ಯತೀಂದ್ರ ಸಿದ್ದರಾಮಯ್ಯ  
ರಾಜಕೀಯ

'ತಂದೆ 14 ಮಂದಿಯ ಹೆಸರನ್ನು ಕೊಟ್ಟಿದ್ದರು, ಅದರಲ್ಲಿ ಹೆಚ್ ಸಿ ಮಹದೇವಪ್ಪನವರದ್ದೂ ಇತ್ತು, ಆದರೂ ಸಚಿವ ಸ್ಥಾನ ಅವರ ಕೈತಪ್ಪಿತು': ಯತೀಂದ್ರ ಸಿದ್ದರಾಮಯ್ಯ

ಹಿರಿಯರಾದ ಮಹದೇವಪ್ಪ ಮತ್ತು ತನ್ವೀರ್ ಸೇಠ್ ಅವರ ಮನವೊಲಿಸುವ ಕಾರ್ಯವನ್ನು ಪಕ್ಷದ ವರಿಷ್ಠರು ಮಾಡಿದ್ದಾರೆ. ಕುರುಬ ಸಮುದಾಯದ ಅಸಮಾಧಾನದಿಂದಾಗಿ ಮತ್ತು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನ ಬಿಟ್ಟಿದ್ದರಿಂದ ತನಗೆ ಸಚಿವ ಸ್ಥಾನ ಲಭಿಸಿತು ಎಂದು ಕೂಡ ಹೇಳಿದ್ದಾರೆ.

ಮೈಸೂರು: ಮಾಜಿ ಸಚಿವ ಹೆಚ್​ಸಿ ಮಹದೇವಪ್ಪಗೆ ಈ ಬಾರಿ ಸಚಿವ ಸ್ಥಾನ ಕೈತಪ್ಪಿದ ಬಗ್ಗೆ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ನಗರಾಭಿವೃದ್ಧಿ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ, ಮಹದೇವಪ್ಪ ಹೆಸರನ್ನು ಸಿದ್ದರಾಮಯ್ಯ ಸಚಿವರ ಪಟ್ಟಿಯಲ್ಲಿ ಶಿಫಾರಸು ಮಾಡಿದ್ದರು. ಆದರೆ, ಹೈಕಮಾಂಡ್ ಈ ಬಾರಿ ಹೊಸ ಮುಖವಾಗಿ ನರೇಂದ್ರ ಸ್ವಾಮಿ ಅವರನ್ನು ಆಯ್ಕೆ ಮಾಡಿದೆ ಎಂದು ಸ್ಪಷ್ಟಪಡಿಸಿದರು.

ಹಿರಿಯರಾದ ಮಹದೇವಪ್ಪ ಮತ್ತು ತನ್ವೀರ್ ಸೇಠ್ ಅವರ ಮನವೊಲಿಸುವ ಕಾರ್ಯವನ್ನು ಪಕ್ಷದ ವರಿಷ್ಠರು ಮಾಡಿದ್ದಾರೆ. ಕುರುಬ ಸಮುದಾಯದ ಅಸಮಾಧಾನದಿಂದಾಗಿ ಮತ್ತು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನ ಬಿಟ್ಟಿದ್ದರಿಂದ ತನಗೆ ಸಚಿವ ಸ್ಥಾನ ಲಭಿಸಿತು ಎಂದು ಕೂಡ ಹೇಳಿದ್ದಾರೆ.

ನೂತನವಾಗಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕಗೊಂಡ ಯತೀಂದ್ರ ಸಿದ್ದರಾಮಯ್ಯ, ತಮ್ಮ ಜಿಲ್ಲಾ ಉಸ್ತುವಾರಿ ಸ್ಥಾನ ಮತ್ತು ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯಿಸಿದ್ದಾರೆ. ಬರ ಪೀಡಿತ ಪ್ರದೇಶಗಳ ಪರಿಶೀಲನೆಗಾಗಿ ಮುಖ್ಯಮಂತ್ರಿಗಳ ಸೂಚನೆಯಂತೆ ಮೈಸೂರಿಗೆ ಭೇಟಿ ನೀಡಿರುವ ಅವರು, ಮೊದಲು ಉರುಲಿಂಗ ಪೆದ್ದಿ ಮಠ ಹಾಗೂ ಸುತ್ತೂರು ಮಠಕ್ಕೆ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದರು. ಈ ಹಿಂದೆ ತಾತ್ಕಾಲಿಕವಾಗಿ ಮೈಸೂರು ಉಸ್ತುವಾರಿ ಜವಾಬ್ದಾರಿ ವಹಿಸಿಕೊಂಡಿದ್ದ ಯತೀಂದ್ರ, ಈಗ ಅಧಿಕೃತವಾಗಿ ಸ್ಥಾನ ಖಚಿತವಾಗಿರುವ ಕಾರಣ ಮಠಗಳಿಗೆ ಭೇಟಿ ನೀಡಿರುವುದಾಗಿ ಹೇಳಿದರು.

ಅಸಮಾಧಾನಗೊಂಡಿರುವ ಹಿರಿಯ ನಾಯಕರನ್ನು ನಮ್ಮ ವರಿಷ್ಠರು ಹೋಗಿ ಭೇಟಿ ಮಾಡಿದ್ದಾರೆ. ಹಾಗಾಗಿ ಭಿನ್ನಮತ ಶಮನವಾಗಲಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

2013ರ ಅತ್ಯಾಚಾರ ಪ್ರಕರಣ: ‘Tehelka’ ಮಾಜಿ ಸಂಪಾದಕ ತರುಣ್ ತೇಜಪಾಲ್ ದೋಷಿ; ಬಾಂಬೆ ಹೈಕೋರ್ಟ್ ಮಹತ್ವದ ತೀರ್ಪು..!

FCRA: 'ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ, ಸಾಮಾನ್ಯ ಭಾರತೀಯರೇ ದೊಡ್ಡ ಬೆಲೆ ತೆರಬೇಕಾಗುತ್ತದೆ': Shashi Tharoor

"ಪ್ರಧಾನಿ ಮೋದಿಗೆ ಅಷ್ಟೊಂದು ತಲೆಬಾಗಬೇಡಿ": Instagram ಖಾತೆ ನಿರ್ಬಂಧ ಬೆನ್ನಲ್ಲೇ Meta ವಿರುದ್ಧ ಕೇಜ್ರಿವಾಲ್ ಆಕ್ರೋಶ..!

ಯೆನ್ ರಕ್ಷಣೆಗೆ ಅಮೇರಿಕಾ-ಜಪಾನ್ ಜಂಟಿ ಕಾರ್ಯಾಚರಣೆ, ಜಾಗತಿಕ ಹಣಕಾಸು ವ್ಯವಸ್ಥೆಗೆ ಎಚ್ಚರಿಕೆಯ ಗಂಟೆ (ಹಣಕ್ಲಾಸು)

ಹಾರ್ಮುಜ್ ಜಲಸಂಧಿ ಒಪ್ಪಂದ ಸನ್ನಿಹಿತ, ಆದರೆ ಯಾವುದಾದರೊಂದು ದೇಶ ತನ್ನ ನಿಲುವಿನಲ್ಲಿ ಸಡಿಲಿಕೆ ತೋರಿಸಬೇಕು: ಇರಾನ್-ಯುಎಸ್