ನಾರಿ ಶಕ್ತಿ ವಂದನಾ ಅಧಿನಿಯಮ ಬಗ್ಗೆ ಕಾಂಗ್ರೆಸ್‌ ವಿರುದ್ಧ ಇಂದು ಬಿಜೆಪಿ ಪತ್ರಿಕಾಗೋಷ್ಠಿ ನಡೆಸಿ, ಪೋಸ್ಟರ್‌ ಬಿಡುಗಡೆ ಮಾಡಿತು.  
ರಾಜಕೀಯ

'ಸಿದ್ದರಾಮಯ್ಯ ಆಪ್ತರನ್ನು ಡಿ.ಕೆ ಶಿವಕುಮಾರ್ ಹುಡುಕಿ ಹೊಡೆದು ಹಾಕುತ್ತಿದ್ದಾರೆ, ಗೇಟ್ ಪಾಸ್ ಕೊಡೋದ್ರಲ್ಲಿ ಸಕ್ಸಸ್ ಕೂಡ ಆಗುತ್ತಿದ್ದಾರೆ': R ಅಶೋಕ್ ವ್ಯಂಗ್ಯ

ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜಿಬಿಎ ಚುನಾವಣೆ ಬರುವುದರೊಳಗೆ ಇನ್ನಷ್ಟು ತೆರಿಗೆ ಏರಿಕೆಗೆ ಸಿದ್ಧತೆ ನಡೆದಿದೆ, ಮಾರಿಹಬ್ಬ ಕಾದಿದೆ ಎಂದಿದ್ದಾರೆ. ಅಲ್ಲದೆ, ಕಾಂಗ್ರೆಸ್ ಪಕ್ಷ ಒಳಜಗಳದಿಂದ ಬಡವಾಗಿದೆ. ನಾಯಕತ್ವವೇ ಇಲ್ಲದೆ ಸೊರಗಿದೆ ಎಂದು ಟೀಕಿಸಿದ್ದಾರೆ.

ಬೆಂಗಳೂರು: ಸಿಎಂ ಸಿದ್ದರಾಮಯ್ಯ ರಾಜ್ಯದ ಪಾಲಿಗೆ ಕುತಂತ್ರಿಯಾಗಿದ್ದು, ಸದ್ದಿಲ್ಲದೆ ವಿದ್ಯುತ್ ದರ ಏರಿಕೆ ಮಾಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಟೀಕಿಸಿದ್ದಾರೆ.

ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜಿಬಿಎ ಚುನಾವಣೆ ಬರುವುದರೊಳಗೆ ಇನ್ನಷ್ಟು ತೆರಿಗೆ ಏರಿಕೆಗೆ ಸಿದ್ಧತೆ ನಡೆದಿದೆ, ಮಾರಿಹಬ್ಬ ಕಾದಿದೆ ಎಂದಿದ್ದಾರೆ. ಅಲ್ಲದೆ, ಕಾಂಗ್ರೆಸ್ ಪಕ್ಷ ಒಳಜಗಳದಿಂದ ಬಡವಾಗಿದೆ. ನಾಯಕತ್ವವೇ ಇಲ್ಲದೆ ಸೊರಗಿದೆ ಎಂದು ಟೀಕಿಸಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬಣಗಳ ನಡುವೆ ಆಂತರಿಕ ಸಂಘರ್ಷ ತೀವ್ರಗೊಂಡಿದೆ. ಸಿದ್ದರಾಮಯ್ಯ ಸಣ್ಣ ಸಣ್ಣ ಇಲಿಗಳನ್ನು ಹೊಡೆಯುತ್ತಿದ್ದರೆ, ಡಿಕೆ ಶಿವಕುಮಾರ್ ದೊಡ್ಡ ದೊಡ್ಡ ಹುಲಿಗಳನ್ನು ಹೊಡೆಯುತ್ತಿದ್ದಾರೆ ಎಂದು ಅವರು ವ್ಯಂಗ್ಯವಾಡಿದ್ದಾರೆ.

ಕ್ಯಾಬಿನೆಟ್‌ನಿಂದ ತೆಗೆದುಹಾಕಲ್ಪಟ್ಟ ರಾಜಣ್ಣ, ನಾಗೇಂದ್ರ, ಮತ್ತು ಜಮೀರ್‌ರಂತಹ ಸಿದ್ದರಾಮಯ್ಯ ಬೆಂಬಲಿಗರನ್ನು ವ್ಯವಸ್ಥಿತವಾಗಿ ಪಕ್ಷದಿಂದ ದೂರ ಮಾಡಲಾಗುತ್ತಿದೆ. ದಾವಣಗೆರೆಯ ಜಬ್ಬಾರ್ ಮತ್ತು ಸಿಎಂ ಕಾರ್ಯದರ್ಶಿಯಾಗಿದ್ದ ನಜೀರ್‌ರನ್ನು ಸಹ ಗೇಟ್ ಪಾಸ್ ನೀಡಿ ಹೊರಹಾಕಲಾಗಿದೆ. ಸಿದ್ದರಾಮಯ್ಯ ಬೆಂಬಲಿಗರಿಗೆ ಕಾಂಗ್ರೆಸ್‌ನಲ್ಲಿ ಉಳಿಗಾಲವಿಲ್ಲ. ಒಟ್ಟಾರೆ ಕಾಂಗ್ರೆಸ್ ಪಕ್ಷವು ನಾಯಕತ್ವವಿಲ್ಲದೆ ಬೀದಿ ಭಿಕಾರಿಯಾಗಿದೆ ಎಂದು ಅವರು ಟೀಕಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel