ಡಿಕೆ ಶಿವಕುಮಾರ್ 
ರಾಜಕೀಯ

ಮುಂಗಾರು ಅಧಿವೇಶನ ಆರಂಭ: ವಿಧಾನಸಭೆ ಹೊಸ್ತಿಲಿಗೆ, CM ಪೀಠಕ್ಕೆ ಶಿರಬಾಗಿ ನಮಸ್ಕರಿಸಿದ ಡಿಕೆ ಶಿವಕುಮಾರ್

ಕೋಟ್ಯಾಂತರ ಕನ್ನಡಿಗರ ಆಶೀರ್ವಾದದೊಂದಿಗೆ, ಪ್ರಜಾಪ್ರಭುತ್ವದ ಆಶಯಕ್ಕೆ ಶಿರಬಾಗಿ ಸದನಕ್ಕೆ ಮುಖ್ಯಮಂತ್ರಿಯಾಗಿ ನನ್ನ ಮೊದಲ ಹೆಜ್ಜೆ

ಬೆಂಗಳೂರು: ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನ ಗುರುವಾರದಿಂದ ಆರಂಭವಾಗಿದ್ದು, ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿ ಅಧಿವೇಶನದಲ್ಲಿ ಭಾಗವಹಿಸುತ್ತಿರುವ ಡಿ.ಕೆ. ಶಿವಕುಮಾರ್ ಅವರು ಸದನವನ್ನು ಪ್ರವೇಶಿಸುವಾಗ ವಿಧಾನಸಭೆಯ ಹೊಸ್ತಿಲಿಗೆ ಮತ್ತು ಸಿಎಂ ಪೀಠಕ್ಕೆ ಶಿರಬಾಗಿ ನಮಸ್ಕರಿಸಿದರು.

"ಕೋಟ್ಯಾಂತರ ಕನ್ನಡಿಗರ ಆಶೀರ್ವಾದದೊಂದಿಗೆ, ಪ್ರಜಾಪ್ರಭುತ್ವದ ಆಶಯಕ್ಕೆ ಶಿರಬಾಗಿ ಸದನಕ್ಕೆ ಮುಖ್ಯಮಂತ್ರಿಯಾಗಿ ನನ್ನ ಮೊದಲ ಹೆಜ್ಜೆ" ಎಂದು ಡಿಕೆ ಶಿವಕುಮಾರ್ ಅವರು ಎಕ್ಸ್‌ನಲ್ಲಿ ಫೋಟೋ ಹಂಚಿಕೊಂಡಿದ್ದಾರೆ.

ಸಿಎಂ ಶಿವಕುಮಾರ್ ಅವರು ವಿರೋಧ ಪಕ್ಷದ ಬೆಂಚುಗಳತ್ತ ನಡೆದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮತ್ತು ವಿರೋಧ ಪಕ್ಷದ ಉಪ ನಾಯಕ ಅರವಿಂದ್ ಬೆಲ್ಲದ್ ಅವರನ್ನು ದಿನದ ಕಲಾಪದ ಆರಂಭದಲ್ಲಿ ಸ್ವಾಗತಿಸಿದರು.

ಮೇ 28 ರಂದು ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಜೂನ್ 3 ರಂದು ಶಿವಕುಮಾರ್ ಅವರು 13 ಸಚಿವರೊಂದಿಗೆ ಮೊದಲ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಆಗಸ್ಟ್ 3 ರಂದು ಮತ್ತೆ 19 ಸಚಿವರನ್ನು ತಮ್ಮ ಸಂಪುಟಕ್ಕೆ ಸೇರಿಸಿಕೊಳ್ಳುವ ಮೂಲಕ ಸಚಿವ ಸಂಪುಟವನ್ನು ವಿಸ್ತರಿಸಿದರು. ಈಗ ಡಿಕೆ ಶಿವಕುಮಾರ್ ನೇತೃತ್ವದ ಸಂಪುಟದ ಸಚಿವರ ಸಂಖ್ಯೆ 33ಕ್ಕೆ ತಲುಪಿದ್ದು, ಇನ್ನೂ ಒಂದು ಸ್ಥಾನ ಖಾಲಿ ಉಳಿದಿದೆ.

ವಿಪಕ್ಷದಿಂದ ಸಹಕಾರ ಕೋರಿದ ಡಿಕೆಶಿ

ವಿರೋಧ ಪಕ್ಷದ ನಾಯಕರು ಕುಳಿತುಕೊಂಡ ಸಾಲಿಗೆ ಸ್ವತಃ ಸಿಎಂ ಡಿಕೆ ಶಿವಕುಮಾರ್ ಆಗಮಿಸಿ ಕೈಕುಲುಕಿ ಸಹಕಾರ ಕೋರಿದರು. ವಿಧಾನಸಭೆ ಅಧಿವೇಶನದ ಆರಂಭದ ದಿನವೇ ವಿಪಕ್ಷಗಳ ಸಹಕಾರ ಕೇಳುವ ಮೂಲಕ ಗಮನ ಸೆಳೆದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿಪಕ್ಷಗಳ ಗದ್ದಲದಲ್ಲೇ ಅಧಿವೇಶನಕ್ಕೆ ತೆರೆ: ಲೋಕಸಭೆ ಶೇ 19, ರಾಜ್ಯಸಭೆ ಶೇ 39ರಷ್ಟು ಕಲಾಪ ಫಲಪ್ರದ: ಕಿರಣ್ ರಿಜಿಜು ಮಾಹಿತಿ

‘ನನ್ನನ್ನು ಅಸ್ಪೃಶ್ಯನಂತೆ ಕಂಡು ಶುದ್ಧೀಕರಣ ಮಾಡಿದರು’: ಬಿಜೆಪಿ ವಿರುದ್ಧ Mallikarjun Kharge ಕಿಡಿ, ನಡ್ಡಾ ಪ್ರತಿಕ್ರಿಯೆ

ರಾಯಚೂರು ಪೊಲೀಸರ ಭರ್ಜರಿ ಬೇಟೆ; ಉಗ್ರರೊಂದಿಗೆ ಸಂಪರ್ಕ, ಟೀಂ ಅಂಗಡಿ ಮಾಲೀಕ Sahil ಬಂಧನ, ಶಸ್ತ್ರಾಸ್ತ್ರ ಪೂರೈಕೆ ಚರ್ಚೆ ಮಾಡಿದ್ದ ಭೂಪ!

'Time To Move On'.. ವಿವಾದ ಮುಂದುವರಿಸುವ ಸಮಯವಲ್ಲ’: ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್ ಮಹತ್ವದ ಸೂಚನೆ

ಕೆಂಪುಕೋಟೆ ದಾಳಿ ಹಿಂದೆ ಅಲ್-ಖೈದಾ ಕೈವಾಡ; ವಿಶ್ವಸಂಸ್ಥೆಯ ಭದ್ರತಾ ಮಂಡಳಿ ವರದಿಯಲ್ಲಿ ಅಧಿಕೃತ ಉಲ್ಲೇಖ...!