ಬಸನಗೌಡ ಪಾಟೀಲ್ ಯತ್ನಾಳ್ 
ರಾಜಕೀಯ

ವಿಜಯೇಂದ್ರಗೋಸ್ಕರ ರಕ್ತ ಕೊಡಲು ಸಿದ್ಧರಿರುವ ಶಾಸಕರಿಂದ JCB ಪಕ್ಷ ಸ್ಥಾಪಿಸದಂತೆ ಒತ್ತಡ: ಬಸನಗೌಡ ಪಾಟೀಲ್ ಯತ್ನಾಳ್

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಅರ್ಧ ಶತಮಾನದ ಸುದೀರ್ಘ ರಾಜಕೀಯ ಜೀವನವನ್ನು ಸ್ಮರಿಸುವ ನಿಟ್ಟಿನಲ್ಲಿ ಮೇ 9 ರಂದು ಚಿತ್ರದುರ್ಗದಲ್ಲಿ ಅಭಿಮಾನೋತ್ಸವ ಹಮ್ಮಿಕೊಳ್ಳಲಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸಮಾರಂಭಕ್ಕೆ ಗುದ್ದಲಿ ಪೂಜೆ ಮಾಡಿದ್ದಾರೆ.

ವಿಜಯಪುರ: 2018ರಲ್ಲಿ ನನ್ನನ್ನು ಶಾಸಕನನ್ನಾಗಿ ಮಾಡಿದ್ದರ ಪ್ರತಿಫಲವಾಗಿ ರಾಜ್ಯದಲ್ಲಿಯೇ ವಿಜಯಪುರವನ್ನು ಮಾದರಿ ನಗರವಾಗಿ ಅಭಿವೃದ್ಧಿಪಡಿಸಲು ಸಾಧ್ಯವಾಯಿತು. ರಾಜ್ಯದ ಮುಖ್ಯಮಂತ್ರಿ ಆಗಲು ಆಶೀರ್ವದಿಸಿದರೆ, ಇಡೀ ರಾಜ್ಯದ ಚಿತ್ರಣವನ್ನೇ ಬದಲಿಸುವೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ವಿಜಯಪುರದಲ್ಲಿ ಮಾತನಾಡಿದ ಅವರು, ದೂಳಾಪುರವಾಗಿದ್ದ ವಿಜಯಪುರ ನಗರದಲ್ಲಿ ಸುಸಜ್ಜಿತ ಎಲಸಿ ಹತ್ತಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದರಿಂದ ವಿಜಯಪುರ ಅತ್ಯಂತ ಶುದ್ಧ ಗಾಳಿ ಬಿಸುವ ಮತ್ತು ಮಾದರಿ ನಗರವಾಗಿ ರೂಪುಗೊಳ್ಳಲು ಸಾಧ್ಯವಾಗಿದೆ ಎಂದರು.

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಅರ್ಧ ಶತಮಾನದ ಸುದೀರ್ಘ ರಾಜಕೀಯ ಜೀವನವನ್ನು ಸ್ಮರಿಸುವ ನಿಟ್ಟಿನಲ್ಲಿ ಮೇ 9 ರಂದು ಚಿತ್ರದುರ್ಗದಲ್ಲಿ ಅಭಿಮಾನೋತ್ಸವ ಹಮ್ಮಿಕೊಳ್ಳಲಾಗಿದ್ದು, ಭಾನುವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸಮಾರಂಭಕ್ಕೆ ಗುದ್ದಲಿ ಪೂಜೆ ಮಾಡಿದ್ದಾರೆ.

ಈ ವಿಚಾರವಾಗಿ ಪ್ರತಿಕ್ರಿಯಿಸಿದ ಉಚ್ಚಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್, ​ಅಪ್ಪನ ಸಮಾರಂಭಕ್ಕೆ ಮಗ ಗುದ್ದಲಿ ಪೂಜೆ ಮಾಡಿದ್ದಾನೆ. ಬೇರೆ ಪ್ರಾಮಾಣಿಕರು ಸಿಗಲಿಲ್ಲವಾ ಇವರಿಗೆ ಎಂದು ವಾಗ್ದಾಳಿ ಮಾಡಿದ್ದಾರೆ. ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮುಂದುವರಿಸದಿದ್ದರೆ, ಸಿಎಂ ಅಭ್ಯರ್ಥಿ ಮಾಡದಿದ್ದರೆ ಲಿಂಗಾಯತರು ಬಿಜೆಪಿ ಬಿಡ್ತಾರೆಂಬ ಸಂದೇಶ ರವಾನಿಸಲು ಯಡಿಯೂರಪ್ಪೋತ್ಸವ ಮಾಡುತ್ತಿದ್ದಾರೆ ಎಂದು ಯತ್ನಾಳ್ ವ್ಯಂಗ್ಯವಾಡಿದ್ದಾರೆ.

