ಆರ್.ಅಶೋಕ್, ಸಿಎಂ ಸಿದ್ದರಾಮಯ್ಯ ಸಾಂದರ್ಭಿಕ ಚಿತ್ರ 
ರಾಜಕೀಯ

ಒಳ ಮೀಸಲಾತಿ ವಿಚಾರದಲ್ಲಿ ಸರ್ಕಾರದಿಂದ 'ಎಸ್ಕೇಪ್ ಫಾರ್ಮುಲಾ' ಅನುಸರಣೆ: ಆರ್.ಅಶೋಕ್ ಕಿಡಿ

ಒಂದು ಕಡೆ ಉದ್ಯೋಗಕ್ಕಾಗಿ ಯುವಕರು ಪ್ರತಿಭಟನೆ ನಡೆಸುತ್ತಿದ್ದರೆ, ಮತ್ತೊಂದೆಡೆ ಪರಿಶಿಷ್ಟ ಸಮುದಾಯಗಳು ಒಳ ಮೀಸಲಾತಿಗಾಗಿ ಹೋರಾಟ ನಡೆಸುತ್ತಿವೆ. ಈ ಎರಡೂ ಸಮಸ್ಯೆಗಳಿಂದ ತಪ್ಪಿಸಿಕೊಳ್ಳಲು ಕಾಂಗ್ರೆಸ್ ಸರ್ಕಾರ ಈ ರೀತಿಯ ನಾಟಕ ಮಾಡುತ್ತಿದೆ.

ಬೆಂಗಳೂರು: ಒಳಮೀಸಲಾತಿ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ಎಸ್ಕೇಪ್ ಫಾರ್ಮುಲಾ’ ಅನುಸರಿಸಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಈ ಕ್ರಮದಿಂದ ಯಾವುದೇ ಸಮುದಾಯಕ್ಕೂ ಲಾಭವಾಗುವುದಿಲ್ಲ ಎಂದು ಟೀಕಿಸಿದರು.

ಒಂದು ಕಡೆ ಉದ್ಯೋಗಕ್ಕಾಗಿ ಯುವಕರು ಪ್ರತಿಭಟನೆ ನಡೆಸುತ್ತಿದ್ದರೆ, ಮತ್ತೊಂದೆಡೆ ಪರಿಶಿಷ್ಟ ಸಮುದಾಯಗಳು ಒಳ ಮೀಸಲಾತಿಗಾಗಿ ಹೋರಾಟ ನಡೆಸುತ್ತಿವೆ. ಈ ಎರಡೂ ಸಮಸ್ಯೆಗಳಿಂದ ತಪ್ಪಿಸಿಕೊಳ್ಳಲು ಕಾಂಗ್ರೆಸ್ ಸರ್ಕಾರ ಈ ರೀತಿಯ ನಾಟಕ ಮಾಡುತ್ತಿದೆ ಎಂದು ಕಿಡಿಕಾರಿದರು.

ಬಿಜೆಪಿ ಸರ್ಕಾರದ ಅವಧಿಯಲ್ಲಿ 17 ಶೇಕಡಾ ಮೀಸಲಾತಿ ನೀಡಲಾಗಿತ್ತು. ಆದರೆ, ಈಗ ಅದನ್ನು 15 ಶೇಕಡಾಗೆ ಇಳಿಸಲಾಗಿದೆ. ಇದನ್ನು ನ್ಯಾಯಾಲಯದಲ್ಲಿ ಸಮರ್ಥಿಸುವ ಬದಲು ಸರ್ಕಾರ ‘ಎಸ್ಕೇಪ್ ಫಾರ್ಮುಲಾ’ ಅನುಸರಿಸಿದೆ ಎಂದು ಆರೋಪಿಸಿದರು. ಇದರಿಂದ ಪರಿಶಿಷ್ಟ ಸಮುದಾಯಗಳಿಗೆ ನ್ಯಾಯ ದೊರಕಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.

ಇದೇ ವೇಳೆ, 52 ಜಾತಿಗಳ ಪ್ರತಿನಿಧಿಗಳು ಮತ್ತು ಸ್ವಾಮೀಜಿಗಳೊಂದಿಗೆ ಚರ್ಚೆ ನಡೆಸದೇ ಸರ್ಕಾರ ತೀರ್ಮಾನ ಕೈಗೊಂಡಿರುವುದು ಸರಿಯಲ್ಲ. ಎಲ್ಲ ಸಮುದಾಯಗಳ ಅಭಿಪ್ರಾಯ ಪಡೆದು ಬಳಿಕವೇ ಈ ರೀತಿಯ ನಿರ್ಧಾರ ಕೈಗೊಳ್ಳಬೇಕಿತ್ತು ಎಂದು ಒತ್ತಾಯಿಸಿದರು.

ಅಲ್ಲದೆ, ಒಳ ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದ ಅಶೋಕ್ ಅವರು, ಸಚಿವರು ತಮ್ಮ ಸ್ಥಾನ ಉಳಿಸಿಕೊಳ್ಳಲು ಒಗ್ಗೂಡಬಹುದು, ಆದರೆ ಸಮುದಾಯದ ಜನರು ನ್ಯಾಯಕ್ಕಾಗಿ ಹೋರಾಟ ನಿಲ್ಲಿಸುವುದಿಲ್ಲ ಎಂದು ಎಚ್ಚರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026 : ಚಿನ್ನ ಗೆದ್ದ ಭಾರತದ ಪುರುಷರ ಹಾಕಿ ತಂಡ; ಒಲಿಂಪಿಕ್ಸ್‌ಗೆ ಅರ್ಹತೆ

ಆಸ್ಪತ್ರೆಗೆ ಭೇಟಿ ನೀಡಿ, ಫ್ಲೈದುಬೈ ಹೀರೋ ಸ್ಮಿತ್ ಮಚ್ಚಾರ್ ಹಣೆಗೆ ಮುತ್ತಿಟ್ಟ ದುಬೈ ಕ್ರೌನ್ ಪ್ರಿನ್ಸ್! ಹೇಳಿದ್ದೇನು?

ವಿಂಡೀಸ್ ವಿರುದ್ಧದ ಪಂದ್ಯದಲ್ಲಿ 9ನೇ ಶತಕ ಸಿಡಿಸಿದ KL Rahul: 10,000 ಅಂತಾರಾಷ್ಟ್ರೀಯ ರನ್!

ಅಂತಿಮ ಹಂತದಲ್ಲಿ 21 ಚಿನ್ನದ ಪದಕಗಳು: 2026 ರ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಒಟ್ಟು 85 ಪದಕ!

Asian Games 2026: ಪಾಕಿಸ್ತಾನ ಬಗ್ಗು ಬಡಿದ ಭಾರತಕ್ಕೆ ಮತ್ತೊಂದು ಚಿನ್ನ: ಗೋಲ್ಡ್ ಗೆದ್ದ ಕುಸ್ತಿಪಟು ಅಮನ್!