ಸಾ ರಾ ಮಹೇಶ್ 
ರಾಜಕೀಯ

NDA ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ: ಸಿದ್ದರಾಮಯ್ಯ ವಿರುದ್ಧ ಸಾ.ರಾ ಮಹೇಶ್ ಕಿಡಿ

ಸಿದ್ದರಾಮಯ್ಯ ಅವರೇ ನೀವು ಮತ್ತು ನಿಮ್ಮ ಮಗ ಯತೀಂದ್ರ ಮಾತ್ರ ಅಧಿಕಾರದಲ್ಲಿ ಇರಬೇಕಾ? ದಯಮಾಡಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್, ಮಹಾನಗರ ಪಾಲಿಕೆ ಚುನಾವಣೆ ಮಾಡಿ ಸ್ವಾಮಿ.

ಮೈಸೂರು: ಜೆಡಿಎಸ್ ನಾಯಕ ಹಾಗೂ ಮಾಜಿ ಸಚಿವ ಸಾ.ರಾ.ಮಹೇಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಂಶಪಾರಂಪರ್ಯ ರಾಜಕೀಯ ಆರೋಪ ಮಾಡಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪುತ್ರ ಡಾ. ಯತೀಂದ್ರ ಅವರನ್ನು ವರುಣಾ ಕ್ಷೇತ್ರದಿಂದ ಬೆಂಗಳೂರಿನ ಮತದಾರರ ಪಟ್ಟಿಗೆ ವರ್ಗಾಯಿಸಿರುವುದನ್ನು ಟೀಕಿಸಿದ್ದಾರೆ.

ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆಯಲ್ಲಿ ಯತೀಂದ್ರ ಅವರಿಗೆ ಪ್ರಮುಖ ಸ್ಥಾನ ನೀಡುವ ಉದ್ದೇಶದಿಂದ ಮಾಡಲಾಗಿರುವ "ವಂಶಪಾರಂಪರ್ಯ ರಾಜಕಾರಣ" ಎಂದು ಆರೋಪಿಸಿದ್ದಾರೆ.

ಸಿದ್ದರಾಮಯ್ಯ ಅವರೇ ನೀವು ಮತ್ತು ನಿಮ್ಮ ಮಗ ಯತೀಂದ್ರ ಮಾತ್ರ ಅಧಿಕಾರದಲ್ಲಿ ಇರಬೇಕಾ? ದಯಮಾಡಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್, ಮಹಾನಗರ ಪಾಲಿಕೆ ಚುನಾವಣೆ ಮಾಡಿ ಸ್ವಾಮಿ ಎಂದು ಆಗ್ರಹಿಸಿದರು.

ಐದು ವರ್ಷವೂ ನಮ್ಮ ತಂದೆಯೇ ಸಿಎಂ ಎಂದು ಯತೀಂದ್ರ ಹೇಳಿದ್ದಾರೆ. ಅದು ಅವರ ಪಕ್ಷದ ವಿಚಾರ. ನೀವು ಎಷ್ಟು ವರ್ಷವಾದರೂ ಅಧಿಕಾರದಲ್ಲಿರಿ. ನಿಮ್ಮ ಅಧಿಕಾರದ ಅವಧಿಯಲ್ಲೇ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ನಗರ ಪಾಲಿಕೆ, ಗ್ರಾಮ ಪಂಚಾಯಿತಿ ಚುನಾವಣೆ ಮಾಡಿ ಎಂದು ಒತ್ತಾಯಿಸಿದರು,

ಸಮಾಜವಾದಿ ಎಂದು ಹೇಳಿಕೊಳ್ಳುವ ನೀವು, ನಿಮ್ಮ ಮಗನೇ ಅಧಿಕಾರದಲ್ಲಿದ್ದರೆ ಹೇಗೆ? ಪಕ್ಷಕ್ಕಾಗಿ ದುಡಿದಿರುವ ಇತರರಿಗೂ ಅಧಿಕಾರ ಕೊಡಿ. ಯಾವುದೇ ಪಕ್ಷದ ಕಾರ್ಯಕರ್ತನಾಗಿರಲಿ ಅವರು ಜಿಪಂ, ತಾಪಂ, ನಗರ ಪಾಲಿಕೆ ಸದಸ್ಯನಾಗಲು ಚುನಾವಣೆ ನಡೆಸಬೇಕು. ನಮಗೆ ಅಧಿಕಾರಿ ಸಿಗುವುದಿಲ್ಲ ಎಂಬ ಭಯದಿಂದ ಚುನಾವಣೆ ಮಾಡದೇ ಇದ್ದರೆ ಅದು ಪ್ರಜಾಪ್ರಭುತ್ವದ ಕಗ್ಗೊಲೆ. ಚುನಾವಣೆಯಲ್ಲಿ ಸೋಲು ಗೆಲುವು ಸಾಮಾನ್ಯ ಎಂಬ ಬದ್ಧತೆ ಇದ್ದರೆ ಕೂಡಲೇ ಚುನಾವಣೆ ಮಾಡಿ ಎಂದು ಆಗ್ರಹಿಸಿದರು.

