ಎಚ್.ಡಿ. ಕುಮಾರಸ್ವಾಮಿ 
ರಾಜಕೀಯ

ನನ್ನ ಭವಿಷ್ಯ ಮುಗಿದಿದೆ ಬಿಡಿ; ನನ್ನ ವೈಭವೀಕರಣ ಬೇಡ: ಎಚ್.ಡಿ ಕುಮಾರಸ್ವಾಮಿ

ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಆಗಲಿ ಎಂದು ನೀವು ಕೂಗುವ ಸಮಯ ಇದಲ್ಲ. ನನ್ನ ವೈಭವೀಕರಣ ಬೇಡ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರು ಜೆಡಿಎಸ್‌ ಪಕ್ಷದ ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು.

ಬೆಂಗಳೂರು: ಕುಮಾರಣ್ಣನ ಭವಿಷ್ಯ ಬಿಡಿ, ಕುಮಾರಣ್ಣನ ಭವಿಷ್ಯ ಮುಗಿದು ಹೋಗಿದೆ. ರಾಜ್ಯದ ಜನರ ಭವಿಷ್ಯಕ್ಕಾಗಿ ಕಾರ್ಯಕರ್ತರು ದುಡಿಮೆ ಮಾಡಿ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅಚ್ಚರಿಕೆಯ ಹೇಳಿಕೆ ನೀಡಿದ್ದಾರೆ.

ಜೆಡಿಎಸ್ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಕೇಂದ್ರ ಸಚಿವ ಹೆಚ್​​ಡಿ ಕುಮಾರಸ್ವಾಮಿ, ಕುಮಾರಣ್ಣನ ಭವಿಷ್ಯ ಬಿಡಿ, ಕುಮಾರಣ್ಣನ ಭವಿಷ್ಯ ಮುಗಿದು ಹೋಗಿದೆ. ರಾಜ್ಯದ ಜನರ ಭವಿಷ್ಯಕ್ಕಾಗಿ ಕಾರ್ಯಕರ್ತರು ದುಡಿಮೆ ಮಾಡಿ ಎಂದಿದ್ದಾರೆ.

ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಆಗಲಿ ಎಂದು ನೀವು ಕೂಗುವ ಸಮಯ ಇದಲ್ಲ. ನನ್ನ ವೈಭವೀಕರಣ ಬೇಡ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರು ಜೆಡಿಎಸ್‌ ಪಕ್ಷದ ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು.

ದೇವರ ದಯೆಯಿಂದ, ಎರಡು ಬಾರಿ ಈ ರಾಜ್ಯಕ್ಕೆ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಪೂರ್ಣಪ್ರಮಾಣದ ಬಹುಮತ ಇಲ್ಲದಿದ್ದರೂ ಸಾಧ್ಯವಾದಷ್ಟು ಒಳ್ಳೆಯ ಕೆಲಸಗಳನ್ನು ಮಾಡಿದ್ದೇನೆ. ಸಮಾಜದ ಎಲ್ಲಾ ವರ್ಗದ ಜನರನ್ನು ಸಮಾನ ದೃಷ್ಟಿಯಲ್ಲಿ ನೋಡಿದ್ದೇನೆ.

ನೀವು ಮುಂದಿನ ಮುಖ್ಯಮಂತ್ರಿ ಆಗಬೇಕು ಎಂದು ಶುಭ ಹಾರೈಸುವುದು, ನನ್ನ ಮೇಲೆ ಇಟ್ಟಿರುವ ಪ್ರೀತಿ ಮತ್ತು ನಂಬಿಕೆಯನ್ನು ಸೂಚಿಸುತ್ತದೆ. ಇಂತಹ ವೇದಿಕೆಯಲ್ಲಿ ರಾಜಕೀಯ ಮಾತನಾಡುವುದು ಬೇಡ ಎಂದು ಅವರು ಮುಖಂಡರು ಮತ್ತು ಕಾರ್ಯಕರ್ತರಿಗೆ ಸೂಚಿಸಿದರು.

ಇನ್ಮುಂದೆ ವಾರದಲ್ಲಿ ಎರಡು ದಿನ ಕರ್ನಾಟಕದಲ್ಲೇ ಇರುತ್ತೇನೆ. ನಾನು ಮನಸ್ಸಿಂದ ಹೇಳ್ತಿದ್ದೇನೆ, ರಾಜ್ಯಕ್ಕೆ ಒಳ್ಳೆಯದು ಆಗಬೇಕಂದ್ರೆ ಜೆಡಿಎಸ್ ಅನಿವಾರ್ಯ ಎಂದು ಕುಮಾರಸ್ವಾಮಿ ಹೇಳಿದ್ರು.

ಮೋದಿಯವರ ನಾಯಕತ್ವದಲ್ಲಿ ಮಹಿಳೆಯರಿಗೆ ಶೇ. 33 ರಷ್ಟು. 42 ಕ್ಷೇತ್ರಗಳು ನಮ್ಮ ರಾಜ್ಯದಲ್ಲಿ ಲೋಕಸಭೆ ಕ್ಷೇತ್ರಗಳು ಬರಲಿವೆ. ಈ 42 ಲೋಕಸಭೆ ಕ್ಷೇತ್ರಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ಸಿಗಲಿದೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಅಲೋಕ್ ಕುಮಾರ್ ನೇತೃತ್ವದಲ್ಲಿ SIT ರಚನೆ; ಹೈಕೋರ್ಟ್​​ನಿಂದ ಮಹತ್ವದ ಆದೇಶ

Bihar horror: ಅಪ್ರಾಪ್ತ ಜೋಡಿ ಅಡ್ಡಗಟ್ಟಿ ಲೈಂಗಿಕ ಕಿರುಕುಳ; ಆಂಧಭಕ್ತರೇ ಹೊಣೆ - ರಾಹುಲ್ ಗಾಂಧಿ

ಚಳಿ ಚಳಿ ತಾಳೆನು ಈ ಚಳಿಯಾ! ಹಿರಿಯ ನಟಿ ಅಂಬಿಕಾ ವಿರುದ್ಧ 46 ಕೋಟಿ ರೂ. ಮೌಲ್ಯದ ಚೆಕ್ ವಂಚನೆ ಪ್ರಕರಣ, ದೂರು ದಾಖಲು

CSKಗೆ ಮುಖ್ಯ ಕೋಚ್ ಆಗಿ RCB ಮಾಜಿ ಆಟಗಾರ ನೇಮಕ: ಕೊನೆಗೂ ವದಂತಿಗಳಿಗೆ ತೆರೆ!

ಶೋಭಾಯಾತ್ರೆ ವೇಳೆ ಪ್ರಚೋದನಕಾರಿ ಭಾಷಣ, FIR: ಪ್ರತಾಪ್ ಸಿಂಹ ಅಭಿಪ್ರಾಯ ಅವರ ವೈಯಕ್ತಿಕ, ಪಕ್ಷದ್ದಲ್ಲ- ಯದುವೀರ್ ಒಡೆಯರ್