ಸಚಿವ ಬಿ. ನಾಗೇಂದ್ರ 
ರಾಜಕೀಯ

ದಿಢೀರ್‌ ದೆಹಲಿಗೆ ತೆರಳಿದ ನಾಗೇಂದ್ರ; ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಭವಿಷ್ಯ!

ಈ ಎಲ್ಲಾ ಬೆಳವಣಿಗಗಳ ಮಧ್ಯೆ ಸಚಿವ ಬಿ. ನಾಗೇಂದ್ರ ಅವರು ಬುಧವಾರ ರಾತ್ರಿ ದಿಢೀರ್ ದೆಹಲಿಗೆ ತೆರಳಿದ್ದು, ತಾವು ರಾಜೀನಾಮೆಗೆ ಸಿದ್ಧ ಎಂಬ ಸುಳಿವು ನೀಡಿದ್ದಾರೆ ಎನ್ನಲಾಗಿದೆ.

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ದುರುಪಯೋಗದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ಪ್ರತಿಪಕ್ಷಗಳು ಪಟ್ಟು ಹಿಡಿದಿವೆ. ಅಲ್ಲದೆ ಈ ಪ್ರಕರಣದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಮಧ್ಯಪ್ರವೇಶಿಸಿದ್ದು, ನಾಗೇಂದ್ರ ಅವರು ಸಚಿವರಾಗಿ ಮುಂದುವರಿಯುವ ಕುರಿತು ಸರ್ಕಾರದಿಂದ ಸ್ಪಷ್ಟನೆ ಕೇಳಿ ಪತ್ರ ಬರೆದಿದ್ದಾರೆ ಎನ್ನಲಾಗಿದೆ.

ಈ ಎಲ್ಲಾ ಬೆಳವಣಿಗಗಳ ಮಧ್ಯೆ ಸಚಿವ ಬಿ. ನಾಗೇಂದ್ರ ಅವರು ಬುಧವಾರ ರಾತ್ರಿ ದಿಢೀರ್ ದೆಹಲಿಗೆ ತೆರಳಿದ್ದು, ತಾವು ರಾಜೀನಾಮೆಗೆ ಸಿದ್ಧ ಎಂಬ ಸುಳಿವು ನೀಡಿದ್ದಾರೆ ಎನ್ನಲಾಗಿದೆ.

ಸದ್ಯ ದೆಹಲಿಯ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿರುವ ನಾಗೇಂದ್ರ ಅವರು ಇಂದು ಕಾಂಗ್ರೆಸ್ ಹೈಕಮಾಂಡ್‌ನ ಪ್ರಮುಖ ನಾಯಕರನ್ನು ಭೇಟಿಯಾಗಲಿದ್ದಾರೆ.

ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಸರಣಿ ಬೆಳವಣಿಗೆಗಳು, ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣಕ್ಕೆ ಸಂಬಂಧಿಸಿದ ವಿವಾದಗಳು ಹಾಗೂ ವಿರೋಧ ಪಕ್ಷಗಳ ತೀವ್ರ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಅವರ ಈ ದಿಢೀರ್ ದೆಹಲಿ ಭೇಟಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ನಾಗೇಂದ್ರ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್‌ನ ಹಿರಿಯ ವರಿಷ್ಠರನ್ನು ಭೇಟಿ ಮಾಡಿ ತಮ್ಮ ಮೇಲಿನ ಆರೋಪಗಳು ಮತ್ತು ರಾಜ್ಯದ ಪ್ರಸ್ತುತ ರಾಜಕೀಯ ಪರಿಸ್ಥಿತಿಯ ಕುರಿತು ಚರ್ಚೆ ನಡೆಸುವ ಸಾಧ್ಯತೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

SIR ಅಕ್ರಮಗಳ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಹುಲ್ ಗಾಂಧಿ; TMC, RJD, ಮಿತ್ರಪಕ್ಷಗಳಿಂದಲೂ ಅರ್ಜಿ

'ದೇಶಕ್ಕೆ ಬೇಕಿರುವುದು ಸಾಕ್ಷ್ಯವೇ ಹೊರತು ಆರೋಪಗಳಲ್ಲ; ರಾಹುಲ್ ಗಾಂಧಿಯದ್ದು 'ಪೊಳ್ಳು' ಪ್ರತಿಭಟನೆ, ಆರೋಪ: ಬಿಜೆಪಿ ವಾಗ್ದಾಳಿ

ಗುಟ್ಟಾಗಿ ಮದುವೆಯಾಗಿದ್ದಾರಾ ನಟಿ ತ್ರಿಶಾ?: ಲಂಡನ್ ಸೆಲ್ಫಿಯಲ್ಲಿನ ಲಾಕೆಟ್ ನ ಗುಟ್ಟೇನು!

'ಬೆಂಗಳೂರಿನಲ್ಲಿ ಬ್ಲಿಂಕಿಟ್ ರೀತಿ ಕೆಲವೇ ನಿಮಿಷದಲ್ಲಿ ಗುಂಡಿ ಮುಚ್ಚುತ್ತೇವೆ': GBA ಮುಖ್ಯ ಆಯುಕ್ತ ಮಹೇಶ್ವರ ರಾವ್

ಟಿವಿ, ಒಟಿಟಿಗೆ ಬರುತ್ತಾ 'ಪ್ರೇಮದ ಊರಲಿ'? ಚಿತ್ರತಂಡ ಹೇಳಿದ್ದೇನು?