ಕಲಬುರಗಿಯಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ  
ರಾಜಕೀಯ

ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ: ಮಲ್ಲಿಕಾರ್ಜುನ ಖರ್ಗೆ-Video

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಗೊಂದಲಗಳಿರುವುದು ನಿಜ, ಅದು ಶೀಘ್ರವೇ ಬಗೆಹರಿಯಲಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾಯಕತ್ವ ಬದಲಾವಣೆಯ ಗೊಂದಲ ಶೀಘ್ರದಲ್ಲಿಯೇ ಬಗೆಹರಿಯಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಈ ಮೂಲಕ ಕಳೆದ ಒಂದು ವರ್ಷದಿಂದ ಕೇಳಿಬರುತ್ತಿದ್ದ ಸಿಎಂ ಬದಲಾವಣೆ ವದಂತಿಗೆ ಹೈಕಮಾಂಡ್ ತೆರೆ ಎಳೆದಂತಾಗಿದೆ.

ಇಂದು ಕಲಬುರಗಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಗೊಂದಲಗಳಿರುವುದು ನಿಜ, ಅದು ಶೀಘ್ರವೇ ಬಗೆಹರಿಯಲಿದೆ. ನಾನು ಸಿಎಂ ಆಗಬೇಕೆಂದು ಕೆಲವರು ಹೇಳುತ್ತಾರೆ, ನೀವು ಮಾಧ್ಯಮದವರು ಕೂಡ ಆಗಾಗ ಆ ವಿಷಯ ಬಗ್ಗೆ ಮಾತನಾಡುತ್ತಿರುತ್ತೀರಿ, ಆದರೆ ಕಾಂಗ್ರೆಸ್ ಪಕ್ಷದಲ್ಲಿ ಸಿದ್ಧಾಂತ ಮತ್ತು ದಶಕಗಳ ದುಡಿಮೆ ಮುಖ್ಯ ಎಂದರು.

ಸದ್ಯಕ್ಕೆ ಯಥಾಸ್ಥಿತಿ ಮುಂದುವರಿಕೆ

ಪ್ರಸ್ತುತ ರಾಜ್ಯದಲ್ಲಿ ಮುಖ್ಯಮಂತ್ರಿಗಳಿದ್ದಾರೆ, ಚೆನ್ನಾಗಿ ಕೆಲಸ ಮಾಡಿಕೊಂಡು ಹೋಗುತ್ತಿದ್ದಾರೆ. ಹೀಗಾಗಿ ಸಿಎಂ ಬದಲಾವಣೆ ಚರ್ಚೆ ಸದ್ಯಕ್ಕೆ ಉದ್ಭವಿಸುವುದಿಲ್ಲ. ಒಂದು ವೇಳೆ ಅಂತಹ ಸಂದರ್ಭ ಬಂದರೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ. ಅದಕ್ಕೆ ಸಮಯ ಹಿಡಿಯುತ್ತದೆ, ಆ ಸಮಯ ಬಂದಾಗ ನೋಡೋಣ ಎಂದರು.

ಕರ್ನಾಟಕದಲ್ಲಿ ಸಿಎಂ ಬದಲಾವಣೆ ಮಾಡಬೇಕೆಂದು ಸೋನಿಯಾ ಗಾಂಧಿಯವರು, ರಾಹುಲ್ ಗಾಂಧಿಯವರು ನಿರ್ಣಯ ತೆಗೆದುಕೊಂಡರೆ ಸಮಯ ಹಿಡಿಯುತ್ತದೆ. ನಾನು ಸಿಎಂ ಆದರೆ ಉತ್ತಮ ಎಂದು ಅವರು ಹೇಳುತ್ತಾರೆ, ನೀವು ಹೇಳುತ್ತೀರಿ, ಮೇಲಿನವರೂ ಹೇಳುತ್ತಾರೆ, ಆದರೆ ನಮ್ಮ ಹಣೆಬರಹ ಅನ್ನುವುದಕ್ಕಿಂತ ಪಕ್ಷದ ಸಿದ್ಧಾಂತ ಪ್ರಕಾರ ನಿರ್ಣಯಗಳನ್ನು ತೆಗೆದುಕೊಳ್ಳುತ್ತಾರೆ, ಅದನ್ನು ಹೆಚ್ಚಾಗಿ ಸೋನಿಯಾ ಗಾಂಧಿಯವರು ನಿರ್ಧರಿಸುತ್ತಾರೆ ಎಂದರು.

ಪಂಚ ರಾಜ್ಯಗಳ ಚುನಾವಣೆ ಹಾಗೂ ಕರ್ನಾಟಕದಲ್ಲಿ ಉಪ ಚುನಾವಣೆ ಮುಗಿದು ಫಲಿತಾಂಶಕ್ಕೆ ದಿನಗಣನೆ ಆರಂಭವಾಗಿರುವ ಸಂದರ್ಭದಲ್ಲಿ ಕಾಂಗ್ರೆಸ್ ನಲ್ಲಿ ಕಳೆದೊಂದು ವಾರದಿಂದ ಚಟುವಟಿಕೆ ಗರಿಗೆದರಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಬಣದ ಸಚಿವರು, ಶಾಸಕರು ಹೇಳಿಕೆಗಳನ್ನು ನೀಡುತ್ತಾ ಹೈಕಮಾಂಡ್ ಏನು ತೀರ್ಮಾನ ಕೈಗೊಳ್ಳುತ್ತದೆ ಎಂದು ಕಾತರದಿಂದ ಕಾಯುತ್ತಿದ್ದಾರೆ.

