ಡಿಕೆ.ಶಿವಕುಮಾರ್  
ರಾಜಕೀಯ

ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ, ಹೈಕಮಾಂಡ್ ನಾಯಕರ ಭೇಟಿ ಮಾಡಿದ್ದೇನೆ: ಡಿ.ಕೆ ಶಿವಕುಮಾರ್ ಮಾರ್ಮಿಕ ನುಡಿ

ನಾನು ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದೇನೆ. ಆದರೆ, ಯಾರನ್ನು ಭೇಟಿ ಮಾಡಿದ್ದೇನೆ ಎಂಬುದನ್ನು ಹೇಳುವುದಿಲ್ಲ. ದೆಹಲಿಗೆ ಗಾಳಿ ಕುಡಿಯಲು ಬಂದಿಲ್ಲ' ಎಂದು ಮಾರ್ಮಿಕವಾಗಿ ನುಡಿದರು.

ಬೆಂಗಳೂರು/ನವದೆಹಲಿ: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ಜೋರಾಗಿರುವ ನಡುವೆಯೇ, ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರ ದೆಹಲಿ ಭೇಟಿ ಮತ್ತಷ್ಟು ಕುತೂಹಲ ಮೂಡಿಸಿದೆ.

ಗುರುವಾರ ಸಂಜೆ ನವದೆಹಲಿ ತಲುಪಿದ ಅವರು ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾದುದಾಗಿ ತಿಳಿಸಿದ್ದಾರೆ. ಆದರೆ, ಯಾರನ್ನೆಲ್ಲಾ ಭೇಟಿ ಮಾಡಿದೆ ಎಂಬುದನ್ನು ಬಹಿರಂಗಪಡಿಸುವುದಿಲ್ಲ ಎಂದು ಹೇಳಿದ್ದಾರೆ.

ನಾನು ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದೇನೆ. ಆದರೆ, ಯಾರನ್ನು ಭೇಟಿ ಮಾಡಿದ್ದೇನೆ ಎಂಬುದನ್ನು ಹೇಳುವುದಿಲ್ಲ. ದೆಹಲಿಗೆ ಗಾಳಿ ಕುಡಿಯಲು ಬಂದಿಲ್ಲ' ಎಂದು ಮಾರ್ಮಿಕವಾಗಿ ನುಡಿದರು.

‘ತಮಿಳುನಾಡು, ಕೇರಳ ಮತ್ತು ಅಸ್ಸಾಂ ರಾಜ್ಯಗಳಲ್ಲಿ ಚುನಾವಣೆ ಪ್ರವಾಸ ಮಾಡಿದ್ದೆ. ಎಲ್ಲೆಲ್ಲಿ ಏನಾಗಿದೆ ಎಂದು ನಮ್ಮ ನಾಯಕರಿಗೆ ಮಾಹಿತಿ ನೀಡಬೇಕಿದೆ. ಈ ಮೂರು ರಾಜ್ಯಗಳಲ್ಲಿ ಪ್ರಚಾರ ಮಾಡಲು ಪಕ್ಷ ನನಗೆ ಜವಾಬ್ದಾರಿ ನೀಡಿತ್ತು. ಕರ್ನಾಟಕದಲ್ಲಿ ಚುನಾವಣೆ ಮಾಡುವುದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿಯಾಗಿ ನನ್ನ ಕರ್ತವ್ಯ. ಅದನ್ನು ಮಾಡುತ್ತೇನೆ‘ ಎಂದು ತಿಳಿಸಿದರು.

