ರಾಹುಲ್ ಗಾಂಧಿ - ಮಲ್ಲಿಕಾರ್ಜುನ ಖರ್ಗೆ 
ರಾಜಕೀಯ

ಸಚಿವ ಸ್ಥಾನ ಸಿಗದಿದ್ದಕ್ಕೆ ರಾಜೀನಾಮೆ ನಿರ್ಧಾರ ಪ್ರಕಟಿಸಿದ ಕಾಂಗ್ರೆಸ್ ಶಾಸಕರಿಗೆ ಹೈಕಮಾಂಡ್ ಬಿಗ್ ಶಾಕ್

ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಹೆಸರನ್ನು ಹಾಗೂ ವಿಧಾನಸಭೆ ಸ್ಪೀಕರ್ ಮತ್ತು ವಿಧಾನ ಪರಿಷತ್ ಸಭಾಧ್ಯಕ್ಷರನ್ನು ಹೆಸರನ್ನು ಪ್ರಕಟಿಸುತ್ತಿದ್ದಂತೆ ಪಕ್ಷದಲ್ಲಿ ಸಚಿವಾಂಕ್ಷಿಗಳ ಆಕ್ರೋಶ ಭುಗಿಲೆದ್ದಿದ್ದು, ಕೆಲವು ಶಾಸಕರು ರಾಜೀನಾಮೆ ನೀಡುವುದಾಗಿ ಹೇಳುತ್ತಿದ್ದಾರೆ.

ಬೆಂಗಳೂರು: ಬಹುನಿರೀಕ್ಷಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ಸೋಮವಾರ ವಿಸ್ತರಣೆಯಾಗಿದ್ದು, 19 ಕಾಂಗ್ರೆಸ್ ಶಾಸಕರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಹೆಸರನ್ನು ಹಾಗೂ ವಿಧಾನಸಭೆ ಸ್ಪೀಕರ್ ಮತ್ತು ವಿಧಾನ ಪರಿಷತ್ ಸಭಾಧ್ಯಕ್ಷರನ್ನು ಹೆಸರನ್ನು ಪ್ರಕಟಿಸುತ್ತಿದ್ದಂತೆ ಪಕ್ಷದಲ್ಲಿ ಸಚಿವಾಂಕ್ಷಿಗಳ ಆಕ್ರೋಶ ಭುಗಿಲೆದ್ದಿದ್ದು, ಕೆಲವು ಶಾಸಕರು ರಾಜೀನಾಮೆ ನೀಡುವುದಾಗಿ ಹೇಳುತ್ತಿದ್ದಾರೆ.

ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ಅವರು, ಕೊನೆ ಗಳಿಗೆಯಲ್ಲಿ ಸಚಿವ ಸ್ಥಾನಕ್ಕೆ ಕೈ ತಪ್ಪಿದ್ದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಆದರೆ ಪಕ್ಷದ ಶಾಸಕ ರಾಜೀನಾಮೆ ಬೆದರಿಕೆಯನ್ನು ಗಂಭೀರವಾಗಿ ಪರಿಗಣಿಸಿದ ಕಾಂಗ್ರೆಸ್ ವರಿಷ್ಠರು, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಅವರಿ​ಗೆ ಕರೆ ಮಾಡಿ, ಈ ಬಗ್ಗೆ ವಿವರ ಕೇಳಿದ್ದಾರೆ ಎನ್ನಲಾಗಿದೆ.

ರಾಜೀನಾಮೆ ನೀಡುವ ಬೆದರಿಕೆ ಹಾಕಿರುವ ಶಾಸಕರ ಕುರಿತು ಕಾಂಗ್ರೆಸ್ ಹೈಕಮಾಂಡ್ ವಿವರಣೆ ಕೇಳಿದ್ದು, ಸಚಿವ ಸ್ಥಾನ ಸಿಗದಿದ್ದವರಿಗೆ ನಿಗಮ ಮಂಡಳಿ ಕೊಡುತ್ತೇವೆ. ಅದನ್ನೂ ಮೀರಿ ರಾಜೀನಾಮೆ ನೀಡಿದರೆ ಅಂಗೀಕರಿಸಿ ಎಂದಿ ಸಿಎಂ ಡಿಕೆ ಶಿವಕುಮಾರ್ ಅವರಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ನೂತನ ಸಚಿವರ ಪ್ರಮಾಣವಚನಕ್ಕು ಮುನ್ನವೇ ವರಿಷ್ಠರ ತೀರ್ಮಾನದ ಬಗ್ಗೆ ಕೆಲ ಕಾಂಗ್ರೆಸಿಗರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ನಡುವೆಯೇ ಹೈಕಮಾಂಡ್​​ನ ಈ ಸೂಚನೆ ನೀಡಿದ್ದು, ತೀವ್ರ ಕುತೂಹಲ ಮೂಡಿಸಿದೆ.

