ರವಿ ಕುಮಾರ್ 
ರಾಜಕೀಯ

ತಳವಾರ ಸಮುದಾಯಕ್ಕೆ ಸಿಗದ ST ಪ್ರಮಾಣಪತ್ರ: ಸರ್ಕಾರದ ವಿರುದ್ಧ BJP MLC ರವಿ ಕುಮಾರ್ ಕಿಡಿ

ತಳವಾರ ಸಮುದಾಯಕ್ಕೆ ಎಸ್‌ಟಿ ಪ್ರಮಾಣಪತ್ರ ನೀಡಲೇಬೇಕು. ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮಾತ್ರ ನೀಡಲಾಗುತ್ತಿಲ್ಲ. ತಕ್ಷಣ ಪ್ರಮಾಣಪತ್ರ ನೀಡದಿದ್ದರೆ ತೀವ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ತಳವಾರ ಸಮುದಾಯದವರಿಗೆ ಪರಿಶಿಷ್ಟ ಪಂಗಡ (ಎಸ್‌ಟಿ) ಪ್ರಮಾಣಪತ್ರ ನೀಡುವಲ್ಲಿ ರಾಜ್ಯ ಸರ್ಕಾರ ಉದ್ದೇಶಪೂರ್ವಕವಾಗಿ ಅಡ್ಡಿಯುಂಟು ಮಾಡುತ್ತಿದೆ ಎಂದು ಬಿಜೆಪಿ ಎಂಎಲ್‌ಸಿ ಎನ್. ರವಿ ಕುಮಾರ್ ಅವರು ಮಂಗಳವಾರ ಆರೋಪಿಸಿದ್ದಾರೆ.

ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಳವಾರ ಸಮುದಾಯಕ್ಕೆ ಈಗಾಗಲೇ ಎಸ್‌ಟಿ ಹುದ್ದೆ ಮಾನ್ಯತೆ ನೀಡಲಾಗಿದ್ದರೂ, ಈ ಎರಡು ಜಿಲ್ಲೆಗಳ ಅರ್ಹ ಸದಸ್ಯರಿಗೆ ಇನ್ನೂ ಪ್ರಮಾಣಪತ್ರ ಸಿಗುತ್ತಿಲ್ಲ ಎಂದು ಹೇಳಿದರು.

ಇದೇ ವೇಳೆ ಕಾಂಗ್ರೆಸ್ ಸಚಿವರೊಬ್ಬರ ಹೆಸರು ಉಲ್ಲೇಖಿಸಿ, ಅವರು ಪ್ರಕ್ರಿಯೆಗೆ ಅಡ್ಡಿಪಡಿಸುತ್ತಿದ್ದಾರೆ ಎಂದು ರವಿ ಕುಮಾರ್ ಆರೋಪಿಸಿದರು.

ತಳವಾರ ಸಮುದಾಯಕ್ಕೆ ಎಸ್‌ಟಿ ಪ್ರಮಾಣಪತ್ರ ನೀಡಲೇಬೇಕು. ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮಾತ್ರ ನೀಡಲಾಗುತ್ತಿಲ್ಲ. ತಕ್ಷಣ ಪ್ರಮಾಣಪತ್ರ ನೀಡದಿದ್ದರೆ ತೀವ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.

ಆಡಳಿತಾಧಿಕಾರಿಗಳೊಂದಿಗೆ ಮಾತನಾಡಿದಾಗ ಸುಮಾರು 28,000 ಎಸ್‌ಟಿ ಪ್ರಮಾಣಪತ್ರಗಳನ್ನು ಈಗಾಗಲೇ ನೀಡಲಾಗಿದೆ, ಅರ್ಹರಿಗೆ ಮಾತ್ರ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ. ಆದರೂ, ಈ ಎರಡು ಜಿಲ್ಲೆಗಳಲ್ಲಿ ನಿಜವಾದ ಅರ್ಹರು ಇನ್ನೂ ತಮ್ಮ ಹಕ್ಕಿನಿಂದ ವಂಚಿತರಾಗಿದ್ದಾರೆ ಎಂದು ತಿಳಿಸಿದರು.

ಇದೇ ವೇಳೆ ಇತ್ತೀಚಿನ ಪ್ರತಿಭಟನೆ ವೇಳೆ ಸಮುದಾಯದ ಸದಸ್ಯರ ವಿರುದ್ಧದ ದಾಖಲಾಗಿರುವ ಎಫ್‌ಐಆರ್‌ಗಳನ್ನು ತಕ್ಷಣ ಹಿಂತೆಗೆದುಕೊಳ್ಳಬೇಕು ಎಂದೂ ಒತ್ತಾಯಿಸಿದರು.

ಪ್ರಮಾಣಪತ್ರಗಳ ಕೊರತೆಯಿಂದ ಸಮುದಾಯದ ಅನೇಕ ಯುವಕರು ಸರ್ಕಾರಿ ಉದ್ಯೋಗ ಮತ್ತು ಕಾಲೇಜು ಪ್ರವೇಶದ ಅವಕಾಶಗಳಿಂದ ವಂಚಿತರಾಗಿದ್ದಾರೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Assembly elections: ಪಶ್ಚಿಮ ಬಂಗಾಳದಲ್ಲಿ ಅಂತಿಮ ಹಂತದ ಮತದಾನ: ಸಿಎಂ ಮಮತಾ ಬ್ಯಾನರ್ಜಿ ಸೇರಿ ಪ್ರಮುಖ ನಾಯಕರ ಭವಿಷ್ಯ ಇಂದು ನಿರ್ಧಾರ

ಎಸ್‌ಸಿ ಒಳ ಮೀಸಲಾತಿ ಅಧಿಕೃತ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್

'ಇರಾನ್ ಸಂಪೂರ್ಣ ಕುಸಿಯುತ್ತಿದೆ': ಹಾರ್ಮುಜ್ ತೆರೆಯುವಂತೆ ಟೆಹ್ರಾನ್ ಬೇಡಿಕೊಳ್ಳುತ್ತಿದೆ: ಟ್ರಂಪ್

ನಾಗರಿಕ ಸಮಾಜ ತಲೆ ತಗ್ಗಿಸುವ ಘಟನೆ: ಹಣಕ್ಕಾಗಿ ಹೂತಿಟ್ಟ ಸಹೋದರಿ ಶವವನ್ನೇ ಬ್ಯಾಂಕ್​ಗೆ ಹೊತ್ತು ತಂದ ವ್ಯಕ್ತಿ!

IPL 2026: ಜೈಸ್ವಾಲ್, ಫೆರೀರಾ ಅಬ್ಬರಕ್ಕೆ ಪಂಜಾಬ್ ತತ್ತರ; PBKS ವಿರುದ್ಧ RR ಭರ್ಜರಿ ಗೆಲುವು

SCROLL FOR NEXT