ರಾಜಕೀಯ

ಅಧಿಕಾರ ಹಂಚಿಕೆ ಒಪ್ಪಂದ ಆಗಿದೆ, ಡಿಕೆಶಿ ಏನೇ ಹೇಳಿದರೂ ಮಾಡಲು ನಾವು ಸಿದ್ಧ, ಪ್ರಾಣ ಬೇಕಾದ್ರೂ ಕೊಡ್ತೀವಿ: ಬಸವರಾಜ್ ಶಿವಗಂಗಾ

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಕಾಂಗ್ರೆಸ್‌ನ ಎಲ್ಲಾ 139 ಶಾಸಕರ ಬೆಂಬಲವಿದೆ ಎಂದರು.

ದಾವಣಗೆರೆ: ಕರ್ನಾಟಕ ಕಾಂಗ್ರೆಸ್ ನಲ್ಲಿ ಮತ್ತೆ ನಾಯಕತ್ವ ಬದಲಾವಣೆ ಸುದ್ದಿಯಾಗುತ್ತಿದೆ. ನಿನ್ನೆ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆ ನೀಡಿದ್ದರು.

ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಚನ್ನಗಿರಿ ಶಾಸಕ ಬಸವರಾಜ ಶಿವಗಂಗಾ, ಅಧಿಕಾರ ಹಂಚಿಕೆ ಕುರಿತ ಒಪ್ಪಂದ ಈಗಾಗಲೇ ಆಗಿದೆ ಎಂಬ ಮಾಹಿತಿ ನಮಗೆ ಸಿಕ್ಕಿದೆ ಎಂದಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಕಾಂಗ್ರೆಸ್‌ನ ಎಲ್ಲಾ 139 ಶಾಸಕರ ಬೆಂಬಲವಿದೆ. ಇದಕ್ಕೂ ಮೀರಿ ನಮ್ಮಂತಹ 40-50 ಯುವ ಶಾಸಕರು ಡಿಕೆಶಿ ಏನೇ ಹೇಳಿದರೂ ಮಾಡಲು ಸಿದ್ಧರಾಗಿದ್ದೇವೆ. ಅಗತ್ಯವಿದ್ದರೆ ಪ್ರಾಣ ಕೊಡಲೂ ಸಿದ್ಧ ಎಂದರು.

ಅಧಿಕಾರ ಹಂಚಿಕೆ ಕುರಿತು ಒಪ್ಪಂದ ಆಗಿರುವ ಬಗ್ಗೆ ನನಗೆ ಸ್ಪಷ್ಟ ಮಾಹಿತಿ ಇದೆ. ಈ ಬಗ್ಗೆ ಹೈಕಮಾಂಡ್ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದರು. ಯತೀಂದ್ರ ಸಿದ್ದರಾಮಯ್ಯ ಪದೇಪದೇ ನಾಯಕತ್ವ ವಿಚಾರವಾಗಿ ಹೇಳಿಕೆ ನೀಡುತ್ತಿರುವುದು ಪಕ್ಷದ ಒಳಚರ್ಚೆಗೆ ಕಾರಣವಾಗಿದೆ. ಯತೀಂದ್ರ ಹೇಳಿಕೆ ಬಗ್ಗೆ ಪಕ್ಷದ ಹೈಕಮಾಂಡ್‌ವೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್