ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

ಸಚಿವ ಸುಧಾಕರ್ ಆರೋಗ್ಯದ ಬಗ್ಗೆ ಸರ್ಕಾರ ವಾಸ್ತವಾಂಶ ಜನರ ಮುಂದಿಡಲಿ: ಎಚ್.ಡಿ ಕುಮಾರಸ್ವಾಮಿ

ಮೇಕೆದಾಟು ಯೋಜನೆ ವಿಷಯದಲ್ಲಿ ಸುಪ್ರೀಂಕೋರ್ಟ್‌ ಕೇಂದ್ರದ ಪರವಾಗಿದೆ ಎಂದು ಬಾಲಿಶವಾಗಿ ಮಾತನಾಡುವ ಕಾಂಗ್ರೆಸ್‌, ಅದಕ್ಕೆ ಅಡ್ಡಿಯಾಗಿರುವ ಅವರ ಮಿತ್ರ ಪಕ್ಷದ ಪರವಾಗಿ ತಮಿಳುನಾಡಿನಲ್ಲಿ ಬಿರುಸಿನ ಪ್ರಚಾರ ನಡೆಸಿದೆ.

ಕೋಲಾರ: ಸಚಿವ ಡಿ.ಸುಧಾಕರ್‌ ಅವರ ಆರೋಗ್ಯ ಕುರಿತು ರಾಜ್ಯ ಸರ್ಕಾರ ವಾಸ್ತವಾಂಶವನ್ನು ಜನರ ಮುಂದೆ ಇಡಬೇಕು. ವಾಸ್ತವಾಂಶವನ್ನು ಜನರ ಮುಂದೆ ಇಟ್ಟಿದ್ದರೆ ನಾನು ಅದನ್ನು ಪ್ರಶ್ನಿಸುತ್ತಿರಲಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಕೋಲಾರದಲ್ಲಿ ಮಾತನಾಡಿದ ಅವರು ಹೆಬ್ಬೆಟ್ಟು ಒತ್ತಿಸಿಕೊಳ್ಳಲು ಸುಧಾಕರ್‌ ಆರೋಗ್ಯ ವಿಷಯ ಮುಚ್ಚಿಟ್ರಾ? ಎಂಬ ತಮ್ಮ ಹೇಳಿಕೆಗೆ ಸಮಜಾಯಿಷಿ ನೀಡಿದರು. ಸಚಿವರ ಆರೋಗ್ಯ ಕುರಿತು ಸರ್ಕಾರ ವಾಸ್ತವಾಂಶವನ್ನು ಜನರ ಮುಂದೆ ಇಟ್ಟಿದ್ದರೆ ನಾನು ಅದನ್ನು ಕೇಳುತ್ತಿರಲಿಲ್ಲ ಎಂದರು.

ಮೇಕೆದಾಟು ಯೋಜನೆ ವಿಷಯದಲ್ಲಿ ಸುಪ್ರೀಂಕೋರ್ಟ್‌ ಕೇಂದ್ರದ ಪರವಾಗಿದೆ ಎಂದು ಬಾಲಿಶವಾಗಿ ಮಾತನಾಡುವ ಕಾಂಗ್ರೆಸ್‌, ಅದಕ್ಕೆ ಅಡ್ಡಿಯಾಗಿರುವ ಅವರ ಮಿತ್ರ ಪಕ್ಷದ ಪರವಾಗಿ ತಮಿಳುನಾಡಿನಲ್ಲಿ ಬಿರುಸಿನ ಪ್ರಚಾರ ನಡೆಸಿದೆ. ಚುನಾವಣಾ ಪ್ರಚಾರದಲ್ಲಿ ಯಾಕೆ ಈ ವಿಷಯವನ್ನು ಎತ್ತುತ್ತಿಲ್ಲ ಎಂದು ಪ್ರಶ್ನಿಸಿದರು.

ನೀರು ಪೂರೈಕೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ನೀರಿನ ಸಮಸ್ಯೆ ಪರಿಹಾರಕ್ಕೆ ಜಿಲ್ಲೆಗೆ 45 ಕೋಟಿ ರು.ಬಿಡುಗಡೆ ಮಾಡಿದ್ದೇವೆ ಎಂದು ಸರ್ಕಾರ ಹೇಳುತ್ತಿದೆ. ಈ ಹಣ ಯಾರ ಅಕೌಂಟ್‌ಗೆ ಹೋಗುತ್ತದೆ ಎಂಬುದು ಗೊತ್ತಾಗುವುದಿಲ್ಲ ಎಂದು ದೂರಿದರು. ಒಳ ಮೀಸಲಾತಿ ವಿಷಯವನ್ನು ನಾನು ರಾಜಕೀಯವಾಗಿ ಬಳಸಿಕೊಳ್ಳುವುದಿಲ್ಲ. ಅವರಿಗೆ ತೃಪ್ತಿ ಇದ್ದರೆ ಕಡ್ಡಿಗೀರೋದು ಬೇಡ. ದಲಿತರನ್ನು ಎತ್ತಿ ಕಟ್ಟಿ ಅದರ ಬೇಳೆ ಬೇಯಿಸಿಕೊಳ್ಳಲ್ಲ. ಆದರೆ, ಪ್ರಾಮಾಣಿಕವಾಗಿ ಪ್ರತಿ ಕುಟುಂಬಕ್ಕೂ ಮೀಸಲಾತಿ ಸಿಗಬೇಕು ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್