ಚೆಲುವರಾಯಸ್ವಾಮಿ, ಕುಮಾರಸ್ವಾಮಿ  
ರಾಜಕೀಯ

‘ಕೃಷಿ ವಿವಿ ವಿಚಾರದಲ್ಲಿ ನಾನು ಕಣ್ಣೀರಲ್ಲ, ರಕ್ತವನ್ನೇ ಸುರಿಸಿದ್ದೇನೆ, ಮಂಡ್ಯ ಜಿಲ್ಲೆಗೆ ನಿಮ್ಮ ಕೊಡುಗೆ ಏನು ಕುಮಾರಸ್ವಾಮಿಯವರೇ?’: ಚೆಲುವರಾಯಸ್ವಾಮಿ ಪ್ರಶ್ನೆ

ನೀವು 20 ವರ್ಷ ಅಧಿಕಾರದಲ್ಲಿದ್ದರೂ ಮಂಡ್ಯಕ್ಕೆ ಕೃಷಿ ವಿಶ್ವವಿದ್ಯಾಲಯ ತರಲು ಸಾಧ್ಯವಾಗಲಿಲ್ಲ. ಮಂಡ್ಯವನ್ನು ನಿಮ್ಮ ಕರ್ಮಭೂಮಿ ಎಂದು ಹೇಳಿಕೊಳ್ಳಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಎಂದು ಪ್ರಶ್ನಿಸಿದರು.

ಮಂಡ್ಯ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಸಚಿವ ಎನ್. ಚಲುವರಾಯಸ್ವಾಮಿ, ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ತಾನು ಕಣ್ಣೀರಿನ ಬದಲು ರಕ್ತವನ್ನೇ ಸುರಿಸಿದ್ದೇನೆ ಎಂದು ಹೇಳಿದ್ದಾರೆ.

ಮಂಡ್ಯ ಶಾಸಕ ಗಣಿಗ ರವಿಕುಮಾರ್ ನೇತೃತ್ವದಲ್ಲಿ ಸಿಲ್ವರ್ ಜುಬಿಲಿ ಪಾರ್ಕ್‌ನಲ್ಲಿ ನೂತನ ಸಚಿವರಾದ ಚಲುವರಾಯಸ್ವಾಮಿ ಹಾಗೂ ಪಿ.ಎಂ. ನರೇಂದ್ರಸ್ವಾಮಿ ಅವರಿಗೆ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಜಿಲ್ಲೆಗೆ ಕುಮಾರಸ್ವಾಮಿ ಅವರ ಕೊಡುಗೆ ಏನು ಎಂದು ಪ್ರಶ್ನಿಸಿದರು.

ನೀವು 20 ವರ್ಷ ಅಧಿಕಾರದಲ್ಲಿದ್ದರೂ ಮಂಡ್ಯಕ್ಕೆ ಕೃಷಿ ವಿಶ್ವವಿದ್ಯಾಲಯ ತರಲು ಸಾಧ್ಯವಾಗಲಿಲ್ಲ. ಮಂಡ್ಯವನ್ನು ನಿಮ್ಮ ಕರ್ಮಭೂಮಿ ಎಂದು ಹೇಳಿಕೊಳ್ಳಲು ನಿಮಗೆ ನಾಚಿಕೆಯಾಗುವುದಿಲ್ಲವೇ? ಎಂದು ಪ್ರಶ್ನಿಸಿದರು. ಕೃಷಿ ವಿಶ್ವವಿದ್ಯಾಲಯಕ್ಕಾಗಿ ಈಗಾಗಲೇ 100 ಕೋಟಿ ರೂಪಾಯಿ ಮಂಜೂರಾಗಿದೆ ಎಂದೂ ಹೇಳಿದರು.

ತಮ್ಮ ರಾಜಕೀಯ ಹಾಗೂ ಆಡಳಿತಾತ್ಮಕ ಸಾಧನೆಗಳನ್ನು ನೆನಪಿಸಿಕೊಂಡ ಚಲುವರಾಯಸ್ವಾಮಿ, 1999ರಲ್ಲಿ ರಾಜ್ಯಾದ್ಯಂತ ಜೆಡಿಎಸ್ ಸೋಲು ಕಂಡಿದ್ದರೂ ನಾಗಮಂಗಲದಿಂದ ತಾನು ಗೆದ್ದೆ. ನಾನು ಮೈಶುಗರ್ ಕಾರ್ಖಾನೆಯನ್ನು ಪುನರಾರಂಭಿಸಿದೆ. 2019ರಲ್ಲಿ ಅದು ಸ್ಥಗಿತಗೊಂಡಾಗ ಅದನ್ನು ಉಳಿಸಲು ನಾವು ಹೋರಾಡಿದೆವು. 20 ವರ್ಷಗಳ ಬಳಿಕ ಈ ಬಾರಿ ಕಾರ್ಖಾನೆ ಶೇ.8.75ರಷ್ಟು ಇಳುವರಿ ದಾಖಲಿಸಿದೆ. ಖಾಸಗೀಕರಣ ಮಾಡುವ ಬದಲು ನಮ್ಮ ಸರ್ಕಾರ ಕಾರ್ಖಾನೆಯನ್ನು ರಕ್ಷಿಸಿದೆ ಎಂದು ಹೇಳಿದರು.

