ಬಿಕೆ ಹರಿಪ್ರಸಾದ್ 
ರಾಜಕೀಯ

ಭಾವೋದ್ವೇಗಕ್ಕೆ ಒಳಗಾಗಿ ರಾಜೀನಾಮೆ ನೀಡಬೇಡಿ; ಪಕ್ಷ ನಿಮ್ಮ ಸೇವೆ ಮರೆಯಲ್ಲ: ಅಸಮಾಧಾನಿತ ಶಾಸಕರಿಗೆ ಬಿ.ಕೆ ಹರಿಪ್ರಸಾದ್ ಮನವಿ

ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ದೊರೆಯದ ಹಿನ್ನಲೆಯಲ್ಲಿ ನಮ್ಮ ಶಾಸಕರು ನೋವು ಮತ್ತು ಅಸಮಾಧಾನ ವ್ಯಕ್ತಪಡಿಸಿರುವುದು ನನ್ನ ಗಮನಕ್ಕೆ ಬಂದಿದೆ. ಪಕ್ಷಕ್ಕಾಗಿ ದುಡಿದ ಪ್ರತಿಯೊಬ್ಬ ಶಾಸಕರಿಗೂ ಸರ್ಕಾರದಲ್ಲಿ ಜವಾಬ್ದಾರಿ ವಹಿಸಬೇಕೆಂಬ ಅಪೇಕ್ಷೆ ಇರುವುದು ಸಹಜ.

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ದೊರೆಯದ ಹಿನ್ನಲೆಯಲ್ಲಿ ನಮ್ಮ ಶಾಸಕರು ನೋವು ಮತ್ತು ಅಸಮಾಧಾನ ವ್ಯಕ್ತಪಡಿಸಿರುವುದು ನನ್ನ ಗಮನಕ್ಕೆ ಬಂದಿದೆ. ಪಕ್ಷಕ್ಕಾಗಿ ದುಡಿದ ಪ್ರತಿಯೊಬ್ಬ ಶಾಸಕರಿಗೂ ಸರ್ಕಾರದಲ್ಲಿ ಜವಾಬ್ದಾರಿ ವಹಿಸಬೇಕೆಂಬ ಅಪೇಕ್ಷೆ ಇರುವುದು ಸಹಜ. ಅವರ ಭಾವನೆಗಳನ್ನು ಪಕ್ಷ ನಿರ್ಲಕ್ಷಿಸುವುದಿಲ್ಲ. ಪ್ರತಿಯೊಬ್ಬರ ಸೇವೆ, ಅನುಭವ ಮತ್ತು ಕೊಡುಗೆಯನ್ನು ಗೌರವದಿಂದಲೇ ಪರಿಗಣಿಸುತ್ತದೆ ಎಂದು KPCC ಅಧ್ಯಕ್ಷ ಬಿಕೆ ಹರಿಪ್ರಸಾದ್ ಹೇಳಿದ್ದಾರೆ.

ಸಚಿವ ಸಂಪುಟದ ಸ್ಥಾನಗಳು ಸೀಮಿತವಾಗಿರುತ್ತವೆ. ಪ್ರಾದೇಶಿಕ ಸಮತೋಲನ, ಸಾಮಾಜಿಕ ನ್ಯಾಯ, ವಿವಿಧ ಸಮುದಾಯಗಳ ಪ್ರಾತಿನಿಧ್ಯ, ಅನುಭವ, ಹೊಸ ನಾಯಕತ್ವ ಹಾಗೂ ಆಡಳಿತದ ಅಗತ್ಯಗಳನ್ನು ಸಮಗ್ರವಾಗಿ ಪರಿಶೀಲಿಸಿದ ನಂತರ ಪಕ್ಷದ ರಾಷ್ಟ್ರೀಯ ನಾಯಕತ್ವ ಮತ್ತು ರಾಜ್ಯದ ನಾಯಕತ್ವ ಒಟ್ಟಾಗಿ ನಿರ್ಧಾರ ಕೈಗೊಳ್ಳಲಾಗಿದೆ. ಸಚಿವ ಸ್ಥಾನ ಸಿಗದಿರುವುದು ಯಾರೊಬ್ಬರ ರಾಜಕೀಯ ಸೇವೆಯ ನಿರಾಕರಣೆಯೂ ಅಲ್ಲ; ಅವರ ಸಾಮರ್ಥ್ಯದ ಮೇಲಿನ ಅನುಮಾನವೂ ಅಲ್ಲ. ಅಧಿಕಾರವೇ ಪಕ್ಷಸೇವೆಯ ಏಕೈಕ ಮಾನದಂಡವಲ್ಲ. ಸರ್ಕಾರದೊಳಗೆ, ಪಕ್ಷದ ಸಂಘಟನೆಯಲ್ಲಿ ಹಾಗೂ ವಿವಿಧ ಜವಾಬ್ದಾರಿಗಳ ಮೂಲಕ ಜನಸೇವೆ ಮಾಡಲು ಅನೇಕ ಅವಕಾಶಗಳಿವೆ. ಮುಂದಿನ ದಿನಗಳಲ್ಲಿ ಪಕ್ಷದ ಪ್ರತಿಯೊಬ್ಬ ಅರ್ಹ ನಾಯಕರಿಗೂ ಅವರ ಅನುಭವ ಮತ್ತು ಸಾಮರ್ಥ್ಯಕ್ಕೆ ತಕ್ಕ ಗೌರವ ದೊರೆಯಲಿದೆ.

