ಪ್ರದೀಪ್ ಈಶ್ವರ್ 
ರಾಜಕೀಯ

ನಿನ್ನ ಯೋಗ್ಯತೆಗೆ ಯತ್ನಾಳ್ ಬಾಯಿ ಮುಚ್ಚಿಸೋಕಾಗಿಲ್ಲ: ನನಗೆ ವಯಸ್ಸಿದೆ, ಇನ್ನೂ 30 ವರ್ಷ ಕಾಯಲು ಸಿದ್ಧ; ಪ್ರದೀಪ್ ಈಶ್ವರ್

ಸಾಮಾನ್ಯನಾದ ನನಗೆ ಪಕ್ಷ ಟಿಕೆಟ್ ನೀಡಿ ಶಾಸಕನನ್ನಾಗಿ ಮಾಡಿದೆ. ಮಧ್ಯಾಹ್ನ ನಡೆಯುವ ಸಭೆಗೆ ನಾನು ಹೋಗುವುದಿಲ್ಲ. ನಮ್ಮ ನಾಯಕರು ಏನು ಹೇಳುತ್ತಾರೋ ಅದನ್ನೇ ನಾನು ಪಾಲಿಸುತ್ತೇನೆ ಎಂದರು.

ಬೆಂಗಳೂರು: ತಾವು ಯಾವುದೇ ಬಂಡಾಯ ಸಭೆಯಲ್ಲಿ ಭಾಗವಹಿಸುವುದಿಲ್ಲ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನು ಕಾಂಗ್ರೆಸ್‌ನ ನಿಷ್ಠಾವಂತ ಕಾರ್ಯಕರ್ತ. ಕಾಂಗ್ರೆಸ್ ನನಗೆ ದೇವಾಲಯ ಇದ್ದಂತೆ, ಕಾಂಗ್ರೆಸ್ ನಮ್ಮ ಗರ್ಭಗುಡಿ. ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಡಿ.ಕೆ. ಶಿವಕುಮಾರ್ ಹಾಗೂ ಬಿ.ಕೆ. ಹರಿಪ್ರಸಾದ್ ನಮ್ಮ ನಾಯಕರು.

ಸಾಮಾನ್ಯನಾದ ನನಗೆ ಪಕ್ಷ ಟಿಕೆಟ್ ನೀಡಿ ಶಾಸಕನನ್ನಾಗಿ ಮಾಡಿದೆ. ಮಧ್ಯಾಹ್ನ ನಡೆಯುವ ಸಭೆಗೆ ನಾನು ಹೋಗುವುದಿಲ್ಲ. ನಮ್ಮ ನಾಯಕರು ಏನು ಹೇಳುತ್ತಾರೋ ಅದನ್ನೇ ನಾನು ಪಾಲಿಸುತ್ತೇನೆ ಎಂದರು.

ಜೈ ಕಾಂಗ್ರೆಸ್. ನಾನು ಇನ್ನೂ 30 ವರ್ಷ ಕಾಯಲು ಸಿದ್ಧನಿದ್ದೇನೆ. ನನಗೆ ವಯಸ್ಸಿದೆ, ಅವಕಾಶಕ್ಕಾಗಿ ಕಾಯುತ್ತೇನೆ. ಸಭೆ ನಡೆಸುತ್ತಿರುವವರಿಂದ ನನಗೆ ಯಾವುದೇ ಕರೆ ಬಂದಿಲ್ಲ. ನಾನು ಪಕ್ಷಕ್ಕೆ ನಿಷ್ಠನಾಗಿದ್ದೇನೆ. ಆದ್ದರಿಂದ ಆ ಸಭೆಗೆ ಹೋಗುವುದಿಲ್ಲ ಎಂದು ಹೇಳಿದರು.