ಈ ಸಂದರ್ಭದಲ್ಲಿ ಇಂದು ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆ ಮೇ 15ರೊಳಗೆ ಡಿಕೆ ಶಿವಕುಮಾರ್ ಅವರ ಹುಟ್ಟುಹಬ್ಬಕ್ಕೆ ಹೈಕಮಾಂಡ್ ಗಿಫ್ಟ್ ನೀಡುತ್ತದೆ ಎಂದು ಆಸೆಪಟ್ಟವರಿಗೆ ತಣ್ಣೀರೆರಚಿದಂತಾಗಿದೆ.

ಬೌರಿಂಗ್ ಆಸ್ಪತ್ರೆಯ ಕಂಪೌಂಡ್ ಕುಸಿತ ಪ್ರಕರಣ ಬಗ್ಗೆ ಮಾತನಾಡಿದ ಅವರು, ಅದು ಹಳೆಯ ಕಾಂಪೌಂಡ್ ಆಗಿತ್ತು. ಎರಡನೆಯದಾಗಿ, ಅದನ್ನು ಸರಿಯಾಗಿ ನಿರ್ಮಿಸಲಾಗಿರಲಿಲ್ಲ. ಕೆಲವೆಡೆ ಮಣ್ಣಿನ ಗೋಡೆಗಳು, ಇನ್ನೂ ಕೆಲವೆಡೆ ಇಟ್ಟಿಗೆಯ ಗೋಡೆಗಳು ಇರುವುದನ್ನು ನಾನು ಗಮನಿಸಿದ್ದೇನೆ. ಕಾಂಪೌಂಡ್‌ನ ಒಂದು ಭಾಗವನ್ನು ದುರಸ್ತಿಪಡಿಸಬೇಕು ಪಕ್ಕದಲ್ಲಿ ಕೂತು ವ್ಯಾಪಾರ ಮಾಡುತ್ತಿದ್ದವರಿಗೆ ತಕ್ಕ ಪರಿಹಾರ ನೀಡಬೇಕು ಎಂದರು.

ಮುಂದೆ ಯಾರೂ ಕಾಂಪೌಂಡ್‌ಗೆ ತಾಗಿಕೊಂಡೇ ಕೂತು ವ್ಯಾಪಾರ ಮಾಡಲು ಅವಕಾಶ ನೀಡಬಾರದು. ಇಂದು ಬೆಂಗಳೂರಿನಲ್ಲಿ ನಡೆದಂತಹ ಘಟನೆ ನಾಳೆ ಇನ್ನೊಂದು ಕಡೆ ನಡೆಯಬಹುದು; ಸರ್ಕಾರ ಜಾಗ್ರತೆ ವಹಿಸಿ, ಈ ಗಿಗ್ ಕಾರ್ಮಿಕರು ಅಥವಾ ಸಣ್ಣ ವ್ಯಾಪಾರಿಗಳಿಗೆ ಸಾಧ್ಯವಾದಷ್ಟು ಸಹಾಯ ಮಾಡಬೇಕು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಬ್ಯಾಟಿಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ 'ನಿಜಕ್ಕೂ AI?' ಎಲಾನ್ ಮಸ್ಕ್ ಈ ಮಾಂತ್ರಿಕನನ್ನು ಸೃಷ್ಟಿಸಿದರೇ?

'ನಿಮ್ಮ ಕಾನೂನಿಗೆ ತಿದ್ದುಪಡಿ ತನ್ನಿ': ಅತ್ಯಾಚಾರ ಸಂತ್ರಸ್ತ ಬಾಲಕಿ ಗರ್ಭಪಾತ ತಡೆದ ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ತರಾಟೆ..!

IPL 2026: ಡ್ರೆಸಿಂಗ್ ರೂಮ್‌ನಲ್ಲಿ ನಿಷೇಧಿತ ಇ-ಸಿಗರೇಟ್ ಸೇದಿದ ರಿಯಾನ್ ಪರಾಗ್​​ಗೆ ದಂಡ ಫಿಕ್ಸ್!

ಬೆಂಗಳೂರು ಮಳೆ ಅವಾಂತರ: ಮತ್ತೋರ್ವ ವ್ಯಕ್ತಿ ಸಾವು, ಮೃತರ ಸಂಖ್ಯೆ 10ಕ್ಕೆ ಏರಿಕೆ

ಸಿದ್ದರಾಮಯ್ಯ'ಪಂದ್ರಾ ದಿನ್ ಕಾ ಸುಲ್ತಾನ್': ಕೆಲವು ಕೋಳಿಗಳು ಕಾಳು ತಿನ್ನುವ ಸಲುವಾಗಿ ಹೀಗೆ ಮಾಡ್ತಿವೆ; ಕಾರಜೋಳ ವ್ಯಂಗ್ಯ

SCROLL FOR NEXT