ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬೀರನಗಡ್ಡಿ ಗ್ರಾಮದಲ್ಲಿ ನಿರ್ಮಾಣವಾದ ಜಗಜ್ಯೋತಿ ಶ್ರೀ ಬಸವೇಶ್ವರ ಅಶ್ವಾರೂಢ ಕಂಚಿನ ಪುತ್ಥಳಿ ಅನಾವರಣ ಸಮಾರಂಭದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್  
ರಾಜಕೀಯ

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪಕ್ಷ ಆರಂಭ: ಬಸನಗೌಡ ಪಾಟೀಲ್ ಯತ್ನಾಳ್

ಜಿಲ್ಲಾವಾರು ಹಿಂದುತ್ವದ ಸಭೆ ಮಾಡುತ್ತೇನೆ. ಕೋಲಾರ ಜಿಲ್ಲೆಯ ಐತಿಹಾಸಿಕ ವಿಘ್ನೇಶ್ವರ ದೇವಸ್ಥಾನದಿಂದ ಸಭೆ ಪ್ರಾರಂಭ ಮಾಡುತ್ತೇನೆ ಎಂದು ಹೇಳಿದರು.

ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿಕೊಂಡು ಹೊಸ ರಾಜಕೀಯ ಪಕ್ಷ ಸ್ಥಾಪನೆ ಮಾಡುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ.

ನಿನ್ನೆ ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿಕೊಂಡು JCB ಪಕ್ಷ ಸ್ಥಾಪನೆ ಮಾಡುತ್ತೇನೆ. ಜಿಲ್ಲಾವಾರು ಹಿಂದುತ್ವದ ಸಭೆ ಮಾಡುತ್ತೇನೆ. ಕೋಲಾರ ಜಿಲ್ಲೆಯ ಐತಿಹಾಸಿಕ ವಿಘ್ನೇಶ್ವರ ದೇವಸ್ಥಾನದಿಂದ ಸಭೆ ಪ್ರಾರಂಭ ಮಾಡುತ್ತೇನೆ ಎಂದು ಹೇಳಿದರು.

ಹಿಂದುತ್ವ, ನಿರುದ್ಯೋಗ, ಅಭಿವೃದ್ಧಿ ಮೂರು ಉದ್ದೇಶಗಳೊಂದಿಗೆ ಸಭೆ ಮಾಡುತ್ತೇನೆ. ಮುಂದಿನ ದಿನಗಳಲ್ಲಿ ಪ್ರಾದೇಶಿಕ ಪಕ್ಷ ಕಟ್ಟುವ ಬಗ್ಗೆ ಜನರ ಅಭಿಪ್ರಾಯ ಪಡೆಯುತ್ತೇನೆ. ಪ್ರಾದೇಶಿಕ ಪಕ್ಷ ಕಟ್ಟುವ ಚಿಂತನೆ ಪ್ರಾರಂಭವಾಗಿದೆ. ಮೇ ತಿಂಗಳಲ್ಲಿ ಒಳ್ಳೆಯ ಮುಹೂರ್ತ ನೋಡಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ ಎಂದು ತಿಳಿಸಿದರು.

ಮೊದಲು ಜಿಲ್ಲಾ ಕೇಂದ್ರ ನಂತರ ತಾಲೂಕು ಕೇಂದ್ರಗಳಿಗೆ ಹೋಗುತ್ತೇನೆ. ಹಿಂದೂಪರ ಚಿಂತನೆ ಉಳ್ಳ ನಿರುದ್ಯೋಗಿ ಯುವಕರನ್ನು, ಅಭಿವೃದ್ಧಿ ಚಿಂತನೆ ಪರ ಇರುವ ಜನರ ಸಭೆ ಮಾಡುತ್ತೇನೆ. ಜನರ ಅಭಿಪ್ರಾಯ ಪಡೆದು ಮುಂದೆ ಪ್ರಾದೇಶಿಕ ಪಕ್ಷ ಕಟ್ಟುವ ಬಗ್ಗೆ ಚಿಂತನೆ ಮಾಡುತ್ತೇನೆ. ಚುನಾವಣೆ ಆಯೋಗ ನನ್ನ ಪಕ್ಷಕ್ಕೆ ಯಾವ ಗುರುತು ನೀಡುತ್ತದೆ ಎಂದು ನೋಡಬೇಕಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಶುಭ್ ಮನ್ ಗಿಲ್ ದಾಖಲೆಯನ್ನೇ ಹಿಂದಿಕ್ಕಿದ Rishabh Pant, ಡಬ್ಲ್ಯೂಟಿಸಿಯಲ್ಲಿ ಅತ್ಯಧಿಕ ರನ್, ಅಗ್ರಸ್ಥಾನ