ಹೆಚ್ ಕೆ ಪಾಟೀಲ್, ಡಿಕೆ ಶಿವಕುಮಾರ್ 
ರಾಜಕೀಯ

ಹಿರಿಯ ಶಾಸಕ HK ಪಾಟೀಲ್‌ಗೆ ತಪ್ಪಿದ ಸಚಿವ ಸ್ಥಾನ: 21 ಕಾಂಗ್ರೆಸ್ ಕೌನ್ಸಿಲರ್‌ಗಳ ಸಾಮೂಹಿಕ ರಾಜೀನಾಮೆ!

ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೂತನ ಸಂಪುಟದಲ್ಲಿ ಗದಗ ಶಾಸಕ ಹಾಗೂ ಮಾಜಿ ಸಚಿವ ಎಚ್.ಕೆ ಪಾಟೀಲರಿಗೆ ಸಚಿವ ಸ್ಥಾನ ಕೊಡದಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಅಲ್ಲದೆ ಗದಗ-ಬೆಟಗೇರಿ ನಗರಸಭೆಯ ಕಾಂಗ್ರೆಸ್ ಸದಸ್ಯರು ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದಾರೆ.

ಗದಗ: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೂತನ ಸಂಪುಟದಲ್ಲಿ ಗದಗ ಶಾಸಕ ಹಾಗೂ ಮಾಜಿ ಸಚಿವ ಎಚ್.ಕೆ ಪಾಟೀಲರಿಗೆ ಸಚಿವ ಸ್ಥಾನ ಕೊಡದಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಅಲ್ಲದೆ ಗದಗ-ಬೆಟಗೇರಿ ನಗರಸಭೆಯ ಕಾಂಗ್ರೆಸ್ ಸದಸ್ಯರು ಇಂದು ಜಿಲ್ಲಾಧಿಕಾರಿ ಸಿ.ಎನ್ ಶ್ರೀಧರ ಅವರನ್ನು ಭೇಟಿಯಾಗಿ ಸಾಮೂಹಿಕವಾಗಿ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿ ರಾಜ್ಯ ಕಾಂಗ್ರೆಸ್ ನಾಯಕರು ಹಾಗೂ ಪಕ್ಷದ ಹೈಕಮಾಂಡ್ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದರು.

ಮೂರು ಬಾರಿ ಶಾಸಕರಾಗಿ ಹಾಗೂ ಸಚಿವರಾಗಿ ನಾಡಿನ ಹಾಗೂ ಜಿಲ್ಲೆಯ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿರುವ ಎಚ್ ಕೆ ಪಾಟೀಲ್ ಅವರ ಅನುಭವವನ್ನು ಪರಿಗಣಿಸಿಲ್ಲ ಎಂದು ಆರೋಪಿಸಿ ಐವರು ನಾಮನಿರ್ದೇಶಿತ ಸದಸ್ಯರು ಹಾಗೂ ನಗರಸಭೆಯ 16 ಚುನಾಯಿತ ಕಾಂಗ್ರೆಸ್ ಸದಸ್ಯರು ಸೇರಿ ಒಟ್ಟು 21 ಜನ ಜನಪ್ರತಿನಿಧಿಗಳು ಜಿಲ್ಲಾಧಿಕಾರಿಗಳಿಗೆ ರಾಜೀನಾಮೆ ನೀಡಿದ್ದಾರೆ. ಉತ್ತರ ಕರ್ನಾಟಕ ಭಾಗಕ್ಕೆ ಸತತವಾಗಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ 'ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ'ಕ್ಕೆ ಬೇಡಿಕೆ ಇಡುವ ಮೂಲಕ ತಮ್ಮ ಪ್ರತಿಭಟನೆ ದಾಖಲಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂದೇ ಉದಯನಿಧಿ ಸ್ಟಾಲಿನ್ ಬಿಡುಗಡೆ ಮಾಡಿ: ಪೊಲೀಸರಿಗೆ ಮದ್ರಾಸ್ ಹೈಕೋರ್ಟ್ ಆದೇಶ

ನಟಿ ತ್ರಿಶಾ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಆರೋಪ: ನಾನು ಅವರ ಹೆಸರನ್ನೂ ಉಲ್ಲೇಖಿಸಿದ್ದೇನೆಯೇ? ಬಂಧನದ ಬಳಿಕ ಉದಯನಿಧಿ ಸ್ಟಾಲಿನ್

ನಟಿ ತ್ರಿಶಾ ಕುರಿತು ಆಕ್ಷೇಪಾರ್ಹ ಹೇಳಿಕೆ; DMK ನಾಯಕ ಉದಯನಿಧಿ ಸ್ಟಾಲಿನ್ ಪೊಲೀಸ್ ವಶಕ್ಕೆ, ತಮಿಳುನಾಡು ರಾಜಕೀಯದಲ್ಲಿ ತೀವ್ರ ಸಂಚಲನ..!

MS Dhoni Bike Collection: ಅತ್ಯಂತ ದುಬಾರಿ ಬೈಕ್ ಯಾವುದು ಗೊತ್ತಾ? ಇದರ ಬೆಲೆ ಕೇಳಿದ್ರೆ ನಿಜಕ್ಕೂ ಶಾಕ್ ಆಗ್ತೀರಾ!Video

ಸಿದ್ದರಾಮಯ್ಯ ಮಾತಿಗೆ ಯಾವುದೇ ಬೆಲೆ ಇಲ್ಲ, ಅವರ ಆಪ್ತನಾಗಿದ್ದಕ್ಕೆ ಸಚಿವ ಸ್ಥಾನ ಕೈ ತಪ್ಪಿದೆ: CM ಡಿಕೆಶಿ ವಿರುದ್ಧ ಸುಧಾಕರ್ ಕಿಡಿ