ಸಿದ್ದರಾಮಯ್ಯ ಸಿಎಂ ಆದಾಗಲೆಲ್ಲ ಮೈಸೂರು ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿಯಲು ಸಾಧ್ಯವಾಗಿಲ್ಲ. ಈಗ ಚುನಾವಣೆ ನಡೆಸಿದರೆ ಎನ್ ಡಿಎ ಮೈತ್ರಿಕೂಟ ಅಧಿಕಾರ ಹಿಡಿಯುತ್ತದೆ ಎಂಬ ಭಯ ಸಿದ್ದರಾಮಯ್ಯರನ್ನು ಕಾಡುತ್ತಿದೆ. ಇದೇ ಕಾರಣದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಆರೋಪಿಸಿದರು.

ನಮ್ಮದು ಕುಟುಂಬ ರಾಜಕಾರಣವಲ್ಲ ಎಂಬ ಯತೀಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಆಶ್ರಯ ಸಮಿತಿ ಸದಸ್ಯ ಯಾರು? ಎಂಎಲ್ಸಿ ಯಾರು? ಬಿಡಿಎ ಸದಸ್ಯನಾಗಲು ಮೈಸೂರಿನ ಮತದಾರರ ಪಟ್ಟಿಯಲ್ಲಿ ಹೆಸರು ತೆಗೆಸಿ, ಬೆಂಗಳೂರಿನಲ್ಲಿ ಸೇರಿಸಿದ್ದು ಯಾಕೆ? ನಿಮ್ಮ ಯಾರೂ ನಿಷ್ಠಾವಂತ ಕಾರ್ಯಕರ್ತ ಇರಲಿಲ್ಲವೇ? ಇದರಲ್ಲಿ ಯಾರದು ಕುಟುಂಬ ರಾಜಕಾರಣ ಎಂದು ಪ್ರಶ್ನಿಸಿದರು.

ನಮ್ಮದು ಸಣ್ಣ ಪಕ್ಷ. ನಿಮ್ಮಂತೆ ರಾಷ್ಟ್ರೀಯ ಪಕ್ಷವಲ್ಲ. ನಮಗೆ ಪಕ್ಷವೇ ಕುಟುಂಬ. ಕುಮಾರಸ್ವಾಮಿ ಅವರು ಎಲ್ಲವನ್ನೂ ಬಿಟ್ಟು ಎಲ್ಲಿದ್ದವರನ್ನೋ ಕರೆದುಕೊಂಡು ಬಂದು ಅಧಿಕಾರ ಕೊಡುತ್ತಾರೆ. ಅವರು ಕೈಕೊಟ್ಟು ಹೋಗುತ್ತಾರೆ. ಅದಕ್ಕೆ ಅವರಿಂದ ಬೈಸಿಕೊಳ್ಳುವ ಬದಲು ಕುಟುಂಬದವರಿಗೆ ಕೊಡುತ್ತೇವೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

13 ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ ಮಾಡಿದ CM ಡಿಕೆ ಶಿವಕುಮಾರ್; ಯಾರಿಗೆ ಯಾವ ಖಾತೆ?

ವಾಹನ ಸವಾರರಿಗೆ ಗುಡ್ ನ್ಯೂಸ್: ಟ್ರಾಫಿಕ್ ದಂಡ ಪಾವತಿಗೆ ಮತ್ತೆ ಶೇ.50 ರಷ್ಟು ಡಿಸ್ಕೌಂಟ್ ಘೋಷಣೆ

ರಾಜ್ಯಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ; ಕರ್ನಾಟಕದಿಂದ ಖರ್ಗೆ ಸೇರಿ ಮೂವರಿಗೆ ಟಿಕೆಟ್

ಮಹಿಳಾ ಮೀಸಲಾತಿ, ಡಿಲಿಮಿಟೇಶನ್ ಮಸೂದೆ ಮಂಡನೆಗೆ ಮತ್ತೆ ಕೇಂದ್ರ ಸಿದ್ಧತೆ: TMC-DMK ಬೆಂಬಲ ಸಾಧ್ಯತೆ?

Cricket: IPL 2026 ಮುಕ್ತಾಯದ ಬೆನ್ನಲ್ಲೇ ಹೊಸ ವಿವಾದ, MI ಅರ್ಧ ಹಣ ಮಾತ್ರ ಕೊಟ್ರು; Mitchell Santner ಹೊಸ ಬಾಂಬ್

SCROLL FOR NEXT