ಎಚ್.ಡಿ ರಂಗನಾಥ್ 
ರಾಜಕೀಯ

ಮೇ 15 ರಂದು ಡಿ.ಕೆ ಶಿವಕುಮಾರ್ ಹುಟ್ಟುಹಬ್ಬ; ಅಷ್ಟರಲ್ಲಿ ಡಿಸಿಎಂಗೆ ಬಂಪರ್ ಗಿಫ್ಟ್: ಶಾಸಕ ರಂಗನಾಥ್

ಮೇ 15 ರಂದು ಡಿ.ಕೆ. ಶಿವಕುಮಾರ್ ಅವರ ಜನ್ಮದಿನವಿದೆ. ಅಷ್ಟರೊಳಗೆ ಅವರಿಗೆ ಯಾವುದಾದರೂ ಸಂತೋಷದ ವಿಚಾರ ಅಥವಾ ‘ಸಿಹಿ ಸುದ್ದಿ’ ಬರಬಹುದು ಎಂಬ ಆಶಯ ನಮ್ಮದಾಗಿದೆ” ಎಂದು ಹೇಳುವ ಮೂಲಕ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ್ದಾರೆ.

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಶೀಘ್ರದಲ್ಲೇ ಒಳ್ಳೆಯ ಸ್ಥಾನ ಸಿಗಲಿದೆ ಎಂದು ಕುಣಿಕಲ್ ಶಾಸಕ ಡಾ. ರಂಗನಾಥ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಸಿಎಂ ಸ್ಥಾನ ಬದಲಾವಣೆಯ ವದಂತಿಗಳಿಗೆ ಅವರು ಪರೋಕ್ಷವಾಗಿ ಪುಷ್ಟಿ ನೀಡಿದ್ದಾರೆ.

ನಾವು ನಮ್ಮ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಬೇಕು, ಫಲಾಫಲಗಳನ್ನು ದೇವರಿಗೆ ಬಿಡಬೇಕು. ಅದೇ ರೀತಿ ನಮ್ಮ ಡಿ.ಕೆ. ಶಿವಕುಮಾರ್ ಸಾಹೇಬರು ಪಕ್ಷದ ಜವಾಬ್ದಾರಿಯನ್ನು ಹೊತ್ತು ನಿಷ್ಠೆಯಿಂದ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಮುಂಬರುವ ದಿನಗಳಲ್ಲಿ ಒಳ್ಳೆಯ ಸ್ಥಾನ ಸಿಗಬೇಕು ಎನ್ನುವುದು ನಮ್ಮೆಲ್ಲರ ನಿರೀಕ್ಷೆಯಾಗಿದೆ. ಹೈಕಮಾಂಡ್ ಈ ಸಂಬಂಧ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬ ವಿಶ್ವಾಸ ನಮಗಿದೆ ಎಂದು ರಂಗನಾಥ್ ಹೇಳಿದರು.

ಮೇ 15 ರಂದು ಡಿ.ಕೆ. ಶಿವಕುಮಾರ್ ಅವರ ಜನ್ಮದಿನವಿದೆ. ಅಷ್ಟರೊಳಗೆ ಅವರಿಗೆ ಯಾವುದಾದರೂ ಸಂತೋಷದ ವಿಚಾರ ಅಥವಾ ‘ಸಿಹಿ ಸುದ್ದಿ’ ಬರಬಹುದು ಎಂಬ ಆಶಯ ನಮ್ಮದಾಗಿದೆ” ಎಂದು ಹೇಳುವ ಮೂಲಕ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಒಪ್ಪಂದದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅಂತಹ ಒಂದು ಒಪ್ಪಂದವಾಗಿದೆ ಎಂಬ ವಿಚಾರ ಎಲ್ಲರ ತಲೆಯಲ್ಲೂ ಇದೆ. ಆದರೆ, ಆ ಒಪ್ಪಂದದ ಸ್ವರೂಪ ಏನು ಎಂಬುದನ್ನು ಹೈಕಮಾಂಡ್ ಸ್ಪಷ್ಟಪಡಿಸಬೇಕು. ಈ ಮೂಲಕ ಹೈಕಮಾಂಡ್ ಸದ್ಯ ಇರುವ ಗೊಂದಲವನ್ನು ಬಗೆಹರಿಸಬೇಕು. ಇದನ್ನು ನಾವಷ್ಟೇ ಅಲ್ಲ, ಎಲ್ಲರೂ ಹೇಳುತ್ತಿದ್ದಾರೆ ಎಂದು ಉತ್ತರಿಸಿದರು.

ಸಿದ್ದರಾಮಯ್ಯ ಅವರು ಪ್ರಸ್ತುತ ಒಳ್ಳೆಯ ಆಡಳಿತ ನೀಡುತ್ತಿದ್ದಾರೆ. ಆದರೆ, ಮುಂದಿನ ದಿನಗಳಲ್ಲಿ ಡಿ.ಕೆ. ಶಿವಕುಮಾರ್ ಅವರಿಗೂ ಮುಖ್ಯಮಂತ್ರಿ ಸ್ಥಾನ ಸಿಗಬೇಕು ಎನ್ನುವುದು ನಮ್ಮ ಆಸೆ. ಹೈಕಮಾಂಡ್ ಏನೇ ನಿರ್ಧಾರ ತಗೊಂಡರೂ ನಾವು ಅದಕ್ಕೆ ಬದ್ಧರಾಗಿರುತ್ತೇವೆ. ವರಿಷ್ಠರು ಸೂಕ್ತ ನಿರ್ಧಾರ ತಗೊಳ್ಳುತ್ತಾರೆ ಎಂಬ ವಿಶ್ವಾಸವಿದೆ. ಎಲ್ಲದಕ್ಕೂ ಕಾಲ ಬರಬೇಕು, ಕಾಲಾಯ ತಸ್ಮೈ ನಮಃ ಎಂದು ಅವರು ಮಾರ್ಮಿಕವಾಗಿ ನುಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

ಬಿಡದಿ ಯೋಜನೆಗೆ ಭೂಸ್ವಾಧೀನ ವಿರೋಧಿಸಿ ಜೆಡಿಎಸ್ ಪಾದಯಾತ್ರೆ: ಮಾಜಿ ಪ್ರಧಾನಿ HD ದೇವೇಗೌಡ ಭಾಗಿ

Maharashtra: ಶಾಲಾ ಹಾಸ್ಟೆಲ್‌ನಲ್ಲಿ ಭೀಕರ ದುರಂತ: ಮಲಗಿದ್ದ 6 ಬಾಲಕಿಯರಿಗೆ ಹಾವು ಕಡಿತ, ಮೂವರ ಸಾವು!