ಭಾವೋದ್ವೇಗದಲ್ಲಿ ರಾಜೀನಾಮೆಯಂತಹ ತೀರ್ಮಾನಗಳನ್ನು ಕೈಗೊಳ್ಳಬಾರದೆಂದು ಅಸಮಾಧಾನಗೊಂಡಿರುವ ನಮ್ಮ ಎಲ್ಲ ಸಹೋದ್ಯೋಗಿಗಳಲ್ಲಿ ಮನವಿ ಮಾಡುತ್ತೇನೆ. ಅವರೊಂದಿಗೆ ವೈಯಕ್ತಿಕವಾಗಿ ಮಾತನಾಡಿ, ಅವರ ನೋವು ಮತ್ತು ಅಭಿಪ್ರಾಯಗಳನ್ನು ಪಕ್ಷದ ರಾಷ್ಟ್ರೀಯ ನಾಯಕತ್ವದ ಗಮನಕ್ಕೆ ತರಲಾಗುವುದು. ಮಾತುಕತೆ ಮತ್ತು ಪರಸ್ಪರ ವಿಶ್ವಾಸದ ಮೂಲಕ ಎಲ್ಲ ಸಮಸ್ಯೆಗಳನ್ನೂ ಬಗೆಹರಿಸಿಕೊಳ್ಳುವ ವಿಶಾಲ ಮನಸ್ಸು ಕಾಂಗ್ರೆಸ್ ಪಕ್ಷಕ್ಕಿದೆ. ಸಚಿವರಾಗಿ ಆಯ್ಕೆಯಾಗಿರುವವರು ಪಕ್ಷದ ನಿಷ್ಠಾವಂತರು, ಸಮರ್ಥರು ಹಾಗೂ ಜನರ ವಿಶ್ವಾಸಕ್ಕೆ ತಕ್ಕಂತೆ ಕಾರ್ಯನಿರ್ವಹಿಸುವ ಸಾಮರ್ಥ್ಯ ಹೊಂದಿರುವವರು. ಅವರ ಆಯ್ಕೆಯನ್ನು ಎಲ್ಲರೂ ಗೌರವಿಸಿ, ಆಡಳಿತದಲ್ಲಿ ಯಶಸ್ವಿಯಾಗಲು ಸಹಕಾರ ನೀಡಬೇಕು. ನಮ್ಮ ಮುಂದೆ ರಾಜ್ಯದ ಜನತೆಗೆ ನೀಡಿರುವ ಭರವಸೆಗಳನ್ನು ಈಡೇರಿಸುವ ಮತ್ತು ಜನಪರ ಆಡಳಿತವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮುನ್ನಡೆಸುವ ದೊಡ್ಡ ಜವಾಬ್ದಾರಿಯಿದೆ.

ವೈಯಕ್ತಿಕ ಆಕಾಂಕ್ಷೆಗಳಿಗಿಂತ ಪಕ್ಷದ ಹಿತ, ಸರ್ಕಾರದ ಸ್ಥಿರತೆ ಮತ್ತು ಕರ್ನಾಟಕದ ಜನರ ನಿರೀಕ್ಷೆಗಳು ಮುಖ್ಯವಾಗಬೇಕು. ಎಲ್ಲ ಶಾಸಕರು ಹಾಗೂ ನೂತನ ಸಚಿವರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ, ಕಾಂಗ್ರೆಸ್ ಪಕ್ಷದ ಮೇಲಿರುವ ಜನರ ವಿಶ್ವಾಸವನ್ನು ಮತ್ತಷ್ಟು ಗಟ್ಟಿಗೊಳಿಸಬೇಕೆಂದು ಮನವಿ ಮಾಡುತ್ತೇವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೀದಿ ಜೊತೆಗೆ ಕಾಂಗ್ರೆಸ್ ಗೂ ಶಾಕ್; TMC ಬೆಂಬಲ ಬೆನ್ನಲ್ಲೇ ನಂದಿಗ್ರಾಮ 'ಕೈ' ಅಭ್ಯರ್ಥಿ ಕೊಲೆ ಕೇಸ್`ನಲ್ಲಿ ಅರೆಸ್ಟ್!

ಟಿ. ನರಸೀಪುರ ಶೋಭಾಯಾತ್ರೆ: ಮಸೀದಿ ಮುಂದೆ ಪಟಾಕಿ ಸಿಡಿಸಿ ಸಂಭ್ರಮ, ಒಂದುವರೆ ವರ್ಷದಲ್ಲಿ ನಾವು ಬರ್ತೀವಿ, ಅವಾಗ ಲೆಕ್ಕ ಚುಪ್ತ ಮಾಡ್ತೀವಿ- ಪ್ರತಾಪ್ ಸಿಂಹ

ಸಾಕ್ಷ್ಯ ವಿಚಾರಣೆ ವೇಳೆ ದರ್ಶನ್ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ, ಷರತ್ತು ಅನ್ವಯ!

18 ಎಸೆತ, 38 ರನ್: ಜೂನಿಯರ್ Dravid ಅಬ್ಬರಕ್ಕೆ ಆಸಿಸ್ ತತ್ತರ; 7 ರನ್‌ಗಳಿಂದ ಗೆದ್ದ ಭಾರತ U-19 ತಂಡ

T20 ಕ್ರಿಕೆಟ್‌ನಲ್ಲಿ ಹೊಸ ವಿಶ್ವ ದಾಖಲೆ; 15,000 ರನ್‌ ಗಡಿ ದಾಟಿದ Jos Buttler; ಪೊಲಾರ್ಡ್ ದಾಖಲೆ ಧ್ವಂಸ!