ನಿಖಿಲ್ ಕುಮಾರಸ್ವಾಮಿ ಮತ್ತು ಹರೀಶ್ ಗೌಡ 
ರಾಜಕೀಯ

ಮುಂದೊಂದು ದಿನ ನಿಖಿಲ್ CM ಆಗೇ ಆಗ್ತಾರೆ; ಮೂರು ಚುನಾವಣೆಯಲ್ಲಿ ಸೋತಿದ್ದರೂ ಅಧಿಕಾರಕ್ಕೆ ಅಂಟಿಕೊಂಡಿಲ್ಲ: G.D ಹರೀಶ್ ಗೌಡ

ಹಿಂದೆ ಮೈಸೂರು ಜಿಲ್ಲೆಯ ಮೂರು ವಿಧಾನಸಭೆ ಕ್ಷೇತ್ರಗಳಲ್ಲಿ ಜೆಡಿಎಸ್ ಶಾಸಕರು ಗೆದ್ದಿದ್ದರು, ಈಗಲೂ ಜಿಲ್ಲೆಯಲ್ಲಿ ಜೆಡಿಎಸ್ ಪ್ರಬಲವಾಗಿದೆ ಎಂದು ಹೇಳಿದರು.

ಮೈಸೂರು: ಮೂರು ಚುನಾವಣೆಯಲ್ಲಿ ಸೋತಿದ್ದರೂ ನಿಖಿಲ್ ಅಧಿಕಾರಕ್ಕೆ ಅಂಟಿಕೊಂಡಿಲ್ಲ, ಪಕ್ಷದ ಬೆಳವಣಿಗೆಗಾಗಿ ಶ್ರಮಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ನಿಖಿಲ್ ಕುಮಾರಸ್ವಾಮಿ ಕೂಡ ರಾಜ್ಯದ ಮುಖ್ಯಮಂತ್ರಿ ಆಗಲಿದ್ದಾರೆ ಎಂಬ ಶಾಸಕೆ ಜಿ.ಡಿ ಹರೀಶ್ ಗೌಡ ವಿಶ್ವಾಸ ವ್ಯಕ್ತಪಡಿಸಿದರು.

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿಂದೆ ಮೈಸೂರು ಜಿಲ್ಲೆಯ ಮೂರು ವಿಧಾನಸಭೆ ಕ್ಷೇತ್ರಗಳಲ್ಲಿ ಜೆಡಿಎಸ್ ಶಾಸಕರು ಗೆದ್ದಿದ್ದರು, ಈಗಲೂ ಜಿಲ್ಲೆಯಲ್ಲಿ ಜೆಡಿಎಸ್ ಪ್ರಬಲವಾಗಿದೆ ಎಂದು ಹೇಳಿದರು.

ಇಂದಿನ ಕಾರ್ಯಕ್ರಮದ ಮೂಲಕ ಜೆಡಿಎಸ್ ತನ್ನ ಶಕ್ತಿಯನ್ನು ತೋರಿಸಿದೆ. 2028ರ ವೇಳೆಗೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಬೇಕು ಎಂಬುದು ಜನರ ಆಶಯ ಎಂದು ಹೇಳಿದರು.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದ ಅವರು, ಪಕ್ಷವನ್ನು ಸಂಘಟಿಸಲು ನಿಖಿಲ್‌ ಕುಮಾರಸ್ವಾಮಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಂಪುಟ ವಿಸ್ತರಣೆ ಸರ್ಕಸ್ ನಂತರ ಖಾತೆ ಹಂಚಿಕೆ ಕಸರತ್ತು; ಯಾರಿಗೆ ಯಾವ ಖಾತೆ? ಇಲ್ಲಿದೆ ಸಂಪೂರ್ಣ ಪಟ್ಟಿ

ರಾಜ್ಯದ ರೈತರಿಗೆ ತಕ್ಷಣ 10 ಸಾವಿರ ಕೋಟಿ ರೂ. ಪರಿಹಾರ ಬಿಡುಗಡೆ ಮಾಡಿ: ರಾಜ್ಯ ಸರ್ಕಾರಕ್ಕೆ ಬಿ.ವೈ. ವಿಜಯೇಂದ್ರ ಆಗ್ರಹ

ಮದ್ಯಪ್ರಿಯರಿಗೆ ಶಾಕ್: ಹಲವು ಬ್ರ್ಯಾಂಡ್ ರಮ್, ವಿಸ್ಕಿ ಬ್ಯಾನ್: ನಿಮ್ಮ ಪ್ರಿಯವಾದದ್ದು ಇದೆಯೇ? ಇಲ್ಲಿದೆ ಮಾಹಿತಿ...

ಮಹಿಳೆಯರಿಗೆ ಸಿಹಿ ಸುದ್ದಿ; 'ಋತುತಾರೆ' ಯೋಜನೆ ಜಾರಿ, ರಾಯಭಾರಿಯಾಗಿ ನಟಿ ರಮ್ಯಾ

ಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದು BMTC ಕಂಡಕ್ಟರ್ ಅಟ್ಟಹಾಸ; Video ವೈರಲ್ ಬೆನ್ನಲ್ಲೇ ನಿರ್ವಾಹಕ ಅಮಾನತು!