ಬಿಜೆಪಿ ನಾಯಕರ ಪ್ರತಿಭಟನೆ  
ರಾಜಕೀಯ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ, ಜೆಡಿಎಸ್ ಬಿಗಿ ಪಟ್ಟು; ವಿಧಾನಸಭೆಯಲ್ಲಿ ತೀವ್ರ ಕೋಲಾಹಲ

ಇಂದು ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿ ಆರಂಭವಾಗುತ್ತಿದ್ದಂತೆ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಈ ವಿಷಯವನ್ನು ಪ್ರಸ್ತಾಪಿಸಿದವು.

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ದುರುಪಯೋಗದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ಅವರನ್ನು ತಕ್ಷಣವೇ ಸಂಪುಟದಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಪಕ್ಷಗಳು ಸೋಮವಾರ ವಿಧಾನಸಭೆಯಲ್ಲಿ ಪ್ರತಿಭಟನೆ ನಡೆಸಿದವು.

ಇಂದು ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿ ಆರಂಭವಾಗುತ್ತಿದ್ದಂತೆ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಈ ವಿಷಯವನ್ನು ಪ್ರಸ್ತಾಪಿಸಿದವು.

ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಮತ್ತು ಬಿಜೆಪಿ ಶಾಸಕ ಸುನಿಲ್ ಕುಮಾರ್ ಈ ವಿಷಯವನ್ನು ಪ್ರಸ್ತಾಪಿಸಿ, "ಭ್ರಷ್ಟ ಸಚಿವ" ರೊಂದಿಗೆ ಪ್ರಶ್ನೋತ್ತರ ಅವಧಿಯಲ್ಲಿ ಹೇಗೆ ಭಾಗವಹಿಸಬೇಕು ಎಂದು ಪ್ರಶ್ನಿಸಿದರು.

ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಇಲ್ಲವೇ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿದ ಅಶೋಕ್, "ಅವರನ್ನು ವಜಾಗೊಳಿಸದ ಹೊರತು ನಾವು ಸದನ ನಡೆಸಲು ಬಿಡುವುದಿಲ್ಲ. ಮುಖ್ಯಮಂತ್ರಿಗಳು ಅವರನ್ನು ತಕ್ಷಣವೇ ಸಂಪುಟದಿಂದ ವಜಾಗೊಳಿಸಬೇಕು" ಎಂದು ಆಗ್ರಹಿಸಿದರು.

"ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ, ನಾಗೇಂದ್ರ ಅವರಿಂದ ರಾಜೀನಾಮೆ ಪಡೆಯಲಾಗಿತ್ತು. ಈಗ ಅವರನ್ನು ಮತ್ತೆ ಏಕೆ ಸಂಪುಟಕ್ಕೆ ಸೇರಿಸಿಕೊಳ್ಳಲಾಗಿದೆ" ಎಂದು ಅಶೋಕ ಪ್ರಶ್ನಿಸಿದರು.

ಪ್ರಶ್ನೋತ್ತರ ಅವಧಿಗೆ ಅವಕಾಶ ನೀಡುವಂತೆ ಸ್ಪೀಕರ್ ಜಿ.ಎಸ್. ಪಾಟೀಲ್ ಅವರು ಪದೇ ಪದೇ ವಿನಂತಿಸಿದರೂ ಬಿಜೆಪಿ ಪ್ರತಿಭಟನೆ ನಡೆಸಿ, ಘೋಷಣೆಗಳನ್ನು ಕೂಗುತ್ತಿದ್ದರಿಂದ ಸದನವನ್ನು ಸ್ವಲ್ಪ ಸಮಯದವರೆಗೆ ಮುಂದೂಡಿದರು.

ಸದ್ಯ ಯೋಜನೆ ಮತ್ತು ಅಂಕಿಅಂಶ ಸಚಿವರಾಗಿರುವ ನಾಗೇಂದ್ರ ಅವರನ್ನು ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ಜುಲೈ 2024 ರಲ್ಲಿ ಇಡಿ ಬಂಧಿಸಿತ್ತು ಮತ್ತು ಅದೇ ವರ್ಷ ಅಕ್ಟೋಬರ್‌ನಲ್ಲಿ ಬೆಂಗಳೂರಿನ ವಿಶೇಷ ನ್ಯಾಯಾಲಯವು ಬಳ್ಳಾರಿಯ ಶಾಸಕರಿಗೆ ಜಾಮೀನು ನೀಡಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಮತ್ತು ಸಿಬಿಐ ಆರೋಪಪಟ್ಟಿಯಲ್ಲಿ ನಾಗೇಂದ್ರ ಅವರನ್ನು ಹೆಸರಿಸಿದೆ.

ಒಟ್ಟಿನಲ್ಲಿ, ನಾಗೇಂದ್ರ ರಾಜೀನಾಮೆ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿ-ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ವಾಕ್ಸಮರ ತೀವ್ರಗೊಂಡಿದ್ದು, ಮುಂದಿನ ದಿನಗಳಲ್ಲೂ ಈ ವಿಚಾರ ಅಧಿವೇಶನದಲ್ಲಿ ಮತ್ತಷ್ಟು ಕಾವು ಪಡೆಯುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ: ಕಾವೇರಿ ವಿಚಾರಣೆ ಒಂದು ವಾರ ಮುಂದೂಡಿಕೆ, CWMA ಆದೇಶ ಪಾಲಿಸಲು ಸೂಚನೆ..!

Jharkhand: ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಭೇಟಿಯಾಗಿ, ನೇಮಕಾತಿ ಪರೀಕ್ಷೆ ವಿವಾದ ಬಗೆಹರಿಸಿ: ಸಿಎಂ ಸೊರೆನ್‌ಗೆ ರಾಹುಲ್ ಗಾಂಧಿ ಮನವಿ

ದೂರು ನೀಡಲು ಕ್ಯೂಆರ್ ಕೋಡ್ ಬಿಡುಗಡೆ; ಹೋಟೆಲ್‌ಗಳ ಅಡುಗೆ ಕೋಣೆಗೆ ಸಿಸಿಟಿವಿ ಕಡ್ಡಾಯ, ಪಿಜಿ ಗಳಿಗೆ ಪ್ರತ್ಯೇಕ ಗೈಡ್‌ಲೈನ್ಸ್‌: ಖಾದರ್ ಮಹತ್ವದ ಘೋಷಣೆ

Rahul Gandhi ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಬ್ರೇಕ್! ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ಯುರೋಪ್‌ನಲ್ಲಿ ಯುದ್ಧದ ಭೀತಿ: ಉಕ್ರೇನ್‌ನಲ್ಲಿರುವ ಭಾರತದ ಬಿಲಿಯನೇರ್‌ ಉದ್ಯಮಿಯ ಕಾರ್ಖಾನೆ ಮೇಲೆ ರಷ್ಯಾ ದಾಳಿ!