ರಾಜೀನಾಮೆಗೆ ಮುಂದಾದ ಕೆಲ ಶಾಸಕರು

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಆಕ್ರೋಶಗೊಂಡಿರುವ ವಿಜಯಪುರ ಜಿಲ್ಲೆಯ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್, ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಸ್ಪೀಕರ್​ ರುದ್ರಪ್ಪ ಲಮಾಣಿಗೆ ರಾಜೀನಾಮೆ ಪತ್ರವನ್ನು ಅವರು ಸಲ್ಲಿಕೆ ಮಾಡಿದ್ದರೆ.

ಇತ್ತ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಕೂಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ ನಾಳೆ ಬೆಳಗ್ಗೆ 10 ಗಂಟೆಗೆ ಶಾಸಕ ಸ್ಥಾನ ಹಾಗೂ ನಿಗಮ ಮಂಡಳಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದವರು ಘೋಷಿಸಿದ್ದಾರೆ.

ಇನ್ನು ಸಚಿವ ಸ್ಥಾನ ಸಿಗದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಭದ್ರಾವತಿ ಶಾಸಕ ಸಂಗಮೇಶ್​, 30-40 ವರ್ಷಗಳಿಂದ ಪಕ್ಷಕ್ಕಾಗಿ ಕೆಲಸ ಮಾಡಿದ್ದೇನೆ. ಬಿಜೆಪಿಗರು 50 ಕೋಟಿ ಕೊಡ್ತೀನಿ ಅಂದ್ರೂ ಹೋಗಿಲ್ಲ. ಆದರೆ ಮಂತ್ರಿ ಮಾಡ್ತೀವಿ ಎಂದು ಹೇಳಿ ಮೋಸ ಮಾಡಿದ್ದಾರೆ. 136 ಸ್ಥಾನ ಇದೆ ಅಂತಾ ಕಾಂಗ್ರೆಸ್​ಗೆ ಹಮ್ಮು ಬಂದಿದೆ. ನಾಳೆ ನನ್ನ ಕ್ಷೇತ್ರದ ಜನರ ಜೊತೆಗೆ ಸಭೆ ನಡೆಸುತ್ತೇನೆ. ಕ್ಷೇತ್ರದ ಜನ ಹೇಳಿದ್ರೆ ನಾನು ರಾಜೀನಾಮೆ ಕೊಡ್ತೇನೆ ಎಂದವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಂಪುಟ ವಿಸ್ತರಣೆಯಲ್ಲಿ ಬಿಗ್ ಟ್ವಿಸ್ಟ್: ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 19 ಶಾಸಕರು; ಕೊನೆ ಕ್ಷಣದಲ್ಲಿ ಒಬ್ಬರಿಗೆ ಕೊಕ್!

ಕಾಂಗ್ರೆಸ್‌ ಲೆಟರ್‌ಹೆಡ್‌ನಲ್ಲಿ ಸ್ಪೀಕರ್‌ ಹೆಸರು; ಮತ್ತೊಂದು ಕೆಟ್ಟ ಸಂಪ್ರದಾಯಕ್ಕೆ ನಾಂದಿ: ಸುರೇಶ್‌ ಕುಮಾರ್‌ ಕಿಡಿ

Bigg Boss ಖ್ಯಾತಿಯ Aravind KP- Divya uruduga ಬ್ರೇಕಪ್​!; ಜಾಲತಾಣದಲ್ಲಿ ಪರಸ್ಪರ Unfollow; ನಿಜವಾಯ್ತಾ ಜೋತಿಷ್ಯ?

ಆಂತರಿಕ ಅಸಮಾಧಾನ: ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ CM ಸಿಎಂ ಸಿದ್ದರಾಮಯ್ಯ ಗೈರಾಗಿದ್ದೇಕೆ?

ನೂತನ ಸಚಿವರ ಪಟ್ಟಿ ಪ್ರಕಟ ಬೆನ್ನಲ್ಲೇ ಭುಗಿಲೆದ್ದ ಆಕ್ರೋಶ; ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ!