ಬಸವರಾಜ ಹೊರಟ್ಟಿ, ಸಿಎಂ ಡಿ ಕೆ ಶಿವಕುಮಾರ್  
ರಾಜಕೀಯ

ಬಸವರಾಜ ಹೊರಟ್ಟಿ ಅವರು ತಮ್ಮ ಸ್ಥಾನಕ್ಕೆ ಘನತೆ ತುಂಬಿದವರು; ಆಗಸ್ಟ್ 14ಕ್ಕೆ ನೂತನ ಸಭಾಪತಿ ಆಯ್ಕೆ: CM ಡಿ.ಕೆ ಶಿವಕುಮಾರ್; Video

ಹೊರಟ್ಟಿಯವರ ರಾಜೀನಾಮೆಯನ್ನು ಕ್ಷಣದಲ್ಲಿಯೇ ಅಂಗೀಕರಿಸಲಾಗಿದ್ದು ನೂತನ ಸಭಾಪತಿಗಳನ್ನು ಆಯ್ಕೆ ಮಾಡುವವರೆಗೆ ಅವರೇ ಹಂಗಾಮಿ ಸಭಾಪತಿಯಾಗಿ ಮುಂದುವರಿಯಬೇಕೆಂದು ಮನವಿ ಮಾಡಿಕೊಳ್ಳುವುದಾಗಿ ಸಿಎಂ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರು: ಸಾಕಷ್ಟು ರಾಜಕೀಯ ಬೆಳವಣಿಗಳ ಬಳಿಕ ಕೊನೆಗೂ ಕರ್ನಾಟಕ ವಿಧಾನ ಪರಿಷತ್​​ನ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ನೀಡಿದ್ದಾರೆ. ಸಿಎಂ ಡಿಕೆಶಿ, ಕೆಪಿಸಿಸಿ ಅಧ್ಯಕ್ಷರ ಸುದೀರ್ಘ ಮನವೊಲಿಕೆ ಬಳಿಕ ಅವರು ಹುದ್ದೆ ತೊರೆದಿದ್ದು, ಸ್ವಇಚ್ಛೆಯಿಂದ ರಾಜೀನಾಮೆ ಎಂದು ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.

ಹೊರಟ್ಟಿಯವರ ರಾಜೀನಾಮೆಯನ್ನು ಕ್ಷಣದಲ್ಲಿಯೇ ಅಂಗೀಕರಿಸಲಾಗಿದ್ದು ನೂತನ ಸಭಾಪತಿಗಳನ್ನು ಆಯ್ಕೆ ಮಾಡುವವರೆಗೆ ಅವರೇ ಹಂಗಾಮಿ ಸಭಾಪತಿಯಾಗಿ ಮುಂದುವರಿಯಬೇಕೆಂದು ಮನವಿ ಮಾಡಿಕೊಳ್ಳುವುದಾಗಿ ಸಿಎಂ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

ಬಸವರಾಜ ಹೊರಟ್ಟಿ ಅವರು ವಿಧಾನ ಪರಿಷತ್‌ ಸಭಾಪತಿ ಸ್ಥಾನವನ್ನು ಅತ್ಯಂತ ಘನತೆಯಿಂದ ನಿಭಾಯಿಸಿಕೊಂಡು ಬಂದಿದ್ದಾರೆ. ಆ ಹುದ್ದೆಗೆ ಅವರು ನೀಡಿದಷ್ಟು ಗೌರವವನ್ನು ಬೇರೆ ಯಾರೂ ನೀಡಿಲ್ಲ. ಹಾಗಾಗಿ, ನಾವು ಸಹ ಅವರಿಗೆ ಅಷ್ಟೇ ಆದರದಿಂದ ಬೀಳ್ಕೊಡುಗೆ ನೀಡಲಿದ್ದೇವೆ. ಎಲ್ಲಾ ಪರಿಷತ್ ಸದಸ್ಯರಿಗೂ ಕೃತಜ್ಞತೆ ಸಲ್ಲಿಸಿ, ಸೌಹಾರ್ದಯುತವಾಗಿ ರಾಜೀನಾಮೆ ನೀಡುವುದು ಅವರ ಆಸೆಯಾಗಿದೆ. ಅವರ ಈ ಭಾವನೆಯನ್ನು ನಾವು ಸಂಪೂರ್ಣ ಗೌರವಿಸುತ್ತೇವೆ ಎಂದು ಹೇಳಿದ್ದಾರೆ.

ಆಗಸ್ಟ್ 14ರಂದು ಬೆಳಗ್ಗೆ ಉಪ ಸಭಾಪತಿಗಳ ಆಯ್ಕೆ ಹಾಗೂ ಸಾಯಂಕಾಲ ವಿಧಾನಪರಿಷತ್ ಸಭಾಪತಿಗಳ ಆಯ್ಕೆ ನಡೆಯಲಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಾಧ್ಯಮಗಳಿಗೆ ಪ್ರವೇಶ ನಿರ್ಬಂಧಿಸುವ ಹಕ್ಕು ಯಾವುದೇ ಸರ್ಕಾರಕ್ಕೆ ಇಲ್ಲ: ಟ್ರಂಪ್ ವಿರುದ್ಧ ಒಂದಾದ ಅಮೆರಿಕದ ಮಾಧ್ಯಮಗಳು!

ಸೌಜನ್ಯ ಕೇಸ್‌ ಮರು ತನಿಖೆಗೆ ಸುಪ್ರೀಂ ಆದೇಶ: ಶ್ರೀ ಕ್ಷೇತ್ರ ಧರ್ಮಸ್ಥಳ ಹೇಳಿದ್ದು ಏನು?

ಬೆಳಗಾವಿ: 6 ಮಂದಿ ಸಾವಿನ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್; ವ್ಯಕ್ತಿ ಕೈಯಲ್ಲಿ ಬಕೆಟ್; CCTVಯಲ್ಲಿ ಸಿಕ್ತು ಸ್ಫೋಟಕ ತಿರುವು!

ಏಷ್ಯನ್ ಗೇಮ್ಸ್ 2026: ಎರಡನೇ ದಿನ ನಾಲ್ಕು ಪದಕ ಗೆದ್ದ ಭಾರತ, MMA ಸ್ಪರ್ಧೆಯಲ್ಲಿ ಕಂಚು ಗೆದ್ದು, ಇತಿಹಾಸ ಬರೆದ ಸುಚಿಕಾ ತರಿಯಾಲ್!

ಮಾಗಡಿ: ಚಕ್ರಬಾವಿ ಮರುಳಸಿದ್ದೇಶ್ವರ ಜಂಗಮ ಮಠದ ಸ್ವಾಮೀಜಿ ಲಿಂಗೈಕ್ಯ