ಸಂಗ್ರಹ ಚಿತ್ರ 
ರಾಜಕೀಯ

ಕಾಂಗ್ರೆಸ್ ಹೈಕಮಾಂಡ್​ನಿಂದ ರಾಜ್ಯದಲ್ಲಿ ಮಹತ್ವದ ಬದಲಾವಣೆಯ ಸುಳಿವು; ಇಡೀ ಸಂಪುಟವೇ ಚೇಂಜ್ ಸಾಧ್ಯತೆ

"ಮೇ 4 ರಂದು ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ನಂತರ ಸಂಪುಟ ಪುನರ್ರಚನೆ ಪ್ರಾರಂಭವಾಗುವ ನಿರೀಕ್ಷೆಯಿದೆ ಮತ್ತು ತಿಂಗಳ ಅಂತ್ಯಕ್ಕೆ ಅಂತಿಮ ರೂಪ ಪಡೆಯಲಿದೆ" ಎಂದು ಅವರು ಹೇಳಿದ್ದಾರೆ.

ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಯ ನಡುವೆ ಸಂಪುಟ ವಿಸ್ತರಣೆಯ ಚರ್ಚೆಯೂ ಜೋರಾಗಿದ್ದು, ಸಚಿವ ಸ್ಥಾನದ ಆಕಾಕ್ಷಿಗಳು ಕಾಂಗ್ರೆಸ್ ಹೈಕಮಾಂಡ್ ಭೇಟಿ ಮಾಡಿ ಒತ್ತ ಹಾಕುತ್ತಿದ್ದು, ಇದಕ್ಕೆ ಮಣಿದ ಹೈಕಮಾಂಡ್ ಹೊಸ ಮುಖಗಳಿಗೆ ಅವಕಾಶ ನೀಡುವ ಭರವಸೆ ನೀಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ 30 ಸಚಿವರನ್ನು ಬದಲಾಯಿಸಬಹುದು ಮತ್ತು ಮುಂಬರುವ ಸಂಪುಟ ಪುನಾರಚನೆಯಲ್ಲಿ ಪ್ರಸ್ತುತ ಸಂಪುಟದ ನಾಲ್ವರು ಹಿರಿಯ ಸಚಿವರನ್ನು ಮಾತ್ರ ಉಳಿಸಿಕೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ.

ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಅಶೋಕ್ ಪಟ್ಟಣ್, ಕೆಲವು ಶಾಸಕರು ಮೇ 6 ಮತ್ತು 7 ರಂದು ನವದೆಹಲಿಯಲ್ಲಿ ಕಾಂಗ್ರೆಸ್ ಉನ್ನತ ನಾಯಕರನ್ನು ಭೇಟಿಯಾಗಲಿದ್ದಾರೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಶಾಸಕರು ಈಗಾಗಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರೊಂದಿಗೆ ಚರ್ಚೆ ನಡೆಸಿದ್ದು, ತಮ್ಮನ್ನು ಸಂಪುಟಕ್ಕೆ ಸೇರಿಸಿಕೊಳ್ಳುವಂತೆ ಒತ್ತಾಯಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಈ ಇಬ್ಬರೂ ನಾಯಕರೂ ಸಂಪುಟ ಪುನಾರಚನೆ ಸಮಯದಲ್ಲಿ ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವುದಾಗಿ ಭರವಸೆ ನೀಡಿದ್ದಾರೆ. "ಮೇ 4 ರಂದು ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ನಂತರ ಸಂಪುಟ ಪುನರ್ರಚನೆ ಪ್ರಾರಂಭವಾಗುವ ನಿರೀಕ್ಷೆಯಿದೆ ಮತ್ತು ತಿಂಗಳ ಅಂತ್ಯಕ್ಕೆ ಅಂತಿಮ ರೂಪ ಪಡೆಯಲಿದೆ" ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ವರಿಷ್ಠರೊಂದಿಗೆ ಆಂತರಿಕ ಚರ್ಚೆಗಳ ವಿವರಗಳನ್ನು ಬಹಿರಂಗಪಡಿಸಿದ ಹಿರಿಯ ಕಾಂಗ್ರೆಸ್ ನಾಯಕರೊಬ್ಬರು, ನಾಲ್ಕು ಹಿರಿಯ ಸಚಿವರನ್ನು ಹೊರತುಪಡಿಸಿ, 30 ಸಚಿವರನ್ನು ಬದಲಾಯಿಸಬಹುದು ಎಂದು ಸುರ್ಜೆವಾಲಾ ತಿಳಿಸಿರುವುದಾಗಿ ಅವರು ಹೇಳಿದ್ದಾರೆ.

"ನಾವು ಎಲ್ಲಾ 30 ಸಚಿವರನ್ನು ಬದಲಾಯಿಸುವಂತೆ ಒತ್ತಾಯಿಸುತ್ತಿಲ್ಲ. ಆದರೆ ಹೊಸ ನಾಯಕರಿಗೆ ಅವಕಾಶ ನೀಡಲು ಕನಿಷ್ಠ 25 ಹೊಸ ಮುಖಗಳನ್ನು ಸೇರಿಸಿಕೊಳ್ಳಬೇಕು" ಎಂದು ಅವರು ಹೇಳಿದರು.

ನಾಲ್ಕು ಬಾರಿ ಆಯ್ಕೆಯಾದ ಸುಮಾರು 40 ಶಾಸಕರು ಸೇರಿದಂತೆ ಶಾಸಕರ ಗುಂಪು ಸಂಪುಟ ಪುನಾರಚನೆಗೆ ಒತ್ತಾಯಿಸುತ್ತಿದೆ ಮತ್ತು ಕಳೆದ ಅವಧಿಯಿಂದಲೂ ತಮ್ಮ ಸಚಿವ ಸ್ಥಾನಗಳ ಬೇಡಿಕೆ ಬಾಕಿ ಇದೆ ಎಂದು ಹೇಳಿದ್ದಾರೆ.

ಮಳೆ ಬಳಿಕ ಸಿಲಿಕಾನ್ ಸಿಟಿ ಕೂಲ್-ಕೂಲ್: 10 ಡಿಗ್ರಿ ಸೆಲ್ಸಿಯಸ್ ತಾಪಮಾನ ಕುಸಿತ; ಮುಂದಿನ 2 ದಿನಗಳೂ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ..!

ಇರಾನ್ ಯುದ್ಧ, ಉಕ್ರೇನ್ ಬಗ್ಗೆ ಪುಟಿನ್, ಟ್ರಂಪ್ ಚರ್ಚೆ: ಕ್ರೆಮ್ಲಿನ್ ಹೇಳಿದ್ದೇನು?

25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆ ಮಳೆ: ನಗರದಲ್ಲಿ ಭಾರೀ ಅವಾಂತರ, 9 ಜೀವಗಳು ಬಲಿ.!

ಬಿಹಾರ ಮೃಗಾಲಯ, ಡೈರಿ ಸಂಸ್ಥೆಗೆ ಸಂಜಯ್ ಗಾಂಧಿ ಹೆಸರು ತೆಗೆದು ಹಾಕಿದ ಬಿಜೆಪಿ ಸರ್ಕಾರ!

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತ: ದುರ್ಘಟನೆಗೆ ಮೂಲಭೂತ ಸೌಕರ್ಯಗಳ ನಿರ್ಲಕ್ಷ್ಯವೇ ಕಾರಣ; ಸರ್ಕಾರದ ವಿರುದ್ಧ ವಿಪಕ್ಷಗಳು ತೀವ್ರ ಕಿಡಿ

SCROLL FOR NEXT