂ ದಾಳಿ, BJP ವಿರುದ್ಧ ಆರೋಪ..!

ಇರಾನ್ ಜೊತೆ ಶಾಂತಿ ಒಪ್ಪಂದದತ್ತ ಅಮೆರಿಕಾ; ಅಣ್ವಸ್ತ್ರ ತ್ಯಜಿಸಲು ಒಪ್ಪಿದ ಟೆಹ್ರಾನ್, ಟ್ರಂಪ್ ಮಹತ್ವದ ಹೇಳಿಕೆ..!

SCROLL FOR NEXT