ರಾಜ್ಯದಲ್ಲಿ ಬದಲಾವಣೆಗಳ ಬಗ್ಗೆ ಚರ್ಚೆ ಮಾಡುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಜವಾಬ್ದಾರಿ ಸ್ಥಾನದಲ್ಲಿರುವ ನಾನು ಈ ವಿಚಾರವಾಗಿ ಮಾಧ್ಯಮಗಳ ಮುಂದೆ ಚರ್ಚೆ ಮಾಡಲು ಆಗುವುದೇ? ನಾನು ಮಾಧ್ಯಮಗಳ‌ ಮುಂದೆ ಮಾತಾಡುವುದಿಲ್ಲ. ನೀವು ನನ್ನಿಂದ ಈ ಬಗ್ಗೆ ಮಾಹಿತಿ ಪಡೆಯುವ ಪ್ರಯತ್ನವನ್ನೂ ಮಾಡಬೇಡಿ‘ ಎಂದರು.

ಮುಖ್ಯಮಂತ್ರಿಗಳ ಗೌಪ್ಯ ಸಭೆ ಕುರಿತ ಪ್ರಶ್ನೆಗೆ ಉತ್ತರಿಸಿ, ಮುಖ್ಯಮಂತ್ರಿ ಆಪ್ತ ಸಚಿವರು ಬುಧವಾರ ಭೇಟಿ ಮಾಡಿ ಚರ್ಚೆ ಮಾಡಿರುವ ಬಗ್ಗೆ ಮಾಹಿತಿ ಇಲ್ಲ. ಯಾರು ಯಾರ ಆಪ್ತರು, ಯಾರಿಗೆ ಆಪ್ತರಲ್ಲ ಎಂಬುದು ನನಗೆ ಗೊತ್ತಿಲ್ಲ. ನಾನು ಈ ಸಭೆಗಳ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ‘ ಎಂದು ಹೇಳಿದರು.

ಒಟ್ಟಿನಲ್ಲಿ, ಹೈಕಮಾಂಡ್ ಭೇಟಿ ಕುರಿತು ವಿವರಗಳನ್ನು ಬಹಿರಂಗಪಡಿಸದಿರುವುದು ಹಾಗೂ ರಾಜ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ಮೌನ ವಹಿಸಿರುವುದು, ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಆಂತರಿಕ ಚರ್ಚೆಗಳ ಬಗ್ಗೆ ಇನ್ನಷ್ಟು ಕುತೂಹಲ ಹೆಚ್ಚಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

40 ಕೋಟಿ ಯುವಕರು ದೇಶದ ನಿಜವಾದ ಶಕ್ತಿ, ಆದರೆ ನಿರುದ್ಯೋಗ ತಾಂಡವವಾಡುತ್ತಿದೆ: ಉತ್ತರಪ್ರದೇಶದಲ್ಲಿ ರಾಹುಲ್ ಗಾಂಧಿ

Toxic Trailer: ನಾನು ಬರೋ ಸಮಯ ಬಂದಿದೆ ಎಂದ ಯಶ್, ನಾವೆಲ್ಲರೂ ಕಾಯುತ್ತಿದ್ದೇವೆ ಎಂದ ಶಿವಣ್ಣ!

UPI ಪಾವತಿಗಳಿಗೆ ಶುಲ್ಕ ವಿಧಿಸಲ್ಲ: ಯಾರಿಗೆ MDR ವಿಧಿಸಲಾಗುತ್ತದೆ ಎಂಬುದನ್ನು ಬಹಿರಂಗಪಡಿಸಿದ ಕೇಂದ್ರ ಸರ್ಕಾರ!

ಟೆಸ್ಟ್ ಪಂದ್ಯದ ಕೊನೆಯ ಓವರ್​ನಲ್ಲಿ 6, 6, 0, 6, 6 ಸಿಡಿಸಿದ ಗುರ್ನೂರ್ ಬ್ರಾರ್; ಗಂಭೀರ್ ಚಲ್ಲಾಳೆ, Video!

ಅಸಮಾಧಾನಿತ ಕಾಂಗ್ರೆಸ್ ಶಾಸಕರಿಗೆ ಕುಮಾರಸ್ವಾಮಿ ಆಫರ್; ಹೊಸ ದಾಳ ಉರುಳಿಸಿದ 'ದಳಪತಿ'