ಬಿ ನಾಗೇಂದ್ರ  
ರಾಜಕೀಯ

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಬಿ.ನಾಗೇಂದ್ರ ಮುಂದು? CM ಡಿ.ಕೆ ಶಿವಕುಮಾರ್ ಏನಂದ್ರು?

ಸಚಿವ ಬಿ. ನಾಗೇಂದ್ರ ಅವರು ರಾಜೀನಾಮೆ ನೀಡಲು ಮುಂದಾಗಿದ್ದು, ಈ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಚರ್ಚಿಸಿದ್ದಾರೆ ಎನ್ನಲಾಗಿದೆ.

ವಾಲ್ಮೀಕಿ ನಿಗಮದಲ್ಲಿ ಭಾರೀ ಹಗರಣದ ಆರೋಪ ಹೊತ್ತಿರುವ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಪ್ರತಿಪಕ್ಷಗಳು ನಿರಂತರ ಒತ್ತಡ ಹಾಕುತ್ತಿವೆ. ಇತ್ತೀಚಿನ ವಿಧಾನಮಂಡಲದ ಮಳೆಗಾಲದ ಅಧಿವೇಶನಕ್ಕೂ ಅಡ್ಡಿಯಾಗಿ ನಿಗದಿತ ದಿನಕ್ಕಿಂತ ಮೂರು ದಿನ ಮೊದಲೇ ಮೊಟಕುಗೊಳಿಸಲಾಗಿತ್ತು. ಇದೀಗ ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆಗೆ ಇಂಗಿತ ವ್ಯಕ್ತಪಡಿಸಿದ್ದಾರೆ ಎನ್ನಲಾಗುತ್ತಿದೆ.

ಸಚಿವ ಬಿ. ನಾಗೇಂದ್ರ ಅವರು ರಾಜೀನಾಮೆ ನೀಡಲು ಮುಂದಾಗಿದ್ದು, ಈ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಚರ್ಚಿಸಿದ್ದಾರೆ ಎನ್ನಲಾಗಿದೆ. ನನ್ನನ್ನು ಅನಗತ್ಯವಾಗಿ ಟಾರ್ಗೆಟ್ ಮಾಡುತ್ತಿದ್ದಾರೆ. ನನ್ನಿಂದ ಪಕ್ಷಕ್ಕೆ ಮುಜುಗರ ಆಗೋದು ಬೇಡ ಎಂದು ನಾಗೇಂದ್ರ ಮುಖ್ಯಮಂತ್ರಿಗಳಿಗೆ ತಿಳಿಸಿದ್ದಾರೆ ಎನ್ನಲಾಗಿದೆ.

ಸಿಎಂ ಜೊತೆಗೆ 15 ನಿಮಿಷಗಳ ಕಾಲ ಸಚಿವ ನಾಗೇಂದ್ರ ದೂರವಾಣಿ ಸಂಭಾಷಣೆ ನಡೆಸಿದ್ದಾರೆ ಎನ್ನಲಾಗಿದೆ. ಆದರೆ ಹೈಕಮಾಂಡ್ ಜೊತೆ ಚರ್ಚಿಸಿ ತಿಳಿಸುವುದಾಗಿ ಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ, ಹೈಕಮಾಂಡ್‌ನೊಂದಿಗೆ ಚರ್ಚಿಸುವವರೆಗೆ ಯಾವುದೇ ನಿರ್ಧಾರ ಕೈಗೊಳ್ಳದಂತೆ ಮುಖ್ಯಮಂತ್ರಿಗಳು ನಾಗೇಂದ್ರ ಅವರಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಎಸ್‌ಐಟಿ ನಾಗೇಂದ್ರ ಅವರಿಗೆ ಕ್ಲೀನ್‌ಚಿಟ್ ನೀಡಿದ್ದರೂ, ಪಕ್ಷಕ್ಕೆ ಮುಜುಗರ ಉಂಟುಮಾಡಲು ತಾನು ಬಯಸುವುದಿಲ್ಲ ಎಂದು ನಾಗೇಂದ್ರ ಅವರು ಮುಖ್ಯಮಂತ್ರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ಸರ್ಕಾರದಲ್ಲಿ ಇಷ್ಟೊಂದು ಸಂಖ್ಯೆಯಲ್ಲಿ ದಲಿತರು ಸಚಿವರಾಗಿರುವುದನ್ನು ಬಿಜೆಪಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ. ರಾಜೀನಾಮೆ ಕೊಟ್ಟು ಪಕ್ಷ ಸಂಘಟನೆಯಲ್ಲಿ ಭಾಗಿಯಾಗಲು ನಿರ್ಧರಿಸಿದ್ದಾರೆ ಎಬ್ನಲಾಗುತ್ತಿದ್ದು, ಇಂದು ಸಂಜೆಯೇ ರಾಜೀನಾಮೆ ಕೊಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಸಿಎಂ ಡಿ ಕೆ ಶಿವಕುಮಾರ್ ಏನಂದ್ರು?

ನಮ್ಮ ಪಕ್ಷದ ಎಲ್ಲಾ ಶಾಸಕರು, ಸಚಿವರು ಶಿಸ್ತಿನ ಸಿಪಾಯಿಗಳು, ಹೈಕಮಾಂಡ್ ನಿರ್ದೇಶನದಂತೆ ಪಕ್ಷದ ಒಳಿತಿಗೆ ಕೆಲಸ ಮಾಡುತ್ತೇವೆ, ಈ ಬಗ್ಗೆ ನಾನು ಹೇಳುವುದಿಷ್ಟೇ ಎಂದು ಇಂದು ಬೆಳಗ್ಗೆ ತಮ್ಮ ನಿವಾಸದ ಮುಂದೆ ಮಾಧ್ಯಮ ಪ್ರತಿನಿಧಿಗಳಿಗೆ ಸಿಎಂ ಡಿ ಕೆ ಶಿವಕುಮಾರ್ ಪ್ರತಿಕ್ರಿಯಿಸಿದರು.

ನಾಳೆ ಸಿಎಂ ಡಿ ಕೆ ಶಿವಕುಮಾರ್ ದೆಹಲಿಗೆ ಹೋಗಿ ಹೈಕಮಾಂಡ್ ಜೊತೆ ಮಹತ್ವದ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿದ್ದ ರಿಗ್ಗಿಂಗ್ ವಾತಾವರಣದಲ್ಲಿ ನಿಜವಾಗಿಯೂ ಕೆಲಸ ಮಾಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