ಕಾವೇರಿ, ಮೇಕೆದಾಟು

ಕಾವೇರಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಜೆಡಿಎಸ್ ಸಂಸದರ ನಿಷ್ಕ್ರಿಯತೆಯನ್ನು ಟೀಕಿಸಿದ ಚಲುವರಾಯಸ್ವಾಮಿ, ತಮಿಳುನಾಡಿಗೆ ನೀರು ಹರಿಸುತ್ತಿರುವಾಗ ಅವರು ಏನು ಮಾಡುತ್ತಿದ್ದರು ಎಂದು ಪ್ರಶ್ನಿಸಿದರು.

ನಮ್ಮ ನಿಲುವು ಸ್ಪಷ್ಟವಾಗಿದೆ. ಕುಡಿಯುವ ನೀರು ಮತ್ತು ನಮ್ಮ ರೈತರ ಅಗತ್ಯಗಳು ಮೊದಲು; ತಮಿಳುನಾಡು ನಂತರ ಎಂದರು.

ಹಿಂದಿನ ಭರವಸೆಗಳ ವಿಚಾರದಲ್ಲಿ ಕುಮಾರಸ್ವಾಮಿ ಅವರನ್ನು ಟೀಕಿಸಿದ ಚೆಲುವರಾಯಸ್ವಾಮಿ, ಐದು ನಿಮಿಷದಲ್ಲಿ ಮೇಕೆದಾಟು ಯೋಜನೆಗೆ ಅನುಮೋದನೆ ಕೊಡಿಸುವುದಾಗಿ ಹಿಂದೆ ಹೇಳಿದ್ದ ವ್ಯಕ್ತಿ ಎಲ್ಲಿದ್ದಾರೆ” ಎಂದು ವ್ಯಂಗ್ಯವಾಡಿದರು.

ನೆರೆಯ ರಾಜ್ಯದ ಅನುಮತಿ ಕಡ್ಡಾಯವಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದರೂ ಮೇಕೆದಾಟು ಯೋಜನೆ ಕುರಿತು ಯಾವುದೇ ನಿರ್ಧಾರ ಕೈಗೊಂಡಿರಲಿಲ್ಲ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೋಮಾ ಸ್ಥಿತಿಯಲ್ಲಿ ಇರಾನ್‌ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ? ವದಂತಿ ಬೆನ್ನಲ್ಲೇ ದಿಢೀರ್ Video ಬಿಡುಗಡೆ ಮಾಡಿದ ಇರಾನ್; ಸತ್ಯ ಮುಚ್ಚಿಡುವ ಯತ್ನವೇ..?

ಇಡೀ ದೇಹಕ್ಕೆ ಹರಡಿದ cancer, Joe Biden ಆರೋಗ್ಯ ಮತ್ತಷ್ಟು ಕ್ಷೀಣ; BBC ಸಂದರ್ಶನದಲ್ಲಿ ಪುತ್ರ ಹಂಟರ್ ಕಳವಳ

ಭಾರತ-ಅಮೆರಿಕ ಸಂಬಂಧಗಳಿಗೆ ಹೊಸ ವೇಗ: ಪ್ರಧಾನಿ ಮೋದಿಗೆ ವ್ಯಾನ್ಸ್ ಕರೆ

KBC ವೇದಿಕೆಯಲ್ಲಿ ಆಮಿರ್ ಖಾನ್‌; ‘4ನೇ ಮದುವೆ ಯಾವಾಗ?’; ಕಾಲೆಳೆದ ನೆಟ್ಟಿಗರು, Amitabh bachchan ಶೋ Promoಗೆ ಕಮೆಂಟ್‌ಗಳ ಮಹಾಪೂರ..!

40 ಕೋಟಿ ಯುವಕರು ದೇಶದ ನಿಜವಾದ ಶಕ್ತಿ, ಆದರೆ ನಿರುದ್ಯೋಗ ತಾಂಡವವಾಡುತ್ತಿದೆ: ಉತ್ತರಪ್ರದೇಶದಲ್ಲಿ ರಾಹುಲ್ ಗಾಂಧಿ