ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

ಮುಖ್ಯಮಂತ್ರಿ ಕುರ್ಚಿಗಾಗಿ 40-50 ಶಾಸಕರು ದೆಹಲಿಗೆ ತೆರಳಲು ಸಿದ್ಧತೆ: HDK ಹೊಸ ಬಾಂಬ್

ಇಂದು ಕೋಲಾರ ಜಿಲ್ಲೆಯ ಮಾಲೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಮುಖ್ಯಮಂತ್ರಿ ಹುದ್ದೆಗಾಗಿ 40 ರಿಂದ 50 ಶಾಸಕರು ದೆಹಲಿಗೆ ತೆರಳಲು ಸಿದ್ಧತೆ ನಡೆಸಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದರು.

ಕೋಲಾರ: ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ಕಿತ್ತಾಟ ನಡೆಯುತ್ತಿದ್ದು, ಒಬ್ಬರು ನಾನೇ ಐದು ವರ್ಷ ಸಿಎಂ ಎನ್ನುತ್ತಾರೆ. ಮತ್ತೊಬ್ಬರು ನನಗೆ ಎರಡೂವರೆ ವರ್ಷ ನಿಗದಿಯಾಗಿತ್ತು ಎನ್ನುತ್ತಾರೆ. ಪ್ರತಿನಿತ್ಯ ಇದನ್ನು ಬಿಟ್ಟರೆ ರಾಜ್ಯದಲ್ಲಿ ಯಾವ ಸಮಸ್ಯೆ ಚರ್ಚೆಯಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಸೋಮವಾರ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಇಂದು ಕೋಲಾರ ಜಿಲ್ಲೆಯ ಮಾಲೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಮುಖ್ಯಮಂತ್ರಿ ಹುದ್ದೆಗಾಗಿ 40 ರಿಂದ 50 ಶಾಸಕರು ದೆಹಲಿಗೆ ತೆರಳಲು ಸಿದ್ಧತೆ ನಡೆಸಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದರು.

ರಾಜ್ಯದಲ್ಲಿ ಈಗ ಜನ ಎದುರಿಸುತ್ತಿರುವ ಕುಡಿಯುವ ನೀರು ಮತ್ತು ಬಿಸಿಲಿನಂತಹ ಗಂಭೀರ ಸಮಸ್ಯೆಗಳ ಬಗ್ಗೆ ಯಾವುದೇ ಚಿಂತನೆ ಇಲ್ಲ ಎಂದು ಕುಮಾರಸ್ವಾಮಿ ಟೀಕಿಸಿದರು.

ಇದೇ ವೇಳೆ ಅಳಂದದ ಹಿರಿಯ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ಅವರ ಹೇಳಿಕೆಯನ್ನು ಉಲ್ಲೇಖಿಸಿದ ಕುಮಾರಸ್ವಾಮಿ, ಕುಡಿಯುವ ನೀರಿನ ಸಮಸ್ಯೆಗಳನ್ನು ಬಗೆಹರಿಸಲು ಒಂದು ರೂಪಾಯಿಯೂ ಇಲ್ಲ, ಪಿಡಿಓಗಳು ಲಭ್ಯ ಇಲ್ಲ ಎಂದು ಬಿ.ಆರ್. ಪಾಟೀಲ್ ಹೇಳಿದ್ದಾರೆ. ಇದು ರಾಜ್ಯದಲ್ಲಿ ಕಾಂಗ್ರೆಸ್ ಪರಿಸ್ಥಿತಿ ಎಂದು ಅವರು ವಿವರಿಸಿದರು.

ಇತ್ತೀಚೆಗೆ ಅಲ್ಲಲ್ಲಿ ಆಲಿಕಲ್ಲು ಮಳೆ ಬಿದ್ದು ಹಲವಾರು ಭಾಗದಲ್ಲಿ ಬಾಳೆ, ದ್ರಾಕ್ಷಿ, ದಾಳಿಂಬೆ ಬೆಳೆ ನಾಶವಾದರೂ ಯಾವುದರ ಬಗ್ಗೆಯೂ ಗಮನ ಹರಿಸುತ್ತಿಲ್ಲ ಎಂದು ಆರೋಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್