ಸಚಿವ ಸ್ಥಾನ ಕುರಿತು ಮಾತನಾಡಿದ ಅವರು, ಮಂತ್ರಿ ಆಗಬೇಕು ಎಂಬ ಆಸೆ ಇರುವುದು ಸಹಜ. ಆದರೆ ಈಗಲೇ ಸಿಗಬೇಕು ಎಂಬ ಹಠ ಇಲ್ಲ. ಹಿರಿಯರಿಗೆ ಅವಕಾಶ ಸಿಕ್ಕಿದೆ. 2028ರ ಚುನಾವಣೆಯಲ್ಲಿ ಕಾಂಗ್ರೆಸ್ 150 ಸ್ಥಾನಗಳನ್ನು ಗೆಲ್ಲಲಿದೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.

ಇನ್ನೂ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಪ್ರದೀಪ್ ಈಶ್ವರ್, ಅವರಿಗೆ ಮಾಡೋಕೆ ಬೇರೆ ಕೆಲಸ ಇಲ್ಲ. ಹೀಗಾಗಿ ಮಾತಾಡ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಅಸಮರ್ಥ. ವಿಜಯೇಂದ್ರ ನಿನ್ನ ಯೋಗ್ಯೆತೆಗೆ ಯತ್ನಾಳ್ ಬಾಯಿ ಮುಚ್ಚಿಸೋಕೆ ಆಗಲಿಲ್ಲ,ಬಂಡಾಯವನ್ನು ಶಮನ ಮಾಡೋಕೆ ಆಗಲಿಲ್ಲ ಎಂದು ಲೇವಡಿ ಮಾಡಿದರು.

ಛಲವಾದಿ ನಾರಾಯಣಸ್ವಾಮಿ ವಿರುದ್ಧ ಹರಿಹಾಯ್ದ ಪ್ರದೀಪ್ ಈಶ್ವರ್ ಅರು ಕೋತಿ ಇದ್ದ ಹಾಗೆ. ಯಾವ ಮರದಲ್ಲಿ ಹಣ್ಣು ಇರುತ್ತೋ, ಆ ಮರಕ್ಕೆ ನೆಗೆಯುತ್ತಿರುತ್ತಾರೆ ವ್ಯಂಗ್ಯವಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಟಿ ತ್ರಿಶಾ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಆರೋಪ: ನಾನು ಅವರ ಹೆಸರನ್ನೂ ಉಲ್ಲೇಖಿಸಿದ್ದೇನೆಯೇ? ಬಂಧನದ ಬಳಿಕ ಉದಯನಿಧಿ ಸ್ಟಾಲಿನ್

ನಟಿ ತ್ರಿಶಾ ಕುರಿತು ಆಕ್ಷೇಪಾರ್ಹ ಹೇಳಿಕೆ; DMK ನಾಯಕ ಉದಯನಿಧಿ ಸ್ಟಾಲಿನ್ ಪೊಲೀಸ್ ವಶಕ್ಕೆ, ತಮಿಳುನಾಡು ರಾಜಕೀಯದಲ್ಲಿ ತೀವ್ರ ಸಂಚಲನ..!

MS Dhoni Bike Collection: ಅತ್ಯಂತ ದುಬಾರಿ ಬೈಕ್ ಯಾವುದು ಗೊತ್ತಾ? ಇದರ ಬೆಲೆ ಕೇಳಿದ್ರೆ ನಿಜಕ್ಕೂ ಶಾಕ್ ಆಗ್ತೀರಾ!Video

ಸಿದ್ದರಾಮಯ್ಯ ಮಾತಿಗೆ ಯಾವುದೇ ಬೆಲೆ ಇಲ್ಲ, ಅವರ ಆಪ್ತನಾಗಿದ್ದಕ್ಕೆ ಸಚಿವ ಸ್ಥಾನ ಕೈ ತಪ್ಪಿದೆ: CM ಡಿಕೆಶಿ ವಿರುದ್ಧ ಸುಧಾಕರ್ ಕಿಡಿ

Crass, cheap and derogatory': ನಟಿ ತ್ರಿಶಾಗೆ ಅಸಭ್ಯ, ಕೀಳುಮಟ್ಟದಲ್ಲಿ ಅಪಮಾನ, ಉದಯನಿಧಿ ಸ್ಟಾಲಿನ್ ಕ್ಷಮೆಯಾಚನೆಗೆ ಖುಷ್ಬೂ ಸುಂದರ್ ಒತ್ತಾಯ!