ಕೆಎನ್ ರಾಜಣ್ಣ online desk
ರಾಜಕೀಯ

CM ಸಿದ್ದರಾಮಯ್ಯ ಪದತ್ಯಾಗಕ್ಕೂ ಸಿದ್ಧರಾಗಿದ್ದಾರೆ: ಮಾಜಿ ಸಚಿವ ಕೆ.ಎನ್ ರಾಜಣ್ಣ ಸ್ಫೋಟಕ ಹೇಳಿಕೆ; Video

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜಣ್ಣ, ನಾಯಕತ್ವ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ಗೊಂದಲ ಬಗೆಹರಿಸಬೇಕು ಎಂದರು.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರದಲ್ಲಿ ಮುಂದುವರಿಯಲು ಮತ್ತು ಪದತ್ಯಾಗ ಎರಡಕ್ಕೂ ಸಿದ್ಧರಾಗಿದ್ದಾರೆ ಎಂದು ಸಿಎಂ ಆಪ್ತ, ಮಾಜಿ‌ ಸಚಿವ ಕೆ.ಎನ್.ರಾಜಣ್ಣ ಅವರು ಮಂಗಳವಾರ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜಣ್ಣ, ನಾಯಕತ್ವ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ಗೊಂದಲ ಬಗೆಹರಿಸಬೇಕು. ಗೊಂದಲ ಬಗೆಹರಿಸಿದಷ್ಟು ರಾಜ್ಯಕ್ಕೆ ಒಳ್ಳೆಯದು. ಗೊಂದಲ ಮುಂದುವರಿಯಲು ಹೈಕಮಾಂಡ್ ಅವಕಾಶ ನೀಡಬಾರದು ಎಂದರು.

ಹೈಕಮಾಂಡ್ ಏನು ಹೇಳುತ್ತದೆಯೋ ಅದಕ್ಕೆ ಸಿದ್ದರಾಮಯ್ಯ ಬದ್ಧರಾಗಿದ್ದಾರೆ. ಇದು ಆತುರದಲ್ಲಿ ತೆಗೆದುಕೊಳ್ಳುವ ನಿರ್ಧಾರ ಅಲ್ಲ. ಸಿದ್ದರಾಮಯ್ಯ ಅವರು ಅಧಿಕಾರದಲ್ಲಿ ಮುಂದುವರಿಯಲೂ ಸಿದ್ದರಾಗಿದ್ದಾರೆ ಮತ್ತು ಪದತ್ಯಾಗಕ್ಕೂ ಸಿದ್ದರಾಗಿದ್ದಾರೆ ಎಂದರು‌.

ಇದರಲ್ಲಿ ಪಕ್ಷದ ಭವಿಷ್ಯ ಅಡಗಿರುತ್ತದೆ. ಹೀಗಾಗಿ ಹೈಕಮಾಂಡ್ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳುವ ವಿಶ್ವಾಸವಿದೆ. ಸಿಎಂ ಜೊತೆಗೆ ಸಭೆ ಮಾಡಿದಾಗಲೂ ಅವರು ಓಪನ್ ಮೈಂಡ್​​ನಲ್ಲಿ ಇದ್ದಾರೆ. ರಾಹುಲ್ ಗಾಂಧಿ ಸೂಚನೆ ಪಾಲನೆ ಮಾಡುತ್ತೇನೆ. ಆಗ ನಿಮ್ಮೆಲ್ಲರ ಸಹಕಾರ ಇರಬೇಕು ಎಂದು ಸಿಎಂ ಅಭಿಮತ ವ್ಯಕ್ತಪಡಿಸಿದ್ದಾರೆ. ರಾಹುಲ್ ಗಾಂಧಿ ತೆಗೆದುಕೊಳ್ಳುವ ತೀರ್ಮಾನದಂತೆ ನಡೆಯೋಣ ಎಂದಿದ್ದಾರೆ ಎಂದು ತಿಳಿಸಿದರು.

ಅಧಿಕಾರ ಶಾಶ್ವತವಲ್ಲ. ಅಧಿಕಾರ ಕಳೆದುಕೊಂಡವರು ಗಳಿಸ್ತಾರೆ. ರಾಹುಲ್ ಗಾಂಧಿ ನಿರ್ದೇಶನದಂತೆ ಹೋಗಬೇಕು ಎಂಬುದು ಸಿಎಂ ಮನಸ್ಥಿತಿ. ಸಿದ್ದರಾಮಯ್ಯ ಮುಂದುವರಿಯಬೇಕು ಎಂಬ ಬಗ್ಗೆ ನಾವೆಲ್ಲ ನಮ್ಮ ಅಭಿಪ್ರಾಯವನ್ನು ಹೈಕಮಾಂಡ್​ಗೆ ಹೇಳಿದ್ದೇವೆ ಎಂದರು.

ದಲಿತ ಸಿಎಂ ಆಗಬೇಕು ಎಂಬುದಕ್ಕೆ ನಾನು ಈಗಲೂ ಬದ್ಧ. ಅಹಿಂದ ವರ್ಗ ನಿಜವಾಗಿ ಸಮಾಧಾನವಾಗಿಲ್ಲ. 2013-18 ರ ಸಿದ್ದರಾಮಯ್ಯಗೂ ಈಗಿನ 2023-28 ಸಿದ್ದರಾಮಯ್ಯಗೂ ಬಹಳ ವ್ಯತ್ಯಾಸ ಇದೆ. ಮುಂದಿನ ಚುನಾವಣೆ ಎರಡು ವರ್ಷ ಇದೆ. ಮುಂದಿನ ರಾಜಕೀಯ ಹೀಗೇ ಆಗಬಹುದು ಎಂಬುದನ್ನು ಹೇಳಲು ಈಗಲೇ ಸಾಧ್ಯವಿಲ್ಲ. ರಾಜಕಾರಣದಲ್ಲಿ ಬಹಳಷ್ಟು ನೀರು ಹರಿಬೇಕಾದ ಸಮಯವೂ ಇದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

'JDS ಪಾದಯಾತ್ರೆಯ ಬಂಡವಾಳ ಬಯಲು ಮಾಡಿದ ವಿಜಯೇಂದ್ರ': ಕಾಂಗ್ರೆಸ್​​ನಿಂದ ವಿಡಿಯೋ ಬಿಡುಗಡೆ!

ಅಮೃತ್ ಭಾರತ್ ಯೋಜನೆಗೆ ವೇಗದ ಕೊರತೆ? ಕರ್ನಾಟಕದ 61 ರೈಲು ನಿಲ್ದಾಣಗಳಲ್ಲಿ 12 ಮಾತ್ರ ಮೇಲ್ದರ್ಜೆಗೆ

D Boss ವಿರುದ್ಧ ಸ್ನೇಹಿತರೇ 'ಸಾಕ್ಷ್ಯ': ರೇಣುಕಾಸ್ವಾಮಿ ಚಡ್ಡಿ ಬಿಚ್ಚಿ ದರ್ಶನ್‌ ಹೊಡೆದಿದ್ದರು, ನೇಣು ಹಾಕೋ ಯತ್ನ- ಪ್ರದೋಷ್ ಸಲ್ಲಿಸಿದ ಅರ್ಜಿಯಲ್ಲಿ ಮತ್ತೇನಿದೆ?

TNIE Exclusive | Air India ವಿಮಾನದಲ್ಲಿ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?