ಎಚ್ ಡಿ ಕುಮಾರಸ್ವಾಮಿ-ಡಿ ಕೆ ಶಿವಕುಮಾರ್  
ರಾಜಕೀಯ

ಅಸಮಾಧಾನಿತ ಕಾಂಗ್ರೆಸ್ ಶಾಸಕರಿಗೆ ಕುಮಾರಸ್ವಾಮಿ ಆಫರ್; ಹೊಸ ದಾಳ ಉರುಳಿಸಿದ 'ದಳಪತಿ'

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ತೀವ್ರ ಆಕ್ರೋಶಗೊಂಡಿರುವ ಕಾಂಗ್ರೆಸ್ ಶಾಸಕರನ್ನು ಸಮಾಧಾನಪಡಿಸಲು ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮನೆ ಮನೆಗೆ ತೆರಳಿ ಮಾತುಕತೆ ನಡೆಸಿ, ಮನವೊಲಿಸುವ ಯತ್ನ ಮಾಡಿದ್ದಾರೆ.

ಹಾಸನ: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಭುಗಿಲೆದ್ದಿರುವ ಅಸಮಾಧಾನ ತಣ್ಣಗಾಗುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ. ಈ ಮಧ್ಯೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಹೊಸ ದಾಳ ಉರುಳಿಸಿದಿದ್ದಾರೆ.

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ತೀವ್ರ ಆಕ್ರೋಶಗೊಂಡಿರುವ ಕಾಂಗ್ರೆಸ್ ಶಾಸಕರನ್ನು ಸಮಾಧಾನಪಡಿಸಲು ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮನೆ ಮನೆಗೆ ತೆರಳಿ ಮಾತುಕತೆ ನಡೆಸಿ, ಮನವೊಲಿಸುವ ಯತ್ನ ಮಾಡಿದ್ದಾರೆ. ಆದರೂ ಯಾವುದೇ ಪ್ರಯೋಜನೆ ಆಗಿಲ್ಲ. ಇದರ ಮಧ್ಯೆ ಕುಮಾರಸ್ವಾಮಿ ಅವರು ಜೆಡಿಎಸ್​​​​​​ಗೆ ಬರುವಂತೆ ಓಪನ್ ಆಫರ್ ನೀಡಿದ್ದಾರೆ.

ಇಂದು ಹಾಸನದ ಹರದನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಜೆಡಿಎಸ್ ಪಕ್ಷ ನೊಂದವರಿಗೆ, ನೋವಿನಲ್ಲಿರುವವರಿಗೆ ಹಾಗೂ ಸಮಸ್ಯೆಯಲ್ಲಿದ್ದವರಿಗೆ ಪರಿಹಾರ ಕೊಡುವ ಪಕ್ಷ. ನೋವಿನಲ್ಲಿರುವವರಿಗೆ ಜೆಡಿಎಸ್ ಪಕ್ಷದ ಬಾಗಿಲು ತೆರೆದಿರುತ್ತದೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಶಾಸಕರಿಗೆ ಬಹಿರಂಗ ಆಫರ್ ನೀಡಿದ್ದಾರೆ.

ಕುಮಾರಸ್ವಾಮಿ ಅವರ ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಕಾಮಗ್ರೆಸ್ ಶಾಸಕರು ಜೆಡಿಎಸ್​​ನತ್ತ ಮುಖ ಮಾಡುತ್ತಾರಾ ಎನ್ನುವುದನ್ನು ಕಾದುನೋಡಬೇಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಿಮ್ಮ ಮೇಲೆ ನಮಗೆ ನಂಬಿಕೆ ಇದೆ, ದೇಶಕ್ಕೆ ನಿಮ್ಮ ಅವಶ್ಯಕತೆ ಇದೆ: CJP ಪ್ರತಿಭಟನೆ ನಂತರ ಮೊದಲ ಬಾರಿ Gen Z ಉದ್ದೇಶಿಸಿ ಮೋದಿ ಭಾಷಣ

ಟೆಸ್ಟ್ ಪಂದ್ಯದ ಕೊನೆಯ ಓವರ್​ನಲ್ಲಿ 6, 6, 0, 6, 6 ಸಿಡಿಸಿದ ಗುರ್ನೂರ್ ಬ್ರಾರ್; ಗಂಭೀರ್ ಚಲ್ಲಾಳೆ, Video!

Toxic: ಕೊನೆಗೂ ಬಿಡುಗಡೆ ಆಯ್ತು ‘ಟಾಕ್ಸಿಕ್’ ಟ್ರೈಲರ್; ಡಾರ್ಕ್‌ ಗ್ಯಾಂಗ್‌ಸ್ಟರ್‌ ಲೋಕಕ್ಕೆ ರಾಕಿಂಗ್‌ ಸ್ಟಾರ್ ಎಂಟ್ರಿ, ಫ್ಯಾನ್ಸ್‌ ಫಿದಾ!

ಭಾರತೀಯ ಅಭಿಮಾನಿಗಳಿಗೆ ಶಾಕ್: ಭಾರತಕ್ಕೂ ಮೊದಲು ವಿದೇಶದಲ್ಲಿ Ramayana ಚಿತ್ರ ಬಿಡುಗಡೆ; ಕಾರಣ ಬಿಚ್ಚಿಟ್ಟ ನಿರ್ಮಾಪಕ!

'ಜೆಡಿಎಸ್ ಪಾದಯಾತ್ರೆ ಅಲ್ಲ, ಕುಮಾರಸ್ವಾಮಿ ಮಾಡಿದ ಪಾಪಕ್ಕೆ ಪ್ರಾಯಶ್ಚಿತ ಯಾತ್ರೆ: ಸಚಿವ ಬಾಲಕೃಷ್ಣ ತಿರುಗೇಟು