ಇನ್ನೂ ಬಿಜೆಪಿಯ ಹಲವು ಶಾಸಕರು ನನಗೆ ಕರೆ ಮಾಡಿ ಹೊಸ ಪಕ್ಷ ಸ್ಥಾಪಿಸದಂತೆ ಮನವಿ ಮಾಡುತ್ತಿದ್ದಾರೆ, ನಾನು ಜೆಸಿಬಿ ಪಕ್ಷ ಸ್ಥಾಪನೆ ಮಾಡುವುದಿರಿಂದ ಅವರಿಗೆ ತೊಂದರೆಯಾಗುತ್ತದೆ. ಹೀಗಾಗಿ ವಿಜಯೇಂದ್ರಗೋಸ್ಕರ ರಕ್ತ ಕೊಡಲು ಸಿದ್ಧರಿರುವ ಶಾಸಕರು ನನ್ನ ಬಳಿ ಮನವಿ ಮಾಡಿಕೊಂಡಿದ್ದಾರೆ. ಯಡಿಯೂರಪ್ಪ ಪ್ರಾಮಾಣಿಕನಾ ಎಂದು ಪ್ರಶ್ನಿಸಿದ ಸೈಕಲ್ ಹಿಡಿದುಕೊಂಡು ಬಂದವನು ಹೆಲಿಕಾಪ್ಟರ್ ಖರೀದಿಸಿದ್ದಾನೆ. ಬಿಜೆಪಿಯನ್ನು ಕುಟುಂಬ ರಾಜಕಾರಣದಿಂದ ಮುಕ್ತಗೊಳಿಸಿದರೇ ನಾನು ಕಾಂಪ್ರಮೈಸ್ ಆಗುವ ಬಗ್ಗೆ ಯೋಚಿಸುತ್ತೇನೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೋಮಾ ಸ್ಥಿತಿಯಲ್ಲಿ ಇರಾನ್‌ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ? ವದಂತಿ ಬೆನ್ನಲ್ಲೇ ದಿಢೀರ್ Video ಬಿಡುಗಡೆ ಮಾಡಿದ ಇರಾನ್; ಸತ್ಯ ಮುಚ್ಚಿಡುವ ಯತ್ನವೇ..?

ಇಡೀ ದೇಹಕ್ಕೆ ಹರಡಿದ cancer, Joe Biden ಆರೋಗ್ಯ ಮತ್ತಷ್ಟು ಕ್ಷೀಣ; BBC ಸಂದರ್ಶನದಲ್ಲಿ ಪುತ್ರ ಹಂಟರ್ ಕಳವಳ

ಭಾರತ-ಅಮೆರಿಕ ಸಂಬಂಧಗಳಿಗೆ ಹೊಸ ವೇಗ: ಪ್ರಧಾನಿ ಮೋದಿಗೆ ವ್ಯಾನ್ಸ್ ಕರೆ

KBC ವೇದಿಕೆಯಲ್ಲಿ ಆಮಿರ್ ಖಾನ್‌; ‘4ನೇ ಮದುವೆ ಯಾವಾಗ?’; ಕಾಲೆಳೆದ ನೆಟ್ಟಿಗರು, Amitabh bachchan ಶೋ Promoಗೆ ಕಮೆಂಟ್‌ಗಳ ಮಹಾಪೂರ..!

40 ಕೋಟಿ ಯುವಕರು ದೇಶದ ನಿಜವಾದ ಶಕ್ತಿ, ಆದರೆ ನಿರುದ್ಯೋಗ ತಾಂಡವವಾಡುತ್ತಿದೆ: ಉತ್ತರಪ್ರದೇಶದಲ್ಲಿ ರಾಹುಲ್ ಗಾಂಧಿ